Homeಕರ್ನಾಟಕಇದು ಕೇವಲ ಆತ್ಮಹತ್ಯೆ ಪ್ರಕರಣವಲ್ಲ; ಇದೊಂದು ಕೊಲೆ ಪ್ರಕರಣ, ಈಶ್ವರಪ್ಪ ಅವರನ್ನು ಬಂಧಿಸಿ: ಡಿಕೆಶಿ

ಇದು ಕೇವಲ ಆತ್ಮಹತ್ಯೆ ಪ್ರಕರಣವಲ್ಲ; ಇದೊಂದು ಕೊಲೆ ಪ್ರಕರಣ, ಈಶ್ವರಪ್ಪ ಅವರನ್ನು ಬಂಧಿಸಿ: ಡಿಕೆಶಿ

- Advertisement -
- Advertisement -

ಆತ್ಮಹತ್ಯೆಯಾಗಿರುವ ವ್ಯಕ್ತಿ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿ, ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಆಗ್ರಹಿಸಿದ್ದಾರೆ.

“ಆರೋಪಿ ಸಚಿವನ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% ಕಮಿಷನ್ ಆರೋಪ ಮಾಡಿರುವುದು ನಾವ್ಯಾರೂ ಅಲ್ಲ. ಗುತ್ತಿಗೆದಾರರ ಸಂಘ, ಗುತ್ತಿಗೆದಾರರು ಹಾಗೂ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಈ ಆರೋಪ ಮಾಡಿದ್ದಾರೆ” ಎಂದು ಶಿವಕುಮಾರ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಯಾರ ರಕ್ಷಣೆಯನ್ನೂ ಮಾಡಬಾರದು. ಕೇವಲ ಮೌಖಿಕವಾಗಿ ತನಿಖೆ ಮಾಡುತ್ತೇವೆ, ಸತ್ಯಾಂಶ ತಿಳಿಯುತ್ತೇವೆ ಎಂದು ಕಾಲಹರಣ ಮಾಡಬಾರದು. ಕೂಡಲೇ ಎಫ್ಐಆರ್ ದಾಖಲಿಸಿ, ಈಶ್ವರಪ್ಪನನ್ನು ಬಂಧಿಸಬೇಕು. ಈ ಹಿಂದೆ ಸಚಿವರುಗಳ ವಿರುದ್ಧದ ಪ್ರಕರಣದಲ್ಲಿ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಬಿ ರಿಪೋರ್ಟ್ ಹಾಕಿ ರಕ್ಷಣೆ ಮಾಡಿದ್ದು, ಈ ಪ್ರಕರಣದಲ್ಲಿ ಆ ರೀತಿ ಮಾಡಬಾರದು” ಎಂದು ಅವರು ಆಗ್ರಹಿಸಿದ್ದಾರೆ.

“ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಅನೇಕ ಸಚಿವರುಗಳ ರಾಜೀನಾಮೆ ಪಡೆಯಲಾಗಿದೆ. ಈಗಲೂ ಆರೋಪ ಹೊತ್ತಿರುವ ಸಚಿವನ ವಿರುದ್ದ ಪ್ರಕರಣ ದಾಖಲಿಸಿ, ಆತನನ್ನು ವಜಾಗೊಳಿಸಬೇಕು, ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ” ಎಂದು ಡಿಕೆಶಿ ಹೇಳಿದ್ದಾರೆ.

“ಇದು ಕೇವಲ ಆತ್ಮಹತ್ಯೆ ಪ್ರಕರಣವಲ್ಲ. ಇದೊಂದು ಕೊಲೆ ಪ್ರಕರಣ. ಈ ಸಾವಿಗೆ ಕಾರಣ ಯಾರು ಎಂದು ಬರೆದಿಟ್ಟು ಸಂತೋಷ್ ಸಾವಿಗೆ ಶರಣಾಗಿದ್ದಾರೆ. ಈ ಸಾವಿಗೆ ಕಾರಣ ಏನು ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ. ಹೀಗಾಗಿ ಈಗ ರಾಜ್ಯದಲ್ಲಿ ಕಾನೂನನ್ನು ಯಾವ ರೀತಿ ಜಾರಿಗೆ ತರಲಾಗುತ್ತದೆ ಎಂಬುದಷ್ಟೇ ಈಗ ಉಳಿದಿರುವ ವಿಚಾರ”ಎಂದು ಶಿವಕುಮಾರ್‌ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...