Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...