Homeಕರ್ನಾಟಕಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

ಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 57,396. ಲಭ್ಯ ಇರುವ ವೆಂಟಿಲೇಟರ್ ‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಇಂತಹ ಸಮಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಮುಖ್ಯಮಂತ್ರಿಗಳು ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದು ಪ್ರಶ್ನಿಸಿದ್ದಾರೆ.

ನಮ್ಮಿಂದ ಸಹಕಾರ ನಿರೀಕ್ಷಿಸುವ ಕೇಂದ್ರ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಯಾಕೆ‌ ಸಹಕಾರ ಕೊಡಲಿಲ್ಲ? ಅಲ್ಲಿ ಮತ್ತು ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ ಎಂದಿದ್ದಾರೆ.

ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಫನ್ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ಹೇಳಿ ನಾವು ಸುಮ್ಮನಿರಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.

ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿಯು ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ ಎಂದಿದ್ದಾರೆ.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ಹೋರಾಟಗಾರ ರವಿಕೃಷ್ಣಾರೆಡ್ಡಿಯವರ ಸಂದರ್ಶನ.

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಬಿಜೆಪಿಯ ರಾಜಕಾರಣಿಗಳು ಕೊರೊನಾ ನೆಪದಲ್ಲಿ ಹಗಲು ದರೋಡೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...