Homeಮುಖಪುಟಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ತೆರಳಿರುವ ಪ್ರಧಾನಿ ಮೋದಿ

ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ತೆರಳಿರುವ ಪ್ರಧಾನಿ ಮೋದಿ

ನಿನ್ನೆಯಷ್ಟೇ ಉತ್ತರ ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ಐದು ಸೈನಿಕರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.

- Advertisement -
- Advertisement -

ಸತತ ಏಳನೇ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದು, ಈ ಬಾರಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸೈನಿಕರು ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜವಾನರೊಂದಿಗೆ ಕಳೆಯಲಿದ್ದಾರೆ. ಲಾಂಗ್‌ವಾಲಾದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಇದು ಮೂಲತಃ ಬಿಎಸ್‌ಎಫ್ ಪೋಸ್ಟ್‌ ಆಗಿದ್ದು, 1971 ರ ಇಂಡೋ-ಪಾಕಿಸ್ತಾನ ಯುದ್ಧದ ಸಮಯ ಪಶ್ಚಿಮ ದಿಕ್ಕಿನಲ್ಲಿ ಭಾರತದ ಒಂದು ಪ್ರಮುಖ ಆಯಕಟ್ಟಿನ ಪ್ರದೇಶವಾಗಿತ್ತು.

ನಿನ್ನೆಯಷ್ಟೇ ಉತ್ತರ ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ಐದು ಸೈನಿಕರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಐವರು ಯೋಧರೂ ಸೇರಿ 8 ಮಂದಿ ಸಾವು

ಪ್ರಧಾನಿ ಮೋದಿಯೊಂದಿಗೆ ಬಿಎಸ್ಎಫ್ ಮಹಾನಿರ್ದೇಶಕ ರಾಕೇಶ್ ಅಸ್ತಾನಾ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಎಂ.ಎಂ.ನಾರ್ವಾನೆ ಇರಲಿದ್ದಾರೆ. ಈ ಬಗ್ಗೆ ಪ್ರಧಾನಿ ನಿನ್ನೆ ಟ್ವೀಟ್ ಮಾಡಿ ಗಡಿಯಲ್ಲಿ ನಮ್ಮನ್ನು ರಕ್ಷಿಸುವವ ಸೈನಿಕರಿಗಾಗಿ ಹಣತೆಯನ್ನು ಬೆಳಗಿಸುವಂತೆ ಕೇಳಿಕೊಂಡಿದ್ದರು.

ಈ ವರ್ಷ ಪ್ರಧಾನಿಯು ಸೈನಿಕರೊಂದಿಗೆ ನಡೆಸುವ ಎರಡನೇ ಸಂವಹನವಾಗಿದೆ ಇದು. ಕಳೆದ ಜೂನ್‌ 14 ರಂದು ಗಾಲ್ವನ್ ಕಣಿವೆಯಲ್ಲಿ ನಡೆದ ಹಿಂಸಾಚಾರದಿಂದಾಗಿ ಭಾರತೀಯ ಸೈನ್ಯದ 20 ಸೈನಿಕರು ಸಾವನ್ನಪ್ಪಿದ ನಂತರ ಜುಲೈನಲ್ಲಿ ಲಡಾಖ್‌‌ನಲ್ಲಿ ಸೈನಿಕರನ್ನು ಭೇಟಿಯಾಗಿದ್ದರು.

ಇದು ಸೈನಿಕರೊಂದಿಗೆ ಪ್ರಧಾನ ಮಂತ್ರಿ ಆಚರಿಸುತ್ತಿರುವ ಏಳನೇ ದೀಪಾವಳಿಯಾಗಲಿದೆ; 2014 ರಲ್ಲಿ ಅವರ ಮೊದಲ ದೀಪಾವಳಿ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ನಲ್ಲಿ ಆಚರಿಸಿದ್ದರು. ಕಳೆದ ವರ್ಷ ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಗೆ ದೀಪಾವಳಿ ಆಚರಿಸಲು ತೆರಳಿದ್ದರು.

ಇದನ್ನೂ ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. I am wondering, if the purpose of this Media, which claims to be part of “Naanu Gauri” movement, is to “report” Modi’s daily routine, just like any other Media, without any critical reflections, why should Gauri’s name be used?

  2. Thank you Sir. I read the write-up once again, but this time with a hermeneutic of ‘reading between lines’, after being cautioned by you. In my ‘scond’ reading, I could indeed make sense of the critical tone. However, I still believe that the spirit of “Naanu Gauri” movement demands a more overtly vocal tone in our criticism against the fascist hypocricy so that it invokes and evokes every “common” reader.
    Thanks again. Much appreciations for your response.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...