Homeಕರ್ನಾಟಕನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ: ಬಿಜೆಪಿ ಹೈಕಮಾಂಡ್‌ಗೆ ಶೆಟ್ಟರ್ ಟಕ್ಕರ್

ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ: ಬಿಜೆಪಿ ಹೈಕಮಾಂಡ್‌ಗೆ ಶೆಟ್ಟರ್ ಟಕ್ಕರ್

- Advertisement -
- Advertisement -

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಜಗದೀಶ್ ಶೆಟ್ಟರ್ ಅವರು ಈ ಬಾರಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲೇ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತಿದ್ದು, ಅವರನ್ನು ಸೋಲಿಸುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಸೋಮವಾರ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ಪ್ರಚಾರ ಮಾಡಲು ತೆರಳಿದ್ದಾಗ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಅಮಿತ್‌ ಶಾ ಸೇರಿದಂತೆ ಅನೇಕ ನಾಯಕರು ನನ್ನನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಇದು ಗುಜರಾತ್‌ ಅಲ್ಲ. ಇಲ್ಲಿಯ ರಾಜಕಾರಣ ಹಾಗೂ ಜನರ ಪ್ರೀತಿ ಎಂಥದ್ದು ಎಂಬುದು ನನಗೆ ಗೊತ್ತಿದೆ. ಹೆಚ್ಚು ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆ ಎಂದು ಬಿಜೆಪಿಯ ಹೈಕಮಾಂಡ್ ನಾಯಕರಿಗೆ ಶೆಟ್ಟರ್ ಖಡಕ್ ಉತ್ತರ ನೀಡಿದ್ದಾರೆ.

”ನನಗೆ ಕರ್ನಾಟಕದ ರಾಜಕಾರಣ, ಇಲ್ಲಿನ ಬಿಜೆಪಿ ಮತ್ತು ಹುಬ್ಬಳ್ಳಿ ಜನರ ಪ್ರೀತಿಯ ಬಗ್ಗೆ ಚೆನ್ನಾಗಿ ಗೊತ್ತಿದೆ. ಮತದಾರರ ಹೃದಯದಲ್ಲಿ ಭದ್ರವಾಗಿದ್ದೇನೆ. ಹಿಂದಿನ ಯಾವ ಚುನಾವಣೆಗಳಲ್ಲಿಯೂ ಸೋತಿಲ್ಲ. ಎಲ್ಲ ಮತದಾರರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ” ಎಂದು ತಮ್ಮ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

”ಈಗಾಗಲೇ ನಾನು ಮುಖ್ಯಮಂತ್ರಿಯಾಗಿದ್ದೇನೆ ಮತ್ತೆ ಮುಖ್ಯಮಂತ್ರಿಯಾಗುವ ಆಸೆ ಇಲ್ಲ. ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಹೋಗುವೆ. ಬಿಜೆಪಿಯವರು ಗೌರವಯುತವಾಗಿ ನಡೆಸಿಕೊಂಡಿದ್ದರೆ ನಾನು ಪಕ್ಷ ಬಿಡುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ. ಬಿಜೆಪಿಯಲ್ಲಿದ್ದಾಗ ಆ ಪಕ್ಷವನ್ನು ಕಟ್ಟಿ ಬೆಳೆಸಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ ಬಿಜೆಪಿಯಲ್ಲಿ ಹಿರಿಯ ಲಿಂಗಾಯತ ನಾಯಕರು ಯಾರೂ ಇರಬಾರದು ಎನ್ನುವ ಕಾರಣಕ್ಕೆ ಬಿಜೆಪಿ ನನಗೆ ಟಿಕೆಟ್‌ ನೀಡಿಲ್ಲ” ಎಂದು ಬಿಜಿಪಿಯಿಂದ ತಮಗಾದ ನೋವು ಹೊರಹಾಕಿದರು.

ಇದನ್ನೂ ಓದಿ: ಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

”ಈಗ ಕಾಂಗ್ರೆಸ್‌ ಪಕ್ಷವನ್ನು ಎತ್ತರಕ್ಕೆ ತೆಗೆದುಕೊಂಡು ಹೋಗುವೆ. ನಾನು ಯಾವ ಪಕ್ಷದಲ್ಲಿ ಇರುತ್ತೇನೋ ಆ ಪಕ್ಷಕ್ಕೆ ಬದ್ಧತೆಯಿಂದ ನಡೆದುಕೊಳ್ಳುವೆ” ಎಂದರು.

ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಕಾಂಗ್ರೆಸ್‌ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿಗಳ ಮುಂದೆ ಬಿಜೆಪಿಯದ್ದು ಏನೂ ಅಲ್ಲ. ಅವುಗಳಲ್ಲಿ ವಿಶೇಷವೇನೂ ಅಲ್ಲ. ಜನರಿಗೆ ಅನುಕೂಲವಾಗುವ ಹೆಚ್ಚು ಸೌಲಭ್ಯಗಳನ್ನು ಕಾಂಗ್ರೆಸ್‌ ಈಗಾಗಲೇ ಘೋಷಣೆ ಮಾಡಿದೆ” ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...