Homeಅಂತರಾಷ್ಟ್ರೀಯಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ 'ಅಂತ್ಯವಿಲ್ಲದ ಯುದ್ಧವಲ್ಲ' : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

- Advertisement -
- Advertisement -

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು ‘ಅಂತ್ಯವಿಲ್ಲದ್ದು’ ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ ಎಂಬ ಅಂಶವನ್ನು ಅವರು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

“ಇದು ಇರಾಕ್ ಅಲ್ಲ, ಇದು ಅಂತ್ಯವಿಲ್ಲದ ಯುದ್ಧವೂ ಅಲ್ಲ” ಎಂದು ಹೇಳಿದ ಹೆಗ್ಸೆತ್, “ಅಂತ್ಯವಿಲ್ಲದ ಯುದ್ಧಗಳ” ಬಗ್ಗೆ ಕಳವಳ ವ್ಯಕ್ತಪಡಿಸುತ್ತಿರುವವರ ವಾದವು ತಪ್ಪಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಪೆಂಟಗನ್‌ನಲ್ಲಿ ಮಾತನಾಡಿದ ಹೆಗ್ಸೆತ್, ಅಮೆರಿಕದ ಈ ಕಾರ್ಯಾಚರಣೆಯು ಸ್ಪಷ್ಟವಾದ, ವಿನಾಶಕಾರಿಯಾದ ಮತ್ತು ನಿರ್ಣಾಯಕವಾದ ಕಾರ್ಯಾಚರಣೆಯಾಗಿದೆ ಎಂದು ಹೇಳಿದ್ದು, ಇರಾನ್‌ನ ಕ್ಷಿಪಣಿ ಬೆದರಿಕೆಯನ್ನು ನಿರ್ಮೂಲನೆ ಮಾಡುವುದು, ನೌಕಾಪಡೆಯನ್ನು ನಾಶಪಡಿಸುವುದು ಮತ್ತು ಯಾವುದೇ ಪರಮಾಣು ಅಸ್ತ್ರಗಳಿಲ್ಲದಂತೆ ಮಾಡುವುದು ಈ ಯೋಜನೆಯ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸಂಸ್ಥೆಗಳು ಏನೇ ಹೇಳಿದರೂ, ಅಮೆರಿಕವು ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಮತ್ತು ನಿಖರವಾದ ವಾಯುಪಡೆ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದೆ… ಇದೆಲ್ಲವೂ ನಮ್ಮದೇ ಷರತ್ತುಗಳ ಮೇಲೆ ಮತ್ತು ಪೂರ್ಣ ಅಧಿಕಾರದೊಂದಿಗೆ ನಡೆಯುತ್ತಿದೆ ಎಂದು ಹೆಗ್ಸೆತ್ ಹೇಳಿದ್ದಾರೆ.

ಇರಾನ್ ಆಡಳಿತವು ಕಳೆದ ಸುಮಾರು ಐದು ದಶಕಗಳಿಂದ ಅಮೆರಿಕದ ವಿರುದ್ಧ ಕ್ರೂರ ಮತ್ತು ಏಕಪಕ್ಷೀಯ ಯುದ್ಧ ನಡೆಸುತ್ತಿದೆ ಎಂದ ರಕ್ಷಣಾ ಕಾರ್ಯದರ್ಶಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದಲ್ಲಿ ಅಮೆರಿಕವು ಇದಕ್ಕೆ ಅಂತ್ಯ ಹಾಡಲಿದೆ ಎಂದು ತಿಳಿಸಿದ್ದಾರೆ.

ಇದು ಆಡಳಿತ ಬದಲಾವಣೆಗಾಗಿ ಮಾಡುತ್ತಿರುವ ಯುದ್ಧವಲ್ಲ. ಆದರೆ ಆಡಳಿತವಂತೂ ಖಂಡಿತವಾಗಿಯೂ ಬದಲಾಯಿತು ಮತ್ತು ಇದರಿಂದ ಜಗತ್ತಿಗೆ ಒಳ್ಳೆಯದೇ ಆಗಿದೆ ಎಂದು ಹೆಗ್ಸೆತ್ ಹೇಳಿದ್ದಾರೆ.

ಜಂಟಿ ಮುಖ್ಯಸ್ಥರ ಅಧ್ಯಕ್ಷರಾದ ಜನರಲ್ ಡ್ಯಾನ್ ಕೇನ್ ಅವರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ, ಕಾರ್ಯಾಚರಣೆಯ ವಿವರಗಳನ್ನು ನೀಡಿದರು. ಇದೇ ವೇಳೆ ಪ್ರಸ್ತುತ ನಡೆಯುತ್ತಿರುವ ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡ ನಾಲ್ವರು ಅಮೆರಿಕನ್ ಸೈನಿಕರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದರು.

ನಾಲ್ಕನೇ ಅಮೆರಿಕನ್ ಸೈನಿಕನ ಸಾವನ್ನು ಅಮೆರಿಕದ ಸೆಂಟ್ರಲ್ ಕಮಾಂಡ್ ಸೋಮವಾರ ದೃಢಪಡಿಸಿದೆ. ಮೃತರ ಕುಟುಂಬದವರಿಗೆ ಮಾಹಿತಿ ನೀಡಿದ 24 ಗಂಟೆಗಳ ನಂತರವಷ್ಟೇ ಅವರ ಹೆಸರು ಮತ್ತು ಗುರುತನ್ನು ಬಹಿರಂಗಪಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...