Homeಮುಖಪುಟ‘ಪ್ರಜಾಪ್ರಭುತ್ವದಲ್ಲಿ ಇದು ಕಳವಳಕಾರಿ, ಸಿಜೆಪಿ ಪ್ರಶ್ನೆಗಳಿಗೆ ನನ್ನ ಬೆಂಬಲವಿದೆ’: CJP ನಾಯಕರ ಬೆನ್ನಿಗೆ ನಿಂತ ತಮಿಳುನಾಡು...

‘ಪ್ರಜಾಪ್ರಭುತ್ವದಲ್ಲಿ ಇದು ಕಳವಳಕಾರಿ, ಸಿಜೆಪಿ ಪ್ರಶ್ನೆಗಳಿಗೆ ನನ್ನ ಬೆಂಬಲವಿದೆ’: CJP ನಾಯಕರ ಬೆನ್ನಿಗೆ ನಿಂತ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ!

- Advertisement -
- Advertisement -

ಕಾಕ್‌ರೋಚ್ ಜನತಾ ಪಾರ್ಟಿಯ ಯುವ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸುತ್ತಿರುವ ಕಸ್ಟಡಿ ಮತ್ತು ಕಾನೂನು ಪ್ರಕ್ರಿಯೆಗಳ ಕುರಿತು ಪ್ರಜಾಪ್ರಭುತ್ವವಾದಿ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಅಕ್ಟೋಬರ್ 20, 2026 ರ ಮಂಗಳವಾರದಂದು ಸುದ್ದಿಗಾರರೊಂದಿಗೆ ಮಾತನಾಡಿ ದೆಹಲಿ ಪೊಲೀಸರ ಧೋರಣೆಯನ್ನು ಕಟುವಾಗಿ ವಿಮರ್ಶಿಸಿದ್ದಾರೆ. ಪ್ರಜಾಪ್ರಭುತ್ವ ಮತ್ತು ಕಾನೂನಿನ ಆಡಳಿತವಿರುವ ದೇಶದಲ್ಲಿ ದೆಹಲಿ ಪೊಲೀಸರು ಕಾನೂನನ್ನು ಕೈಗೆತ್ತಿಕೊಂಡಂತೆ ವರ್ತಿಸುತ್ತಿದ್ದಾರೆ ಹಾಗೂ ಸಿಜೆಪಿ ಎತ್ತಿರುವ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರಿಸಬೇಕೆ ಹೊರತು ಪ್ರತಿಭಟನಾಕಾರರನ್ನು ಕಸ್ಟಡಿಯಲ್ಲಿಟ್ಟು ಪೀಡಿಸುವುದಲ್ಲ ಎಂದು ಅವರು ಹೇಳಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಜಂಟಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಿಜೆಪಿ ಸಕ್ರಿಯ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರನ್ನು ದೆಹಲಿ ನ್ಯಾಯಾಲಯವು ಮತ್ತೆ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಅಣ್ಣಾಮಲೈ ಈ ಪ್ರತಿಕ್ರಿಯೆ ನೀಡಿದ್ದಾರೆ.

ಸಿಜೆಪಿ ಎತ್ತಿದ ಪ್ರಶ್ನೆಗಳಿಗೆ ನನ್ನ ಪೂರ್ಣ ಬೆಂಬಲವಿದೆ: ಅಣ್ಣಾಮಲೈ

ಮಾಧ್ಯಮಗಳೊಂದಿಗೆ ಮಾತನಾಡಿದ ಕೆ. ಅಣ್ಣಾಮಲೈ, “ನಮ್ಮ ದೇಶದ ಪ್ರಸ್ತುತ ಪರಿಸ್ಥಿತಿ ಕಂಡು ನನಗೆ ತೀವ್ರ ಆತಂಕವಾಗುತ್ತಿದೆ. ದೆಹಲಿ ಪೊಲೀಸರು ಕಾನೂನನ್ನು ತಮ್ಮ ಕೈಗೆತ್ತಿಕೊಂಡಿದ್ದಾರೆ ಎಂದೇ ನನಗನ್ನಿಸುತ್ತಿದೆ. ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಧೀಶರು ಸ್ವತಃ ವಿಚಾರಣೆಯಿಂದ ಹಿಂದೆ ಸರಿಯುವಂತಾಗಿದೆ, ಸಿಜೆಪಿ ನಾಯಕರ ಪರ ವಾದ ಮಂಡಿಸಬೇಕಾದ ವಕೀಲರ ವಿಚಾರದಲ್ಲೂ ಗೊಂದಲ ಸೃಷ್ಟಿಸಿ, ಅವರ ಕಸ್ಟಡಿಯನ್ನು ಸುಮ್ಮನೆ ಎಳೆಯಲಾಗುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ಅವರು, “ಸಿಜೆಪಿ ಆಯೋಜಿಸುವ ಕೆಲವು ವಿನೂತನ ಅಥವಾ ವಿಚಿತ್ರ ಪ್ರತಿಭಟನಾ ಶೈಲಿಗಳನ್ನು ನಾನು ಒಪ್ಪದಿರಬಹುದು. ಆದರೆ, ಅವರು ಸಾರ್ವಜನಿಕ ವೇದಿಕೆಯಲ್ಲಿ ಎತ್ತುತ್ತಿರುವ ಗಂಭೀರ ಪ್ರಶ್ನೆಗಳಿಗೆ ನನ್ನ ಪೂರ್ಣ ಬೆಂಬಲವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರು ಮತ್ತು ಯುವಕರು ಕೇಳುವ ಪ್ರಶ್ನೆಗಳಿಗೆ ಸರ್ಕಾರವೇ ಸರಿಯಾಗಿ ಉತ್ತರ ನೀಡಬೇಕಿದೆ. ಅದನ್ನು ಬಿಟ್ಟು ಸಣ್ಣಪುಟ್ಟ ನಿಯಮ ಉಲ್ಲಂಘನೆಗಳಿಗಾಗಿ ಅವರನ್ನು ಬಂಧಿಸುವುದು, ಅವರು ಜೈಲಿನಲ್ಲಿ ಸಮಯ ಕಳೆಯುವಂತೆ ನಿರಂತರ ಕಿರುಕುಳ ನೀಡುವುದು ಸಿಜೆಪಿ ನಾಯಕರನ್ನು ಇನ್ನಷ್ಟು ಸಮಾಜಮುಖಿಯಾಗಿ ಹಾಗೂ ಶಕ್ತಿಶಾಲಿಯಾಗಿ ಬೆಳೆಯುವಂತೆ ಮಾಡುತ್ತದೆ. ದೆಹಲಿ ಪೊಲೀಸರು ಈ ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿ ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ದೊಡ್ಡ ದ್ರೋಹವಾಗಿದೆ” ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರದ ನೀತಿಗಳನ್ನು ಪ್ರಶ್ನಿಸಿ ಸಿಜೆಪಿ ನಡೆಸುತ್ತಿರುವ ಹೋರಾಟವನ್ನು ಹತೋಟಿಗೆ ತರಲು ಪೊಲೀಸ್ ಬಲಪ್ರಯೋಗ ಮತ್ತು ಕಸ್ಟಡಿ ವಿಸ್ತರಣೆಯಂತಹ ತಂತ್ರಗಳನ್ನು ದೆಹಲಿ ಪೊಲೀಸರು ಅನುಸರಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿದೆ. ಪ್ರಜಾಸತ್ತಾತ್ಮಕವಾಗಿ ಪ್ರಶ್ನಿಸುವ ಹಕ್ಕನ್ನು ಹತ್ತಿಕ್ಕುತ್ತಿರುವ ದೆಹಲಿ ಪೊಲೀಸರು ಮತ್ತು ಸರ್ಕಾರದ ಕ್ರಮಗಳನ್ನು ಸ್ವತಃ ಆಡಳಿತ ಪಕ್ಷದ ಮಾಜಿ ರಾಜ್ಯಾಧ್ಯಕ್ಷರೇ ಬಹಿರಂಗವಾಗಿ ಖಂಡಿಸಿರುವುದು ಆಡಳಿತಾರೂಢ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜೆಎನ್‌ಯು : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (JNUSU) ಸದಸ್ಯರು ಮಂಗಳವಾರ (ಅಕ್ಟೋಬರ್ 20) ತಮ್ಮ 17 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಡೀನ್ ನೇತೃತ್ವದ ಸಮಿತಿಯ ನಡುವೆ...

ಯೇಸುವಿನ ದರ್ಶನದ ಹೆಸರಲ್ಲಿ 191 ಜನರ ಮಾರಣಹೋಮ : ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಸೇರಿ 29 ಮಂದಿ ತಪ್ಪಿತಸ್ಥರು ಎಂದ ನ್ಯಾಯಾಲಯ  

ಬರೋಬ್ಬರಿ 191 ಜನರ ಸಾವಿಗೆ ಕಾರಣನಾದ ಕೀನ್ಯಾದ ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಮತ್ತು ಆತನ ಸಹಚರರನ್ನು ಸೋಮವಾರ (ಅಕ್ಟೋಬರ್ 19) ನ್ಯಾಯಾಲಯ ತಪ್ಪಿತಸ್ಥರು ಎಂದು ಘೋಷಿಸಿದ್ದು, ನವೆಂಬರ್ 6ರಂದು ಶಿಕ್ಷೆ ಪ್ರಮಾಣ...

ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ)...

‘ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ’: ಎಸ್ಐಆರ್ ವಿರೋಧಿಸಿ ಅ. 28ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನೆಗೆ ಪ್ರಕಾಶ್ ಅಂಬೇಡ್ಕರ್ ಕರೆ

ಮುಂಬೈ: ಮತದಾನದ ಹಕ್ಕು ಕೇವಲ ರಾಜಕೀಯ ಪ್ರಕ್ರಿಯೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಈ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ,...

ಹೋರಾಟಗಾರನ ಕೊಲೆ, ಅಮಿತ್ ಶಾ ಭೇಟಿ : ಪಂಜಾಬ್‌ನಲ್ಲಿ ಎಎಪಿಗೆ ಮುಳುವಾಗುತ್ತಾ ಡ್ರಗ್ ವಿರೋಧಿ ಜನಾಕ್ರೋಶ?

ಕಳೆದ ವಾರ ಪಂಜಾಬ್‌ನ ಮಾನಸಾ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್ ಮಾಲೀಕನೊಬ್ಬ 42 ವರ್ಷದ ಮಾದಕವಸ್ತು ವಿರೋಧಿ ಕಾರ್ಯಕರ್ತ (Anti-Drugs Activist's) ಪರ್ವಿಂದರ್ ಸಿಂಗ್ ಝೋಟಾ ಅವರನ್ನು ಹತ್ಯೆ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ....

ಜಂತರ್ ಮಂತರ್ ಅತಿಕ್ರಮಣ ಆರೋಪ: ಸಿಜೆಪಿಯ ಅಶುತೋಷ್, ಸೌರವ್ ಬಂಧನ ಮುಂದುವರಿಕೆ, ಅಪರಾಧ ವಿಭಾಗಕ್ಕೆ ತನಿಖೆ ವರ್ಗಾವಣೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಹ-ಸಂಚಾಲಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ವಿರುದ್ಧ ದಾಖಲಾದ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು...

‘ವೋಟ್ ಚೋರಿ ಸರ್ಕಾರ’ದಿಂದ ಗ್ರಾಮೀಣ ಕಾರ್ಮಿಕರ ಕೂಲಿ ಕಳ್ಳತನವೂ ಪರಿಪೂರ್ಣ: ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಬದಲಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ಗ್ರಾಮೀಣ ಭಾರತದ ಬಡವರು ಮತ್ತು...

ದೆಹಲಿ ಪೊಲೀಸರಿಂದ ಎನ್‌ಎಸ್‌ಯುಐ ನಾಯಕರ ಮೇಲೆ ಹಲ್ಲೆ : ಜೈಪುರ ಕಮಿಷನರ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ

ರಾಜಸ್ಥಾನ ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ರಾಜ್ಯ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಸೇರಿದಂತೆ ಹಲವಾರು ಶಾಸಕರು ಜೈಪುರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಸೋಮವಾರ (ಅಕ್ಟೋಬರ್ 19) ರಾತ್ರಿಯಿಡೀ ಧರಣಿ ಸತ್ಯಾಗ್ರಹ...

ಸೋಶಿಯಲ್ ಮೀಡಿಯಾ ಅಕೌಂಟ್ ಬ್ಲಾಕ್: ಬಳಕೆದಾರರಿಗೆ ಸರ್ಕಾರದ ನೋಟಿಸ್‌ ಪ್ರತಿ ನೀಡುವುದು ಕಡ್ಡಾಯ ಎಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌

ಸಾಮಾಜಿಕ ಜಾಲತಾಣಗಳಲ್ಲಿನ ಖಾತೆ ಅಥವಾ ವಿಷಯಗಳನ್ನು (Content) ತಡೆಹಿಡಿಯಲು ಸರ್ಕಾರವು ಮಧ್ಯವರ್ತಿ ಸಂಸ್ಥೆಗಳಿಗೆ (ಫೇಸ್‌ಬುಕ್, ಟ್ವಿಟರ್ ಇತ್ಯಾದಿ) ಸೂಚನೆ ಅಥವಾ ಆದೇಶ ರವಾನಿಸಿದ ತಕ್ಷಣ, ಆ ಆದೇಶ ಅಥವಾ ನೋಟಿಸ್‌ನ ಪ್ರತಿಯನ್ನು ಸಂಬಂಧಪಟ್ಟ...

ಉತ್ತರ ಪ್ರದೇಶ| ದೇವಾಲಯದಲ್ಲಿ ಪೂಜೆ ಸಲ್ಲಿಸಿದ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಧಾರ್ಮಿಕ ಸ್ಥಳದಲ್ಲಿ ವಾಸಿಸುತ್ತಿರುವುದಕ್ಕೆ ಮತ್ತು ಅವರು ಪೂಜೆ ಸಲ್ಲಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರು ವ್ಯಕ್ತಿಗಳು, ಅವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ಸಾಲದ್ದಕ್ಕೆ ಅವರನ್ನು ದೇವಾಲಯದೊಳಗೆ...