Homeಕರ್ನಾಟಕರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆ ನಡೆಸಿದ ಎನ್‌ಐಎ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆ ನಡೆಸಿದ ಎನ್‌ಐಎ

- Advertisement -
- Advertisement -

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.

ತೀರ್ಥಹಳ್ಳಿ ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ ಪ್ರಕರಣದಲ್ಲಿ ಶಂಕಿತರಾಗಿರುವ ವ್ಯಕ್ತಿಗಳ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗಿದೆ.

ಕಳೆದ 10 ದಿನದ ಹಿಂದೆ ಮೊಬೈಲ್‌ ಅಂಗಡಿಯಲ್ಲಿ ಕೆಲಸ ಮಾಡುವ ಇಬ್ಬರು ಯುವಕರಿಗೆ ಸಂಬಂಧಿಸಿದ ಹಲವು ಅಂಗಡಿ ಹಾಗೂ ಮನೆಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್‌ಐಎ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ.

ಮಾ.1,2023ರಂದು ಬೆಂಗಳೂರಿನ ವೈಟ್‌ಫೀಲ್ಡ್‌ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೀಗ ಬಿಜೆಪಿ ಮುಖಂಡನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿರುವುದು ಹೊಸ ಬೆಳವಣಿಗೆಯಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, “ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ” ಎಂದಿದ್ದಾರೆ.

“ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥ ಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದಾರೆ.

“ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘಿಸಿ ಶಾಲಾ-ಕಾಲೇಜುಗಳಲ್ಲಿ ಮತ ಯಾಚಿಸಿದ ಚಾಮರಾಜನಗರ ಬಿಜೆಪಿ ಅಭ್ಯರ್ಥಿ: ಕಾಂಗ್ರೆಸ್ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...