Homeಮುಖಪುಟಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ

- Advertisement -
- Advertisement -

ಸಾವಿರ ಕನಸುಗಳಿದ್ದ ತರುಣಿ ಮನಿಶಾಳ ದೇಹದ ಮೇಲೆ ನಡೆದ ಅತಿ ಘೋರ, ಬರ್ಬರ ಹಿಂಸೆ, ಆ ಅನ್ಯಾಯದ ಸಾವು, ಬಡಹೆಣ್ಣುಗಳ ಬಗೆಗೆ ರಕ್ಷಕ ವ್ಯವಸ್ಥೆಗಿರುವ ಕಣ್ಣಿಗೆ ರಾಚುವಂತಹ ನಿರ್ಲಕ್ಷ್ಯ ಮನುಷ್ಯ ಮಾತ್ರರ ಕಣ್ಣಲ್ಲಿ ನೆತ್ತರು ಉಕ್ಕಿಸುವಂತಹುದು. ಯಾವ ಹೆಣ್ಣುಜೀವಕ್ಕೂ ಇಂತಹ ಬರ್ಬರ ಅಂತ್ಯ ಬಾರದಿರಲಿ.

ಸಮಾಜ ಹೆಣ್ಣನ್ನು ಸದಾ ಶರಣಾಗತ ಸ್ಥಿತಿಯಲ್ಲಿಡಲು ಅತ್ಯಾಚಾರ ಎಂಬ ಅಸ್ತ್ರ ಬಳಸಿಕೊಂಡು ಬಂದಿದೆ. ಅನಾದಿಯಿಂದಲೂ ಯುದ್ಧವಿರಲಿ, ದಂಗೆಯಿರಲಿ ಅಥವಾ ಕ್ರಾಂತಿಯಿರಲಿ; ಯಾವ ಪಕ್ಷವಾದರೂ ಸೋಲಲಿ ಅಥವಾ ಗೆಲ್ಲಲಿ – ಈ ಕ್ರೌರ್ಯ, ಉನ್ಮಾದಗಳ ಅಂತಿಮ ಬಾಧಿತಳು ಮಹಿಳೆಯೇ ಆಗಿದ್ದಾಳೆ. ಇಂತಹ ಉಸಿರುಗಟ್ಟುವ ಪುರುಷಪ್ರಧಾನ ವ್ಯವಸ್ಥೆಯಲ್ಲಿ ಅತ್ಯಾಚಾರವು ಕೇವಲ ಬಲವಂತದ ಲೈಂಗಿಕ ಕ್ರಿಯೆ ಅಲ್ಲ. ಒಬ್ಬ ವ್ಯಕ್ತಿಯಾಗಿ/ಮನುಷ್ಯಳಾಗಿ ಹೆಣ್ಣನ್ನು ನಾಶ ಮಾಡುವ; ಹೆಣ್ಣನ್ನು ನೀನು ಹೆಂಗಸು ಎಂದು ಬೆದರಿಸುವ; ಅಧಿಕಾರವಿರುವ ವರ್ಗ ಅಧಿಕಾರವಂಚಿತರನ್ನು ಹಿಡಿತದಲ್ಲಿಟ್ಟುಕೊಳ್ಳುವ ರಾಜಕೀಯ ಸಾಧನವಾಗಿದೆ. ಈ ಮಾತು ದಲಿತ ಸೋದರಿಯರಿಗೆ ಹೆಚ್ಚು ಅನ್ವಯಿಸುತ್ತದೆ.

ಇದನ್ನೂ ಓದಿ:ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಅತ್ಯಾಚಾರವೊಂದು ವಿಲಕ್ಷಣ ಅಪರಾಧ. ಅದು ಇದ್ದಕ್ಕಿದ್ದಂತೆ ಸಂಭವಿಸಿಬಿಡುವುದಿಲ್ಲ. ಅಪರಾಧಿ ಮತ್ತು ಆ ಮನಸ್ಸು ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿರುತ್ತದೆ. ಪೂರ್ವ ತಯಾರಿ ನಡೆಸಿರುತ್ತದೆ. ಅದಕ್ಕೆಂದೇ ನಮ್ಮ ದಲಿತ ಸೋದರಿಯರು ಅತ್ಯಂತ ಬರ್ಬರವಾಗಿ ದೌರ್ಜನ್ಯಕ್ಕೊಳಗಾಗಿ, ಕೊಲೆಯಾಗಿ ಹೋಗುತ್ತಾರೆ. ದೇಶವೇ ಎದ್ದು ಕುಣಿದರೂ ನಾಲಿಗೆ ಕತ್ತರಿಸಲ್ಪಟ್ಟ ಮನಿಶಾಗಳು ‘ಸೂಕ್ತ ಸಾಕ್ಷ್ಯಾಧಾರ’ ಒದಗಿಸಲಾರದೆ ಕೇಸು ಬಿದ್ದು ಹೋಗುತ್ತವೆ.

ಈ ಹೊತ್ತು ಅಧ್ಯಯನ ಶಿಬಿರವೊಂದರಲ್ಲಿ ದಲಿತ ಸೋದರಿಯರು ಕೇಳಿದ, ವಿಸ್ತೃತ ಚರ್ಚೆಗೊಳಗಾದ ಪ್ರಶ್ನೆಗಳು ನೆನಪಾಗುತ್ತಿವೆ. ದಿನನಿತ್ಯ ನಡೆಯುವ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಬಗೆಗೆ ಮಾಧ್ಯಮದವರಾಗಲೀ, ಆಡಳಿತ ಮತ್ತು ನ್ಯಾಯವ್ಯವಸ್ಥೆಯಾಗಲೀ, ಮಹಿಳಾ ಸಂಘಟನೆಗಳಾಗಲೀ ಒಮ್ಮೆಲೇ ಏಕೆ ಪ್ರತಿಕ್ರಿಯಿಸುವುದಿಲ್ಲ? ಖೈರ್ಲಾಂಜಿ, ನಾಗಲಾಪಲ್ಲಿಗಳಂತಹ ಎಷ್ಟೋ ಬರ್ಬರ ಅತ್ಯಾಚಾರ-ಸಾವುಗಳು ಸಂಭವಿಸಿದರೂ ಅವು ದೆಹಲಿ ಪ್ರಕರಣದಷ್ಟು ಪ್ರಾಮುಖ್ಯತೆ ಏಕೆ ಪಡೆಯಲಿಲ್ಲ? ತಳಹಂತದ ನ್ಯಾಯಾಲಯಗಳಲ್ಲಿ ಸಿಕ್ಕ ನ್ಯಾಯವು ಮತ್ತೆ ಮೇಲ್ಮನವಿಯಾಗಿ ಮೇಲಿನ ನ್ಯಾಯಾಲಯಗಳಿಗೆ ಹೋದದ್ದೇ ತಿರುಗುಮುರುಗು ಆಗುವುದೇಕೆ?

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ಹೌದು. ಎಲೈಟ್ ಜಾತಿ/ವರ್ಗ ಅನುಭವಿಸುವ ಕಷ್ಟಗಳಿಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ದೊರೆಯುತ್ತದೆ. ವ್ಯವಸ್ಥೆಯ ಗಮನ ಸೆಳೆದು ಪರಿಹಾರವೂ ಬೇಗ ದೊರೆಯುತ್ತದೆ. ನ್ಯಾಯದಾನ ವ್ಯವಸ್ಥೆ ಕೂಡ ವರ್ಗ/ಜಾತಿ ತಾರತಮ್ಯ ತೋರಿಸುತ್ತದೆ. ಬ್ರಿಟಿಷರು ಅತ್ಯಾಚಾರ ಕಾಯ್ದೆ ತಂದಾಗ ಕೆಲ ಮ್ಯಾಜಿಸ್ಟ್ರೇಟುಗಳು ತಮ್ಮ ತೀರ್ಪಿನಲ್ಲಿ ಮೇಲ್ಜಾತಿ ಹೆಣ್ಣು ಕೆಳಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಹೆಚ್ಚು ‘ಮಾನ’ ನಷ್ಟವಾಗುವುದಾಗಿಯೂ; ಕೆಳಜಾತಿ ಹೆಣ್ಣು ಮೊದಲೇ ‘ಸಡಿಲ’ ನಡತೆಯವಳಾಗಿರುವ ಕಾರಣ ಮೇಲ್ಜಾತಿ ಗಂಡಿನಿಂದ ಅತ್ಯಾಚಾರಕ್ಕೊಳಗಾದರೆ ಮಾನ ನಷ್ಟ ಕಡಿಮೆ ಎಂದೂ ತೀರ್ಪು ಬರೆಯುತ್ತಿದ್ದರು! 1995ರಲ್ಲಿ ಭಂವರಿದೇವಿ ಅತ್ಯಾಚಾರ ಪ್ರಕರಣದಲ್ಲಿಯೂ ರಾಜಸ್ಥಾನ ಹೈಕೋರ್ಟು ಮೇಲ್ಜಾತಿ ಪುರುಷರು ದಲಿತ ಭಂವರಿಯ ಅತ್ಯಾಚಾರ ಮಾಡಿರಲಿಕ್ಕಿಲ್ಲ ಎಂದು ಇಂಥದೇ ತೀರ್ಪು ಬರೆಯಿತು!

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಹೀಗೆ ಅಸಮಾನ ಭಾರತದ ಪೊಲೀಸ್ ಮತ್ತು ನ್ಯಾಯವ್ಯವಸ್ಥೆಗಳು ಜಾತಿಪೂರ್ವಗ್ರಹದಿಂದ ಮುಕ್ತವಲ್ಲದೆ ಇರುವಾಗ ಪ್ರಕರಣಗಳ ದಾಖಲು, ವರದಿ, ನ್ಯಾಯದಾನ, ಶಿಕ್ಷೆ ಎಲ್ಲದರಲ್ಲೂ ಜಾತಿ/ವರ್ಗಗಳು ಪ್ರಮುಖ ಪಾತ್ರ ವಹಿಸುತ್ತವೆ. ಲಿಂಗಸಂಬಂಧ ಮತ್ತು ಲಿಂಗ ತಾರತಮ್ಯದೊಂದಿಗೆ ಭಾರತೀಯ ಜಾತಿವ್ಯವಸ್ಥೆ ಅವಿನಾ ಸಂಬಂಧ ಹೊಂದಿದ್ದು ಶೋಷಣೆಗೆ ಜಾತಿಯೂ ಒಂದು ಪ್ರಬಲ ಅಸ್ತ್ರವಾಗಿದೆ. ಎಂದೇ ಮಹಿಳಾ ಚಳುವಳಿ ತಮ್ಮನ್ನು ಒಳಗೊಳ್ಳುವ ಕುರಿತು ತಳಸಮುದಾಯಗಳಿಗೆ ಆಳದ ಅವಿಶ್ವಾಸ ಬೆಳೆದುಬಂದಿದೆ.

ಹೀಗಿರುತ್ತ ನಮ್ಮೊಳಗಿನ್ನೂ ಜೀವಂತವಿರಬಹುದಾದ ಜಾತಿವಾದ, ಜಾತಿ ಪೂರ್ವಗ್ರಹಗಳೆಂಬ ಕಿಲುಬನ್ನು ಸೋದರಿತ್ವದ ಪ್ರೀತಿಯಿಂದ ಉಜ್ಜಿ, ತಿಕ್ಕಿ ಸ್ವಚ್ಛಗೊಳಿಸಲೇಬೇಕಿದೆ.


ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ: ಬೆಂಗಳೂರು ಹಾಗೂ ತುಮಕೂರಿನಲ್ಲಿ ನಾಳೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...