Homeಸಿನಿಮಾಕ್ರೀಡೆಭಾರತಕ್ಕೆ ಮೂರನೇ ಚಿನ್ನ: 313ಕೆಜಿ ಭಾರ ಎತ್ತಿ ಕಾಮನ್‌ವೆಲ್ತ್ ದಾಖಲೆ ಬರೆದ ಅಚಿಂತ್ ಶಿಯುಲಿ

ಭಾರತಕ್ಕೆ ಮೂರನೇ ಚಿನ್ನ: 313ಕೆಜಿ ಭಾರ ಎತ್ತಿ ಕಾಮನ್‌ವೆಲ್ತ್ ದಾಖಲೆ ಬರೆದ ಅಚಿಂತ್ ಶಿಯುಲಿ

- Advertisement -
- Advertisement -

ಕಾಮನ್‌ವೆಲ್ತ್‌ ಕ್ರೀಡಾಕೂಟದ ಮೂರನೇ ದಿನ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭಿಸಿದೆ. ವೇಟ್ ಲಿಫ್ಟರ್ ಅಚಿಂತ್ ಶಿಯುಲಿ 73ಕೆಜಿ ವಿಭಾಗದಲ್ಲಿ 313 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಜಯಿಸಿದ್ದು ಅಲ್ಲದೆ ಕಾಮನ್‌ವೆಲ್ತ್‌ನಲ್ಲಿ ದಾಖಲೆ ಬರೆದಿದ್ದಾರೆ.

20 ವರ್ಷದ ಅಚಿಂತ್ ಶಿಯುಲಿ ಸ್ನಾಚ್‌ ಸ್ಪರ್ಧೆಯಲ್ಲಿ 140 ಮತ್ತು 143ಕೆಜಿ ಭಾರ ಎತ್ತಿ ದಾಖಲೆ ನಿರ್ಮಿಸಿದರು. ನಂತರ ಕ್ಲೀನ್ ಅಂಡ್ ಜರ್ಕ್ ಸ್ಪರ್ಧೆಯಲ್ಲಿ 166 ಮತ್ತು 170 ಕೆಜಿ ಭಾರ ಎತ್ತಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಕೋಲ್ಕತ್ತಾದವರಾದ ಶಿಯುಲಿ 143 ಮತ್ತು 170 ಕೆಜಿ (ಒಟ್ಟು 313ಕೆಜಿ) ಭಾರ ಎತ್ತುವ ಮೂಲಕ ದಾಖಲೆ ಮಾಡಿದ್ದಲ್ಲದೆ ತಮ್ಮ ಮೊದಲ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿಯೇ ಚಿನ್ನ ಗೆದ್ದರು.

ಮಲೇಷ್ಯಾದ ಎರ್ರಿ ಹಿದಾಯತ್ ಮುಹಮ್ಮದ್ 303 ಕೆಜಿ (138 ಕೆಜಿ 165 ಕೆಜಿ) ಭಾರ ಎತ್ತಿ ಬೆಳ್ಳಿ ಪದಕ ಗಳಿಸಿದರೆ, ಕೆನಡಾದ ಶಾದ್ ಡಾರ್ಸಿಗ್ನಿ ಒಟ್ಟು 298 ಕೆಜಿ (135 ಕೆಜಿ 163 ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನ ಪಡೆದರು.

ಭಾರತಕ್ಕೆ ವೇಟ್ ಲಿಫ್ಟಿಂಗ್‌ನಲ್ಲಿ 6 ಪದಕ

ಮೂರು ಚಿನ್ನ, ಎರಡು ಬೆಳ್ಳಿ ಮತ್ತು ಒಂದು ಕಂಚು ಸೇರಿ ಇದುವರೆಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಒಟ್ಟು 6 ಪದಕ ಗೆದ್ದಿದೆ. ವಿಶೇ‍ಷವೆಂದರೆ ಆ ಎಲ್ಲಾ ಪದಕಗಳು ವೇಟ್ ಲಿಫ್ಟಿಂಗ್ ವಿಭಾಗದಲ್ಲಿಯೇ ದೊರಕಿವೆ. ವಿವರ ಕೆಳಗಿನಂತಿದೆ.

ಸಂಕೇತ್ ಸರ್ಗರ್: ಬೆಳ್ಳಿ

ಮೀರಾಬಾಯಿ ಚಾನು: ಚಿನ್ನ

ಬಿಂದ್ಯಾರಾಣಿ ದೇವಿ: ಬೆಳ್ಳಿ

ಜೆರೆಮಿ ಲಾಲ್ರಿನ್ನುಂಗಾ: ಚಿನ್ನ

ಗುರುರಾಜ ಪೂಜಾರಿ: ಕಂಚು

ಅಚಿಂತ್ ಶಿಯುಲಿ: ಚಿನ್ನ

ಈ ಬಾರಿಯ ಒಟ್ಟಾರೆ ಪದಕ ಗಳಿಸಿದ ದೇಶಗಳ ಪಟ್ಟಿಯಲ್ಲಿಯೂ ಭಾರತ 6ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: $1=₹80 ಕಾರಣವೇನು ಮತ್ತು ಪರಿಣಾಮವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...