Homeಮುಖಪುಟಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ಹೈದರಾಬಾದ್‌ನಲ್ಲಿ ಪ್ರವಾಹ ಬಂದು, ಕೊಟ್ಯಾಂತರ ಮೌಲ್ಯದ ಹಾನಿಯಾಗಿದೆ. ಪ್ರವಾಹದ ನಂತರ ನಗರಕ್ಕೆ ಬಿಜೆಪಿಯ ಕೇಂದ್ರ ಸರ್ಕಾರ ಏನು ಪರಿಹಾರ ನೀಡಿದೆ..?

- Advertisement -
- Advertisement -

ಬಿಜೆಪಿಗೆ ತನ್ನ ಹೇಳಿಕೆ ಬಗ್ಗೆ ಪ್ರಾಮಾಣಿಕತೆ ಇದ್ದರೆ ಚುನಾವಣಾ ಮತದಾರರ ಪಟ್ಟಿಯಲ್ಲಿ 1,000 ರೋಹಿಂಗ್ಯಾಗಳ ಹೆಸರುಗಳನ್ನು ತೋರಿಸಲಿ ಎಂದು ಆಲ್ ಇಂಡಿಯ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಮತದಾರರ ಪಟ್ಟಿಯಲ್ಲಿ 30,000 ರಿಂದ 40,000 ರೋಹಿಂಗ್ಯಾಗಳಿದ್ದಾರೆ ಎಂದು ಬಿಜೆಪಿ ಹೇಳುತ್ತಿದೆ. ಪಟ್ಟಿಯಲ್ಲಿ 30,000 ರೋಹಿಂಗ್ಯಾಗಳಿದ್ದರೆ, ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ? ಇಷ್ಟು ರೋಹಿಂಗ್ಯಾಗಳನ್ನು ಹೇಗೆ ಪಟ್ಟಿ ಮಾಡಲಾಗಿದೆ? ಎಂದು ನೋಡುವುದು ಅವರ ಕೆಲಸವಲ್ಲವೇ ” ಎಂದು ಓವೈಸಿ ಪ್ರಶ್ನಿಸಿದ್ದಾರೆ.

“ಪ್ರತಿದಿನ ಒಬ್ಬರಲ್ಲ, ಒಬ್ಬರು ದೆಹಲಿಯಿಂದ ಹೈದರಾಬಾದ್‌ಗೆ ಬಂದಿಳಿಯುತ್ತಿದ್ದಾರೆ. 2019 ರಿಂದ ಅಭಿವೃದ್ಧಿ ಕೆಲಸಗಳಿಗಾಗಿ ಹೈದರಾಬಾದ್‌ಗೆ ಕೇಂದ್ರದ ಬಿಜೆಪಿ ಎಷ್ಟು ಹಣ ಬಿಡುಗಡೆ ಮಾಡಿದೆ ಎಂದು ಕೇಳಿದರೆ ಒಬ್ಬರ ಬಳಿಯೂ ಉತ್ತರವಿಲ್ಲ” ಎಂದು ಅವರು ವ್ಯಂಗ್ಯವಾಡಿದ್ದಾರೆ.

’ಹೈದರಾಬಾದ್‌ನಲ್ಲಿ ಪ್ರವಾಹ ಬಂದು, ಕೊಟ್ಯಾಂತರ ಮೌಲ್ಯದ ಹಾನಿಯಾಗಿದೆ. ಪ್ರವಾಹದ ನಂತರ ನಗರಕ್ಕೆ ಬಿಜೆಪಿಯ ಕೇಂದ್ರ ಸರ್ಕಾರ ಏನು ಪರಿಹಾರ ನೀಡಿದೆ..?” ಎಂದು  ಒವೈಸಿ ಹೈದರಾಬಾದ್‌ನ ಮಲಕ್ಪೇಟೆ ಕ್ಷೇತ್ರದ ಅಜಂಪುರಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

“ಬಿಜೆಪಿ ಈಗ ನಿರಾಶೆಗೊಂಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವರು ಇಲ್ಲಿಗೆ ಬಂದು ಜನರು ಎಐಎಂಐಎಂಗೆ ಮತ ಹಾಕಿದರೆ ಅದು ಟಿಆರ್‌ಎಸ್‌ಗೆ ಲಾಭವಾಗಲಿದೆ ಎಂದು ಹೇಳುತ್ತಾರೆ. ಮತ್ತೆ ಕೆಲವರು ನನ್ನನ್ನು ಮುಹಮ್ಮದ್ ಅಲಿ ಜಿನ್ನಾರಿಗೆ ಹೋಲಿಸಿ ಮಾತನಾಡುತ್ತಾರೆ, ಎಐಐಎಂಐಎಂ ಮೂಲಭೂತವನ್ನು ಉತ್ತೇಜಿಸುತ್ತದೆ ಎಂದು ಹೇಳಿಕೊಳ್ಳುತ್ತಾರೆ. ಸುಳ್ಳು ಆರೋಪಗಳನ್ನು ಮಾಡದೇ ಅವರ ಬಳಿ ಹೇಳಲು ಬೇರೆ ಏನೂ ಇಲ್ಲ” ಎಂದು ಒವೈಸಿ ಹೇಳಿದ್ದಾರೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ (GHMC) ಚುನಾವಣೆಯ ಪ್ರಚಾರದಲ್ಲಿ ಸಂಸದ ಓವೈಸಿ ಅವರನ್ನು ಪಾಕಿಸ್ತಾನದ ರಾಷ್ಟ್ರಪಿತ ಮುಹಮ್ಮದ್ ಅಲಿ ಜಿನ್ನಾರಿಗೆ ಹೋಲಿಸಿ ಮಾತಾಡಿರುವುದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ದ್ವೇಷ ಸೃಷ್ಟಿಸುವುದು ಬಿಜೆಪಿ ಉದ್ದೇಶವಾಗಿದೆ. ಈ ಹೋರಾಟ ಹೈದರಾಬಾದ್ ಮತ್ತು ಭಾಗ್ಯನಗರದ ನಡುವೆ ನಡೆಯುತ್ತಿದೆ. ಯಾರು ಗೆಲ್ಲಬೇಕೆಂದು ನಿರ್ಧರಿಸುವುದು ನಿಮ್ಮ ಜವಾಬ್ದಾರಿ’ ಎಂದು ಓವೈಸಿ ಹೇಳಿದ್ದಾರೆ. ನಿನ್ನೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೈದರಾಬಾದ್ ಹೆಸರನ್ನು ಭಾಗ್ಯನಗರ ಎಂದು ಬದಲಿಸಬೇಕು ಎಂಬ ಹೇಳಿಕೆ ನೀಡಿ ಟ್ರೋಲ್‌ಗೊಳಗಾಗಿದ್ದರು.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಮುಂದುವರಿದು ಮಾತನಾಡಿದ ತೇಜಸ್ವಿ ಸೂರ್ಯ, “ಜಿನ್ನಾ ಅವರ ಅವತಾರವಾದ ಒವೈಸಿಗೆ ನೀಡುವ ಪ್ರತಿ ಮತವು ಭಾರತದ ವಿರುದ್ಧವಾಗಿದೆ” ಎಂದು ಹೇಳಿದ್ದರು.


ಇದನ್ನೂ ಓದಿ: ಮೊದಲು ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ತನ್ನಿ, ನಂತರ ಕರಾಚಿಯ ಬಗ್ಗೆ ಯೋಚಿಸಿ: ಸಂಜಯ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...