Homeಅಂತರಾಷ್ಟ್ರೀಯ'ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ': 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

- Advertisement -
- Advertisement -

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3) ನಡೆಯಿತು.

ಈ ಕುರಿತ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮುಗ್ದ ಮಕ್ಕಳ ಸಾವಿಗೆ ಇಡೀ ಮಾನವೀಯ ಜಗತ್ತು ಮರುಗಿದೆ.

ಶಾಲೆಯ ಮೇಲೆ ದಾಳಿ ನಡೆಸಿ ಅಮಾಯಕ ಮಕ್ಕಳನ್ನು ಭೀಕರವಾಗಿ ಕೊಂದಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ, ಇಸ್ರೇಲ್ ತನ್ನ ದುಷ್ಕೃತ್ಯವನ್ನು ಮರೆಮಾಚುವ ಪ್ರಯತ್ನ ನಡೆಸುತ್ತಿದೆ. ಶಾಲೆಯ ಮೇಲೆ ನಾವು ಅಥವಾ ಅಮೆರಿಕ ದಾಳಿ ನಡೆಸಿಲ್ಲ ಎನ್ನುತ್ತಿದೆ.

ಗಾಝಾ ಮೇಲೆ ದಾಳಿ ನಡೆಸಿ ಮುಗ್ದ ಮಕ್ಕಳ ರಕ್ತ ಹರಿಸಿದಾಗಲೂ ಇಸ್ರೇಲ್ ಇದೇ ವಾದವನ್ನು ಮುಂದಿಡುತ್ತಿತ್ತು. ಮಾಧ್ಯಮಗಳ ಸಾಕ್ಷಿ ಸಮೇತ ಇಸ್ರೇಲ್‌ನ ಕ್ರೌರ್ಯವನ್ನು ಜಗತ್ತಿನ ಮುಂದಿಟ್ಟಾಗ, ಅದು ಅನಿವಾರ್ಯವಾಗಿ ದಾಳಿ ನಡೆಸಿರುವುದನ್ನು ಒಪ್ಪಿಕೊಳ್ಳಬೇಕಾಯಿತು ಎಂದು ಅಲ್‌-ಜಝೀರಾ ವರದಿ ಹೇಳುತ್ತದೆ.

ಇರಾನ್‌ನ ಸರ್ಕಾರಿ ಮಾಧ್ಯಮ ಮಕ್ಕಳ ಸಾಮೂಹಿಕ ಅಂತ್ಯ ಸಂಸ್ಕಾರದ ದೃಶ್ಯಗಳನ್ನು ಮಂಗಳವಾರ ಪ್ರಸಾರ ಮಾಡಿದೆ. ಅದರಲ್ಲಿ, ಮಿನಾಬ್‌ ನಗರದ ಸಾರ್ವಜನಿಕ ಚೌಕವೊಂದರಲ್ಲಿ ಸಾವಿರಾರು ಜನರು ಜಮಾಯಿಸಿರುವುದು ಕಂಡು ಬಂದಿದೆ. ಅಲ್ಲಿ ನೆರೆದಿದ್ದ ಪುರುಷರು ಇಸ್ಲಾಮಿಕ್ ರಿಪಬ್ಲಿಕ್ ಧ್ವಜವನ್ನು ಬೀಸುತ್ತಿದ್ದರು ಮತ್ತು ಕಪ್ಪು ಚಾದರ್ ಧರಿಸಿದ್ದ ಮಹಿಳೆಯರಿಂದ ಸ್ವಲ್ಪ ದೂರದಲ್ಲಿ ಪ್ರತ್ಯೇಕವಾಗಿ ನಿಂತಿದ್ದರು.

ವೇದಿಕೆಯ ಮೇಲಿಂದ ಮಾತನಾಡಿದ ಮಹಿಳೆಯೊಬ್ಬರು, ತಾನು “ಆಟೆನಾ”ಳ (ಮೃತ ಬಾಲಕಿ) ತಾಯಿ ಎಂದು ಪರಿಚಯಿಸಿಕೊಂಡಿದ್ದು, ಅವರು ಫೋಟೋವೊಂದನ್ನು ಎತ್ತಿ ತೋರಿಸುತ್ತಾ, ಇದು ‘ಅಮೆರಿಕದ ಅಪರಾಧದ ದಾಖಲೆ’ ಎಂದು ಹೇಳಿದ್ದಾರೆ. ಮುಂದುವರಿದು ಅವರು, “ಅವರು (ಮಕ್ಕಳು) ದೇವರ ಹಾದಿಯಲ್ಲಿ ಮರಣ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಸಭೆಯಲ್ಲಿದ್ದ ಜನಸಮೂಹವು ಅಮೆರಿಕ ಮತ್ತು ಇಸ್ರೇಲ್‌ನ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿತ್ತು. ಮತ್ತು ‘ಶರಣಾಗತಿ ಇಲ್ಲ’ (No surrender) ಎಂದು ಜೋರಾಗಿ ಹೇಳುತ್ತಿತ್ತು.

ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರು ಸೋಮವಾರದಂದು, ಶಾಲಾ ವಿದ್ಯಾರ್ಥಿನಿಯರ ಹತ್ಯೆಗೆ ಅಮೆರಿಕ ಮತ್ತು ಇಸ್ರೇಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಮಕ್ಕಳನ್ನು ದಫನ ಮಾಡಲು ತೋಡಿದ್ದ ಗುಂಡಿಗಳ ಫೋಟೋ ಹಂಚಿಕೊಂಡಿದ್ದ ಅರಾಗ್ಚಿ, “ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಪ್ರಾಥಮಿಕ ಶಾಲೆಯ ಮೇಲಿನ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ 160ಕ್ಕೂ ಹೆಚ್ಚು ಮುಗ್ಧ ಹೆಣ್ಣು ಮಕ್ಕಳ ಸಮಾಧಿಗಳಿವು. ದಾಳಿಯಲ್ಲಿ ಮಕ್ಕಳ ದೇಹಗಳು ಛಿದ್ರಛಿದ್ರವಾಗಿವೆ” ಎಂದು ಬರೆದುಕೊಂಡಿದ್ದರು.

“ಇದು ಮಿಸ್ಟರ್ ಟ್ರಂಪ್ ವಾಗ್ದಾನ ಮಾಡಿದ ರಕ್ಷಣಾ ಕಾರ್ಯದ ಅಸಲಿ ರೂಪ. ಗಾಝಾದಿಂದ ಮಿನಾಬ್‌ವರೆಗೆ ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಅರಾಗ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಿಂದ ಇರಾನ್‌ನಲ್ಲಿ ಹಲವು ಆಸ್ಪತ್ರೆಗಳು ಮತ್ತು ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಇರಾನ್‌ ನಾಯಕರು ಅಂತಾರಾಷ್ಟ್ರೀಯ ಮಟ್ಟದ ಕ್ರಮ ಮತ್ತು ಒಗ್ಗಟ್ಟಿಗೆ ಕರೆ ನೀಡಿದ್ದಾರೆ.

ಇರಾನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯಿ ಸೋಮವಾರ ಮಾತನಾಡಿ, “ಅಮೆರಿಕ ಮತ್ತು ಇಸ್ರೇಲ್ ಯಾವುದೇ ವ್ಯತ್ಯಾಸವಿಲ್ಲದೆ ವಸತಿ ಪ್ರದೇಶಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿವೆ. ಅವು ಆಸ್ಪತ್ರೆಗಳು, ಶಾಲೆಗಳು, ರೆಡ್ ಕ್ರೆಸೆಂಟ್ ಸೌಲಭ್ಯಗಳು ಮತ್ತು ಸಾಂಸ್ಕೃತಿಕ ಸ್ಮಾರಕಗಳನ್ನೂ ಬಿಡುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ವಿಶ್ವಸಂಸ್ಥೆಯ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯಾದ ಯುನೆಸ್ಕೋ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ ಮಲಾಲ ಯೂಸುಫ್‌ಝೈ ಅವರು ಶಾಲೆ ಮೇಲಿನ ದಾಳಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಛೇರಿಯು ಈ ದಾಳಿಯ ಕುರಿತು ತಕ್ಷಣದ, ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸುವಂತೆ ಕರೆ ನೀಡಿದೆ. ವಿಶ್ವಸಂಸ್ಥೆಯ ಹೈಕಮಿಷನರ್ ವೋಲ್ಕರ್ ಟರ್ಕ್ ಅವರ ಕಛೇರಿಯ ವಕ್ತಾರರಾದ ರವೀನಾ ಶಮದಾಸನಿ ಅವರು ಮಾತನಾಡುತ್ತಾ, ಈ ದಾಳಿಯು ‘ಯುದ್ಧಾಪರಾಧ’ ಎಂದು ನಿರ್ಧರಿಸಲು ತಮ್ಮ ಕಛೇರಿಯ ಬಳಿ ಸದ್ಯಕ್ಕೆ ಸಾಕಷ್ಟು ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಇದು ಅತ್ಯಂತ ಭಯಾನಕವಾದುದು ಎಂದು ಶಮದಾಸನಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋಗಳು ಈ ಸಂಘರ್ಷದ ವಿನಾಶ, ಹತಾಶೆ, ಅರ್ಥಹೀನತೆ ಮತ್ತು ಕ್ರೌರ್ಯದ ನೈಜ ಸ್ವರೂಪವನ್ನು ತೋರಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂತರರಾಷ್ಟ್ರೀಯ ಮಾನವೀಯ ಕಾನೂನಿನಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು ಅಥವಾ ಯಾವುದೇ ನಾಗರಿಕ ಮೂಲಸೌಕರ್ಯಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡುವುದು ಯುದ್ಧಾಪರಾಧ ಎಂದು ಪರಿಗಣಿಸಲಾಗುತ್ತದೆ.

“ಅದು ನಮ್ಮ ದಾಳಿಯಾಗಿದ್ದರೆ ಯುದ್ಧ ಇಲಾಖೆ ತನಿಖೆ ನಡೆಸುತ್ತದೆ ಮತ್ತು ನಿಮ್ಮ ಪ್ರಶ್ನೆಯನ್ನು ನಾನು ಅವರಿಗೆ ಉಲ್ಲೇಖಿಸುತ್ತೇನೆ” ಎಂದು ಘಟನೆಯ ಬಗ್ಗೆ ಕೇಳಿದಾಗ ಸೋಮವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಉದ್ದೇಶಪೂರ್ವಕವಾಗಿ ಶಾಲೆಯನ್ನು ಗುರಿಯಾಗಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳಿಂದ ನಾಗರಿಕರಿಗೆ ಹಾನಿಯಾಗಿದೆ ಎಂಬ ವರದಿಗಳನ್ನು ಪರಿಶೀಲಿಸುತ್ತಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ ಮಾಧ್ಯಮಗಳಿಗೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...