Homeಮುಖಪುಟ'ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ': ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

- Advertisement -
- Advertisement -

ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಫೋನ್‌ನಲ್ಲಿ ನಡೆಸಿದ ಸಂಭಾಷಣೆಯೊಂದು ವೈರಲ್ ಆಗುತ್ತಿದೆ.

ಪಾಟ್ನಾದಲ್ಲಿ ಹಲವು ದಿನಗಳಿಂದ ತಮ್ಮ ಕೆಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾವು ಬಯಸಿದ ಜಾಗದಲ್ಲಿ ಪ್ರತಿಭಟನೆ ಮಾಡಲು ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಪ್ರತಿಭಟನಾನಿರತ ಶಿಕ್ಷಕರಿಗೆ ಬೆಂಬಲ ನೀಡಲು ಆಗಮಿಸಿದ ತೇಜಸ್ವಿ ಯಾದವ್ ಗಮನಕ್ಕೆ ಈ ವಿಚಾರ ಬಂದಾಗ ಅವರು ಫೋನ್‌ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ, ಪೊಲೀಸ್ ಮುಖ್ಯಸ್ಥರು ಮತ್ತು ಪಾಟ್ನಾ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಅನುಮತಿ ದೊರಕಿಸುವ ಭರವಸೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಪ್ರತಿಭಟನಾ ನಿರತ ಶಿಕ್ಷಕರಿದಂದ ಸುತ್ತುವರಿದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಕರ್ ಸಿಂಗ್‌ರೊಂದಿಗೆ ಒಪನ್ ಸ್ಪೀಕರ್‌ನಲ್ಲಿ ಮಾತನಾಡಿದ್ದಾರೆ. “ಶಿಕ್ಷಕರು ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ, ಅವರು ಪ್ರತಿದಿನ ಅನುಮತಿ ಪಡೆಯಬೇಕೆ? ಅವರ ಮೇಲೆ ಲಾಠಿಚಾರ್ಜ್ ಮಾಡಲು ಕಾರಣವೇನು? ಅವರ ಆಹಾರವನ್ನು ಏಕೆ ಚೆಲ್ಲಲಾಯಿತು? ಅವರು ಭಯಭೀತರಾಗಿದ್ದಾರೆ. ಪ್ರತಿಭಟನೆಗೆ ಜಾಗ ಸಿಗದೆ ಇಕೋ ಪಾರ್ಕ್‌ನಲ್ಲಿ ನನ್ನೊಂದಿಗಿದ್ದಾರೆ. ಅವರು ಪ್ರತಿಭಟಿಸುವ ಹಕ್ಕನ್ನು ಕೇಳುತ್ತಿದ್ದಾರೆ” ಎಂದು ಯಾದವ್ ಹೇಳಿದ್ದಾರೆ.

ಅವರ ಪತ್ರವನ್ನು ವಾಟ್ಸಾಪ್ ಮಾಡುತ್ತೇನೆ. ದಯವಿಟ್ಟು ಪ್ರತಿಭಟನೆಗೆ ಅವಕಾಶ ಕೊಡಿ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ. ಅದಕ್ಕೆ ಉತ್ತರಿಸಿದ ಡಿಸಿ ಆಯ್ತು ನೋಡೋಣ ಎಂದಿದ್ದಾರೆ.

ಯಾವಾಗ ನೋಡುತ್ತೀರಿ ಎಂದು ಯಾದವ್ ಪ್ರಶ್ನಿಸಿದರೆ, ಕೋಪಗೊಂಡ ಡಿಸಿ, “ಯಾವಾಗ ಅಂದರೆ? ನನ್ನನ್ನೇ ಪ್ರಶ್ನಿಸುತ್ತಿದ್ದೀರಾ? ಎಂದು ತಿರುಗೇಟು ನೀಡಿದ್ದಾರೆ.

“ನಾನು ತೇಜಸ್ವಿ ಯಾದವ್ ಮಾತನಾಡುತ್ತಿದ್ದೇನೆ ಡಿಎಂ ಸಾಬ್” ಎಂದಿದ್ದಾರೆ. ಆಗ ಸ್ವಲ್ಪ ಸಮಯ ಬಿಟ್ಟು ಡಿಸಿ ಒಕೆ, ಒಕೆ ಸರ್ ಸರ್ ಎಂದು ತಗ್ಗಿದ ಧ್ವನಿಯಲ್ಲಿ ಉತ್ತರಿಸಿದ್ದಾರೆ. ಆಗ ಸುತ್ತುವರಿದಿದ್ದ ಶಿಕ್ಷಕರು ಜೋರಾಗಿ ಕೂಗಿ ಶಿಳ್ಳೆ ಹಾಕಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಮುಂದುವರಿದ ತೇಜಸ್ವಿ ಯಾದವ್ “ವಾಟ್ಸಾಪ್ ನಲ್ಲಿ ಪತ್ರ ಕಳಿಸುತ್ತೇವೆ. ಆದಷ್ಟು ಬೇಗ ಪ್ರತಿಕ್ರಿಯಿಸಿ. ಇಲ್ಲದಿದ್ದರೆ ಇಡೀ ರಾತ್ರಿ ಇಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿ ಕರೆ ಅಂತ್ಯಗೊಳಿಸಿದ್ದಾರೆ.

ಇಷ್ಟು ಘಟನೆಗಳ ವಿಡಿಯೋ ತೇಜಸ್ವಿ ಯಾದವ್‌ರನ್ನು ಹೊಗಳುತ್ತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ ಸಹೋದ್ಯೋಗಿಯಾಗಿದ್ದ ಸುಧೀಂದ್ರ ಕುಲಕರ್ಣಿಯವರು ಈ ವಿಡಿಯೋ ವನ್ನು ಷೇರ್ ಮಾಡಿ “ಕೊನೆಯವರೆಗೂ ನೋಡಿ. ಹೇಗೆ ತೇಜಸ್ವಿ ಯಾದವ್ ಭಾರತದ ಮಾಸ್ ಲೀಡರ್ ಆಗಿ ಅತಿಬೇಗ ಬೆಳಯುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಗೆ ಅವಕಾಶ ಸಿಗದಿದ್ದಾಗ ಶಿಕ್ಷಕರು ಟಿಕೆಟ್ ಪಡೆದು ಪಾರ್ಕ್ ಒಂದರಲ್ಲಿ ತಂಗಿದ್ದರು. ನಾನು ಹೋಗಿ ಮುಖ್ಯ ಕಾರ್ಯದರ್ಶಿ ಡಿಜಿಪಿ ಮತ್ತು ಡಿಎಂ ಅವರೊಂದಿಗೆ ಮಾತನಾಡಿದ ನಂತರ ಅನುಮತಿ ಸಿಕ್ಕಿದ್ದು, ರಾತ್ರಿಯಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಮೂಲಕ ಮತ್ತೆ ಧರಣಾ ಸ್ಥಳ ತಲುಪಿದ್ದಾರೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡದಿದ್ದಾಗಲೂ ಸಹ “ರೈತರಿಗಾಗಿ ಗಲ್ಲಿಗೇರಲು ಸಿದ್ದ, ತಾಕತ್ತಿದ್ದರೆ ಬಂಧಿಸಿ” ಎಂದು ಗುಡುಗಿದ್ದರು.

ತೇಜಸ್ವಿ ಯಾದವ್ ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರವಸೆಯ ನಾಯಕರಾಗಿ ಹೊರಹೊಮ್ಮಿದ್ದಾರೆ. 31 ವರ್ಷದ ಅವರ ಮಹಾಘಟಬಂಧನ್ ಚುನಾವಣೆಯಲ್ಲಿ ಅಧಿಕಾರವಿಡಿಯಲು ಅಲ್ಪದರಲ್ಲೇ ವಿಫಲರಾದರೂ ಸಹ ತೇಜಸ್ವಿ ಯಾದವ್‌ರವರ ಆರ್‌ಜೆಡಿ ಪಕ್ಷ 76 ಸ್ಥಾನಗಳಲ್ಲಿ ಜಯಿಸುವ ಮೂಲಕ ಬಿಹಾರ ವಿಧಾನಸಭೇಯ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...