Homeಕರ್ನಾಟಕಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಸರ್ಕಾರಿ ಕಚೇರಿಗಳಲ್ಲಿ ಕ್ಯಾಮೆರಾ ಬಳಕೆ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -
- Advertisement -

ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸರ್ಕಾರ ರಾತ್ರೋರಾತ್ರಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಜುಲೈ 15- 16ರ ತಡರಾತ್ರಿ 2 ಗಂಟೆ ವೇಳೆಗೆ ಮುಖ್ಯಮಂತ್ರಿಯವರ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ನೂತನ ಆದೇಶ ಪ್ರತಿ ರವಾನೆಯಾಗಿದ್ದು, ಅದರಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ.

ನಿರ್ಬಂಧ ಆದೇಶವನ್ನು ತೆರವುಗೊಳಿಸಿ ಬಿಡುಗಡೆ ಮಾಡಲಾಗಿರುವ ನೂತನ ಆದೇಶದಲ್ಲಿ ಕನ್ನಡ ಪದಗಳನ್ನು ತಪ್ಪಾಗಿ ಬಳಸಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೇಜವಾಬ್ದಾರಿಯಿಂದ ಆದೇಶ ಹೊರಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ನಡಾವಳಿಗಳು’ ಎಂಬುದನ್ನು ‘ನಡವಳಿಗಳು’ ಎಂದೂ, ‘ಪ್ರಸ್ತಾವನೆ’ ಎಂಬುದನ್ನು ‘ಪ್ರಸತ್ತಾವನೆ’ ಎಂದೂ, ‘ಮೇಲೆ’ ಎಂಬುದನ್ನು ‘ಮೇಲೇ’ ಎಂದೂ ‘ಭಾಗ-1′ ಎಂಬುದನ್ನು ‘ಬಾಗ-1’ ಎಂದೂ ‘ಕರ್ನಾಟಕ’ ಎಂಬುದನ್ನು ‘ಕರ್ನಾಟ’ ಎಂದೂ ಎರಡು ಕಡೆ, ‘ಆಡಳಿತ’ ಎಂಬುದನ್ನು ‘ಆಡಳಿದ’ ಎಂದು ಬರೆಯಲಾಗಿದೆ. ಸರ್ಕಾರಿ ಆದೇಶದಲ್ಲಿನ ತಪ್ಪುಗಳನ್ನು ನೋಡಿ ಜನರು ಟ್ರೋಲ್ ಮಾಡಿದ್ದಾರೆ.

“ಆದೇಶ ಹಿಂಪಡೆದದ್ದು ಸ್ವಾಗತಾರ್ಹ, ಆದರೆ ಈ ರೀತಿಯಲ್ಲಿ ಟೈಪ್ ಮಾಡಿದ್ದು ನೋಡುದ್ರೆ, ಇದು ಮಧ್ಯರಾತ್ರಿಯ ಆದೇಶವಲ್ಲ, ಮದ್ಯರಾತ್ರಿಯ ಆದೇಶ ಅನಿಸುತ್ತಿದೆ” ಎಂದು ರಹಿಮಾನ್ ಜವೂರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಹಿಂದಿ ಹೊಡೆತ, ಕನ್ನಡ ಕಡಿತ” ಎಂದು ಚಿಂತಕ ಹ.ರಾ.ಮಹೇಶ್‌‌ ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡದ ಕಗ್ಗೊಲೆ. ಮುಖ್ಯಮಂತ್ರಿ ಬಸವರಾಜ್ ಬಾಮ್ಮಾಯಿರವರೇ ಇದು ಅರ್ಧ ರಾತ್ರಿ ಆದೇಶದ ಎಡವಟ್ಟೇ ಅಥವಾ ನಿಮ್ಮ ಸರ್ಕಾರದಲ್ಲಿ ನಡೆಯೋ ಕರ್ಮಕಾಂಡಗಳನ್ನು ಕಣ್ತಪ್ಪಿಸುವ ಸಲುವಾಗಿ ನಡೆದ ಅಚಾತುರ್ಯವೇ?” ಎಂದು ರಾಮಚಂದ್ರ ಎಂಬವರು ಪ್ರಶ್ನಿಸಿದ್ದಾರೆ.

ಹೀಗೆ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಷೇಧಿಸಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ: ಬೊಮ್ಮಾಯಿ

‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ. ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಆಗಿತ್ತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ಸರ್ಕಾರ ಹಿಂಪಡೆದ ಮೊದಲ ಆದೇಶ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ ಮಾನ್ಯ ಮುಖ್ಯಮಂತ್ರಿಗಳು. ಆದರೆ, ಆ ಆದೇಶ ಹೊರಡಿಸಿದವರು ಯಾರು? ಅವರ ಮೇಲೆ ಏನು ಕ್ರಮ ಆಗಿದೆ? ಈ ಸುತ್ತೋಲೆಯಲ್ಲಿ ಆಗಿರುವ ದೋಷಗಳಿಗೆ ಯಾರು ಹೊಣೆ?
    ತುಂಬಾ ಬೇಸರದ ವಿಷಯ!

  2. ಇಂಥ ಜನ ವಿರೋಧಿ ಸರ್ಕಾರಿ ಆದೇಶವನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಾರದೇ ಹೊರಡಿಸಲು ಸಾಧ್ಯವೇ, ಹಾಗೇನಾದ್ರೂ ಇದ್ದಲ್ಲಿ ಆ defacto chief ಮಿನಿಸ್ಟರ್ ಯಾರು ಸ್ವಾಮಿ, ಏನೇ ಆದರೂ ಪಠ್ಯಪರಿಷ್ಕರಣೆಗೆ ಸಂಬಂಧ ಪಟ್ಟಂತೆ ಘಟನೋತ್ತರ ಮಂಜುರಾತಿ ನೀಡಿದಂತೆ ಇದೂ ಕೂಡ ಮತ್ತೊಂದು ಸಂಗತಿ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...