Homeಮುಖಪುಟಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

- Advertisement -
- Advertisement -

ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸಾವಿರಾರು ಪ್ರತಿಭಟನಾಕಾರರು ಕೊಲಂಬೊದಲ್ಲಿರುವ ಶ್ರೀಲಂಕಾ ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ ನಂತರ, ದ್ವೀಪ ರಾಷ್ಟ್ರದ ಮಾಜಿ ಕ್ರಿಕೆಟಿಗರು ಜನಾಂದೋಲನದ ಪರ ದನಿ ಎತ್ತಿದ್ದಾರೆ.

ಕ್ರಿಕೆಟ್ ದಂತಕಥೆ ಮತ್ತು ಶ್ರೀಲಂಕಾ ಕ್ರಿಕೆಟ್‌ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ, ಮಹೇಲ ಜಯವರ್ಧನ, ಸನತ್‌ ಜಯಸೂರ್ಯ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಅಧ್ಯಕ್ಷೀಯ ಭವನದ ಹೊರಗೆ ಜಮಾಯಿಸಿರುವ ಪ್ರತಿಭಟನಾಕಾರರ ಮೂರು ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ ಕುಮಾರ ಸಂಗಕ್ಕಾರ, “ಇದು ನಮ್ಮ ಭವಿಷ್ಯಕ್ಕಾಗಿ” ಎಂದು ಬರೆದಿದ್ದಾರೆ.

ಲಂಕಾ ಧ್ವಜಗಳನ್ನು ಬೀಸುತ್ತಿರುವ ಬೃಹತ್ ಜನರ ಗುಂಪನ್ನು ವಿಡಿಯೊ ಕ್ಲಿಪ್‌ನಲ್ಲಿ ನೋಡಬಹುದು. ಜನರನ್ನು ಉದ್ದೇಶಿಸಿ ಧ್ವನಿವರ್ಧಕದ ಮೂಲಕ ಯಾರೋ ಒಬ್ಬರು ಮಾತನಾಡುವುದನ್ನು ಕೇಳಬಹುದು.

ಪ್ರತಿಭಟನಾಕಾರರು ಹಲವು ತಿಂಗಳಿಂದ ಅಧ್ಯಕ್ಷರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಜನರ ಒತ್ತಾಯಕ್ಕೆ ಮಣಿಯದ ಕಾರಣ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಲಾಗಿದೆ.

ಮತ್ತೊಬ್ಬ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಕೂಡ ಪ್ರತಿಭಟನಾಕಾರರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ಅಧ್ಯಕ್ಷರನ್ನು “ವಿಫಲ ನಾಯಕ” ಎಂದು ಕರೆದಿದ್ದಾರೆ.

“ವಿಫಲ ನಾಯಕನನ್ನು ಹೊರಹಾಕುವ ಏಕೈಕ ಗುರಿಯೊಂದಿಗೆ ದೇಶ ಈ ರೀತಿಯಲ್ಲಿ ಒಗ್ಗೂಡಿದ್ದನ್ನು ನಾನು ಜೀವಮಾನದಲ್ಲಿ ನೋಡಿರಲಿಲ್ಲ. ದಯವಿಟ್ಟು ಶಾಂತಿಯಿಂದ ಹೋಗಿ” ಎಂದಿರುವ ಅವರು #GoHomeGota ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

“ನಾನು ಯಾವಾಗಲೂ ಶ್ರೀಲಂಕಾದ ಜನರೊಂದಿಗೆ ನಿಲ್ಲುತ್ತೇನೆ. ಶೀಘ್ರದಲ್ಲೇ ವಿಜಯವನ್ನು ಆಚರಿಸುತ್ತಾರೆ. ಯಾವುದೇ ಉಲ್ಲಂಘನೆಯಾಗದಂತೆ ಹೋರಾಟ ಮುಂದುವರಿಸಬೇಕು” ಎಂದಿದ್ದಾರೆ.

“ಜನ ರೊಚ್ಚಿಗೆದ್ದಿದ್ದಾರೆ. ರಾಜೀನಾಮೆ ನೀಡಿ ಅಥವಾ ಮನೆಗೆ ಹೋಗಿ ಎನ್ನುವುದು ನಿಮಗೆ ಅರ್ಥವಾಗುತ್ತಿಲ್ಲವೇ ಮಿಸ್ಟರ್ ಪ್ರೆಸಿಡೆಂಟ್ ಮತ್ತು ಮಿಸ್ಟರ್ ಪ್ರೈಮ್ ಮಿನಿಸ್ಟರ್? ಇದು ಮಿಸ್ಟರ್ ಬೀನ್ ಸಿನಿಮಾ ಅಲ್ಲ. ಇದು ನಿಜ ಜೀವನ. ನೀವು ಜನರ ಜೀವನದೊಂದಿಗೆ ಆಟವಾಡುತ್ತಿದ್ದೀರಿ” ಎಂದಿದ್ದಾರೆ.

ಇಂದಿನ ಪ್ರತಿಭಟನೆಗೆ ಸಂಬಂಧಿಸಿದಂತೆ ಹಲವು ಟ್ವೀಟ್ಗಳನ್ನು ರೀ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ “ಮಿಸ್ಟರ್‌ ಬೀನ್‌ ಪ್ಲೀಸ್‌ ರಿಸೈನ್‌, ನೋ ಮೋರ್‌ ಡೀಲ್ಸ್‌” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಕೊಲಂಬೊದ ತಮ್ಮ ಸರ್ಕಾರಿ ಅಧಿಕೃತ ನಿವಾಸದಿಂದ ಪರಾರಿಯಾದ ಕೆಲವೇ ಗಂಟೆಗಳ ನಂತರ, ಸಾವಿರಾರು ಪ್ರತಿಭಟನಾಕಾರರು ಅಧ್ಯಕ್ಷೀಯ ನಿವಾಸದ ಕಾಂಪೌಂಡ್‌ ದಾಟಿದರು. ಅಲ್ಲಿನ ಐಶಾರಾಮಿ ಈಜು ಕೊಳದಲ್ಲಿ ಈಜಿದರು. ಕಿಚನ್‌ನಲ್ಲಿ ಊಟ ಮಾಡಿದರು.

ಪ್ರತಿಭಟನೆಗೆ ಸಂಬಂಧಿಸಿದ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ವೈರಲ್ ಅಗಿರುವ ವಿಡಿಯೊದಲ್ಲಿ ಕೆಲವು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದರೆ, ಇನ್ನು ಕೆಲವರು ವೀಡಿಯೋ ಮಾಡುತ್ತಿರುವುದು ಕಾಣುತ್ತದೆ.

ದೇಶವನ್ನು ಆರ್ಥಿಕ ವಿನಾಶದಿಂದ ರಕ್ಷಿಸುವಲ್ಲಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನಾಕಾರರು ಬಸ್‌ಗಳು, ರೈಲುಗಳು ಮತ್ತು ಟ್ರಕ್‌ಗಳಲ್ಲಿ ರಾಜಧಾನಿಗೆ ಆಗಮಿಸಿದ್ದರು. ಅದಕ್ಕೂ ಮೊದಲು ರಾಷ್ಟ್ರಪತಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.

ಉದ್ರಿಕ್ತ ಪ್ರತಿಭಟನಾಕಾರರು ರಾಷ್ಟ್ರಪತಿ ಗೋಟಬಯಾ ರಾಜಪಕ್ಷ ಅವರನ್ನು ಉಲ್ಲೇಖಿಸಿ “ಗೋಟಾ ಮನೆಗೆ ಹೋಗು” ಎಂದು ಕೂಗುತ್ತಿದ್ದಾರೆ.

ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಪ್ರತಿಭಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕನಿಷ್ಠ 21 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...