Homeಮುಖಪುಟಉತ್ತರ ಪ್ರದೇಶದಲ್ಲಿ ಹೀಗೊಂದು ಅಮಾನವೀಯ ಘಟನೆ; ಕಸದ ವಾಹನದಲ್ಲಿ ಶವ ಸಾಗಾಟ

ಉತ್ತರ ಪ್ರದೇಶದಲ್ಲಿ ಹೀಗೊಂದು ಅಮಾನವೀಯ ಘಟನೆ; ಕಸದ ವಾಹನದಲ್ಲಿ ಶವ ಸಾಗಾಟ

- Advertisement -
- Advertisement -

ಲಕ್ನೋದ ಸರಕಾರಿ ಕಚೇರಿಯ ಮುಂದೆ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬನ ಶವವನ್ನು ತ್ಯಾಜ್ಯ ಸಾಗಿಸುವ ವಾಹನಕ್ಕೆ ತುಂಬಿದ ಅಮಾನವೀಯ ಘಟನೆ ನಡೆದಿದ್ದು, ವಿಡಿಯೊ ವೈರಲಾಗುತ್ತಿದ್ದಂತೆ ಎಚ್ಚೆತ್ತಿರುವ ಉತ್ತರ ಪ್ರದೇಶ ಸರ್ಕಾರ ಮೂವರು ಪೊಲೀಸರು ಸೇರಿದಂತೆ ಏಳು ಜನರನ್ನು ಅಮಾನತುಗೊಳಿಸಿದೆ.

ಮೃತಪಟ್ಟ ವ್ಯಕ್ತಿಯನ್ನು ಮೊಹಮ್ಮದ್ ಅನ್ವರ್ (45) ಎಂದು ಗುರುತಿಸಲಾಗಿದ್ದು. ಬಲರಾಂಪುರದ ಉತ್ರೂಲಾ ತಹಸೀಲ್ ಗೇಟ್ ಬಳಿ ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಬಲರಾಂಪುರದ ನಿವಾಸಿಯಾದ ಅನ್ವರ್ ಸರ್ಕಾರಿ ಕಚೇರಿಗೆ ತೆರಳಿದ ವೇಳೆ ಗೇಟ್ ಬಳಿ ಕುಸಿದು ಬಿದ್ದು ಮೃತಪಟ್ಟಿದ್ದರು.

ಕಚೇರಿಯ ಗೇಟ್ ಬದಿಯಲ್ಲೇ ಆ್ಯಂಬುಲೆನ್ಸ್ ವಾಹನ ನಿಲ್ಲಿಸಲಾಗಿತ್ತು. ಆದರೆ ಕೊರೋನ ವೈರಸ್ ಸೋಂಕು ಹರಡುವ ಭೀತಿಯಿಂದ ಶವವನ್ನು ಅದರಲ್ಲಿ ಸಾಗಿಸಲು ನಿರಾಕರಿಸಿದರು ಎನ್ನಲಾಗಿದೆ. ನಂತರ ಪೌರಕಾರ್ಮಿಕರು ಮೃತದೇಹವನ್ನು ಕಸದ ವ್ಯಾನ್‌ಗೆ ಹಾಕಿದ್ದರು. ಇದನ್ನು ಸ್ಥಳೀಯರು ವೀಡಿಯೊ ಮಾಡಿದ್ದು ನಂತರ ಜಾಲತಾಣಗಳಿಗೆ ಹರಿಯಬಿಟ್ಟಿದ್ದರು.

ಪೌರಕಾರ್ಮಿಕರು ಶವವನ್ನು ಎತ್ತಿ ತ್ಯಾಜ್ಯ ಸಾಗಿಸುವ ವಾಹನಕ್ಕೆ ತುಂಬಿಸುತ್ತಿರುವ 20 ಸೆಕೆಂಡಿನ ವಿಡಿಯೊ ವೈರಲಾಗುತ್ತಿದ್ದಂತೆ ಹಲವಾರು ಜನರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಸರ್ಕಾರಿ ಕಚೇರಿಯ ಮುಂದೆ ಮೃತಪಟ್ಟ ವ್ಯಕ್ತಿಯ ಶವವನ್ನು ಕಸ ತುಂಬುವ ವಾಹನಕ್ಕೆ ತುಂಬಿ ಕಳುಹಿಸಿದ ಅಮಾನವೀಯ ಘಟನೆ

ಸರ್ಕಾರಿ ಕಚೇರಿಯ ಮುಂದೆ ಮೃತಪಟ್ಟ ವ್ಯಕ್ತಿಯ ಶವವನ್ನು ಕಸ ತುಂಬುವ ವಾಹನಕ್ಕೆ ತುಂಬಿ ಕಳುಹಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.#NaanuGauri #DalithLivesMatters #MuslimsLivesMatters #InHumanity

Posted by Naanu Gauri on Friday, June 12, 2020

ಘಟನೆ ಬಗ್ಗೆ ಪ್ರತಿಕ್ರಯಿಸಿದ ಜಿಲ್ಲಾಧಿಕಾರಿ ಕೃಷ್ಣ ಕರುಣೇಶ್, “ಇದು ಅಮಾನವೀಯ ಘಟನೆ, ಕೊರೋನ ಭೀತಿಯಿಂದ ಹಾಗೆ ಮಾಡಿರಬಹುದು. ಆದರೆ ಅದು ಆಗಬಾರದಿತ್ತು. ಘಟನೆಯ ಬಗ್ಗೆ  ತನಿಖೆಗೆ ಆದೇಶಿಸಿಲಾಗಿದ್ದು, ಪಿಎಸ್‌ಐ ರವೀಂದ್ರ ಕುಮಾರ್ ರಮಣ್, ಪೇದೆಗಳಾದ ಶುಭಂ ಪಾಟೀಲ್ ಮತ್ತು ಶೈಲೇಂದ್ರ ಶರ್ಮಾ ಅವರನ್ನು ತಕ್ಷಣ ಅಮಾನತು ಮಾಡಲಾಗಿದೆ” ಎಂದಿದ್ದಾರೆ.


ಓದಿ: ಉತ್ತರ ಪ್ರದೇಶದ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ್ದಕ್ಕೆ ದಲಿತ ಬಾಲಕನನ್ನು ಗುಂಡಿಕ್ಕೆ ಹತ್ಯೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...