Homeಮುಖಪುಟ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಭಾರತದಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?

- Advertisement -
- Advertisement -

“ನನ್ನ ಜೀವನವು ಅಸಂಗತತೆಯಿಂದ ಕೂಡಿದ್ದಲ್ಲ. ಇದು ಭಾರತದ ಮೂಲ ಸಂರಚನೆಯಾಗಿದ್ದು, ಇಲ್ಲಿ ವಿಭಿನ್ನ ರೀತಿಯ ಜನರು ಪರಸ್ಪರ ಪ್ರೀತಿಸುತ್ತಾರೆ, ಸ್ನೇಹಿತರಾಗುತ್ತಾರೆ ಹಾಗೂ ಕುಟುಂಬವು ಆಗುತ್ತಾರೆ. ಭಾರತದ ನನ್ನ ಕಲ್ಪನೆಯನ್ನು ಆಕ್ಷೇಪಿಸಲು ನೀವು ಯಾರು?”, ಹೀಗೆ ಖಡಕ್ಕಾಗಿ ಪ್ರಶ್ನಿಸಿದವರು ಮುಂಬೈಯ ಜಿಂದಾಲ್‌ ಗ್ಲೋಬಲ್‌ ಯೂನಿವರ್ಸಿಟಿಯ ಉಪನ್ಯಾಸಕಿ ಸಮೀನಾ ದಳವಾಯಿ.

ವಾರಗಳ ಹಿಂದೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ತನಿಷ್ಕ್ ಆಭರಣ ಕಂಪೆನಿಯ ’ಏಕತ್ವಂ’ ಜಾಹಿರಾತಿಗೆ ಬಲಪಂಥೀಯ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಅಂಕಣಕಾರ್ತಿಯೂ ಆದ ಸಮೀನಾ ದಳವಾಯಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಭಾರಿ ವಿರೋಧ ವ್ಯಕ್ತವಾದ ನಂತರ ತನಿಷ್ಕ್ ಈ ಜಾಹಿರಾತನ್ನು ಹಿಂಪಡೆದಿತ್ತಾದರೂ ಜಾಹಿರಾತು ಜನರ ಮನಸ್ಸನ್ನು ಗೆದ್ದಿತ್ತು.

ಇದನ್ನೂ ಓದಿ ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿ

ದಿ ಕ್ವಿಂಟ್ ತಯಾರಿಸಿರುವ ಈ ವಿಡಿಯೋದಲ್ಲಿ ಅವರು “ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮದೇ ಹೆಣ್ಣು ಮಕ್ಕಳ ಆಯ್ಕೆಗಳ ಬಗ್ಗೆ ಆಕ್ಷೇಪಿಸುತ್ತಿದ್ದೀರಾ? ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಸುಂದರ ಭಾರತದ ಸಮ್ಮಿಶ್ರ ಸಂಸ್ಕೃತಿಯನ್ನು ಆಕ್ಷೇಪಿಸುತ್ತಿದ್ದೀರಾ? ನೀವು ಯಾರು? ಯಾಕೆ ಆಕ್ಷೇಪಿಸುತ್ತೀರಿ? ಯಾಕೆ ನಿಮಗೆ ಅಷ್ಟೊಂದು ಅಸಹನೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನ ತಾಯಿ ಶಮಾ ದಳವಾಯಿ ಸಾರಸ್ವತ ಬ್ರಾಹ್ಮಣ, ತಂದೆ ಹುಸೈನ್ ದಳವಾಯಿ ಕೊಂಕಣ ಮೂಲದ ಮುಸ್ಲಿಂ. ಅವರಿಬ್ಬರೂ 1970 ರ ದಶಕದ ವಿದ್ಯಾರ್ಥಿ ಸಂಘಟನೆಯಾದ ಯುವಕ್ ಕ್ರಾಂತಿ ದಳಕ್ಕೆ ಸೇರಿದ ಸಮಾಜವಾದಿ ಸಂಘಟನೆಯವರು. ಮದುವೆಯ ನಂತರ ನನ್ನ ತಾಯಿ ಹಿಂದೂ ಆಗಿಯೆ ಮುಂದುವರೆದರು. ಅವರು ಕಟ್ಟಾ ಸಾಂಪ್ರದಾಯಿಕ ಹಿಂದೂ ಅಲ್ಲದಿದ್ದರೂ, ತನ್ನ ಅಸ್ಮಿತೆಯನ್ನು ಮುಂದುವರೆಸಲು ಮದುವೆಯಾದ ನಂತರವು ಬಿಂದಿ ಧರಿಸುತ್ತಿದ್ದಾರೆ. ಮುಸಲ್ಮಾನನ್ನು ಮದುವೆಯಾಗಿದ್ದರೂ ಇಸ್ಲಾಂಗೆ ಮತಾಂತರಗೊಂಡಿಲ್ಲ, ನಾವು ಹಿಂದೂ ಮತ್ತು ಮುಸ್ಲಿಂ ಎರಡೂ ಕೂಡಾ” ಎಂದು ಹೇಳಿದ್ದಾರೆ.

“ನಾವು ಈದ್‌, ದೀಪಾವಳಿ, ಕ್ರಿಸ್‌ಮಸ್‌ ಆಚರಿಸುತ್ತೇವೆ. ಹೊಸ ವರ್ಷವನ್ನೂ ಸ್ವಾಗತಿಸುತ್ತೇವೆ. ಅಂಬೇಡ್ಕರ್‌ ಜಯಂತಿ, ಲೆನಿನ್‌ ಜಯಂತಿಯನ್ನೂ ಆಚರಿಸುತ್ತೇವೆ. ಇವೆಲ್ಲವೂ ನಮ್ಮ ಹಬ್ಬಗಳೇ ಆಗಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

“ಏಕತೆಯನ್ನು ಕಂಡುಕೊಂಡಿದ್ದ ನಮ್ಮ ಕುಟುಂಬ, 1992 ರ ಬಾಬರಿ ಮಸೀದಿ ಧ್ವಂಸದ ಸಮಯದಲ್ಲಿ ಬಾಂಬೆಯಲ್ಲಿ ನಡೆದ ಗಲಭೆಯಿಂದಾಗಿ ಹಲವು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಮುಖ್ಯವಾಹಿನಿಯ ಸಮಾಜವು ಕೋಮುವಾದಿಯಾಗಿ ಪರಿವರ್ತನೆಯಾಗಿದ್ದು ನಮ್ಮ ಕಷ್ಟಗಳನ್ನು ಹೆಚ್ಚಿಸಿತ್ತು. ಅಂತಿಮವಾಗಿ ನಾವು ನಮ್ಮ ಮನೆಯಿಂದ ಹೊರಹೋಗಬೇಕಾಯಿತು” ಎಂದು ಅವರು ವಿಷಾಧಿಸಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

“ಇನ್ನು ಬದುಕುವುದು ಹೇಗೆ? ನಮ್ಮ ಜೊತೆಗಾರರು ಯಾರು? ನಮ್ಮ ಕುಟುಂಬ ಸಂಬಂಧಗಳನ್ನು ವಿಸ್ತರಿಸಿಕೊಳ್ಳುವುದು ಹೇಗೆ? ಎಂಬಂತಹ ಆತಂಕಗಳ ನಡುವೆಯೇ ನಾವು ಹೊಸ ಜಗತ್ತುಗಳಿಗೆ ತೆರೆದುಕೊಂಡು ದೇಶ ಸುತ್ತಿದೆವು. ಪಿಎಚ್‌ಡಿಗಳನ್ನು ಪಡೆದು, ನಮ್ಮಂತೆಯೇ ಇರುವ ಹತ್ತಾರು ಜನರನ್ನು ನೋಡಿ, ಅಂಥವರೊಂದಿಗೆ ಸ್ನೇಹವನ್ನು ಏರ್ಪಡಿಸಿಕೊಂಡೆವು” ಎಂದು ಅವರು ಹೇಳಿದ್ದಾರೆ.

“ನನ್ನ ಸಹೋದರ ಹೈನಾನ್‌ನ ಚೀನೀ ಹುಡುಗಿಯನ್ನು ಮದುವೆಯಾದ್ದಾರೆ. ನಾನು ತೆಲಂಗಾಣ ರೆಡ್ಡಿಯನ್ನು ಮದುವೆಯಾಗಿದ್ದೇನೆ. ನಾವು ನಾಗಲ್ಯಾಂಡ್‌‌ನ ಪುಟ್ಟ ಹುಡುಗಿಯನ್ನು ದತ್ತು ಪಡೆದಿದ್ದಲ್ಲದೆ ಇನ್ನೂ ಇಬ್ಬರು ಮಕ್ಕಳನ್ನು ಹೊಂದಿದ್ದೇವೆ, ಮಕ್ಕಳು ಹೊರಗೆ ಆಡವಾಡುವಾಗ ಇದು ಹೇಗೆ ಸಾಧ್ಯ, ಒಬ್ಬರನ್ನು ಒಬ್ಬರು ಹೋಲುವುದಿಲ್ಲ ಎಂದು ಕೇಳುತ್ತಾರೆ ಆದರೆ ನಾವು ನಕ್ಕು ಮುಂದೆ ಸಾಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ಶ್ರೇಷ್ಠ ಚಿಂತಕದಾದ ಮಹಾತ್ಮ ಫುಲೆ ಅವರು ವಿಶ್ವ ಕುಟುಂಬದ ಬಗ್ಗೆ ಮಾತನಾಡಿದ್ದರು. ಹಾಗಾದರೆ, ನನ್ನ ಭಾರತವನ್ನು ಆಕ್ಷೇಪಿಸುತ್ತಿರುವ ಈ ಜನರೆಲ್ಲರೂ ಯಾರು? ನೀವು ಮುಸ್ಲಿಮರನ್ನು ಆಕ್ಷೇಪಿಸುತ್ತಿದ್ದೀರಾ? ನಿಮ್ಮ ಸ್ವಂತ ಹೆಣ್ಣುಮಕ್ಕಳ ಆಯ್ಕೆಗಳಿಗೆ ನೀವು ಆಕ್ಷೇಪಿಸುತ್ತಿದ್ದೀರಾ? ಅಥವಾ ಭಾರತದ ಕಲ್ಪನೆಯನ್ನು ನೀವು ಆಕ್ಷೇಪಿಸುತ್ತಿದ್ದೀರಾ?” ಎಂದು ಅವರು ಹೇಳಿದ್ದಾರೆ.

ನಮ್ಮ ಜೀವನವು ಈ ಏಕತೆಯನ್ನು ಆಕ್ಷೇಪಿಸುವ ಎಲ್ಲ ಜನರಿಗೆ ಉತ್ತರವಾಗಿದೆ. ನಾವು ಹೆಮ್ಮೆಯಿಂದ, ಪ್ರೀತಿಯಿಂದ ಬದುಕುತ್ತೇವೆ ಎಂದು ಅವರು ಹೇಳಿದ್ದಾರೆ.

ಕೃಪೆ: ದಿಕ್ವಿಂಟ್

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...