Homeದಿಟನಾಗರಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ...

ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ 3 ವರ್ಷ ಹಳೆಯದು!

- Advertisement -
- Advertisement -

‘ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ನಂತರ ಕಾಶಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ’ ಎಂದು ಪ್ರತಿಪಾದಿಸಿ ಜನರು ರಸ್ತೆಯಲ್ಲಿ ತಾಳವನ್ನು ತಟ್ಟುತ್ತಾ ಕುಣಿಯುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಕಾಶಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಸುದ್ದಿ ಹಬ್ಬಿದ ನಂತರ ಈ ಸಂಭ್ರಮಾಚರಣೆ ಮಾಡಲಾಗಿದೆಯೇ? ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆಯನ್ನು ಪರಿಶೀಲಿಸೋಣ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫ್ಯಾಕ್ಟ್‌ಚೆಕ್

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ವಿಡಿಯೊಗೆ ಸಂಬಂಧಿಸಿದಂತೆ ಯಾವುದೇ ವಿಶ್ವಾಸಾರ್ಹ ಮೂಲಗಳು ನಮಗೆ ಕಂಡುಹಿಡಿಯಲಾಗಲಿಲ್ಲ. ನಂತರ ಸಂಬಂಧಿತ ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಿದಾಗ, YouTube ಚಾನಲ್‌ನಲ್ಲಿ ಅದೇ ವೀಡಿಯೊವನ್ನು ಕಂಡುಬಂದಿದೆ. ಈ YouTube ಬಳಕೆದಾರರು ಈ ವೀಡಿಯೊವನ್ನು 12 ಆಗಸ್ಟ್ 2019 ರಂದು “ವಾರಣಾಸಿಯಲ್ಲಿ ಮಂಜೀರ ದಮ್ರೂ ಜೂಲೂಸ್” ಎಂಬ ಶೀರ್ಷಿಕೆಯೊಂದಿಗೆ ಇದನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ಜ್ಞಾನವಾಪಿ ಮಸೀದಿಯಲ್ಲಿ ಇತ್ತೀಚಿನ ನಡೆಸಲಾದ ಸಮೀಕ್ಷೆಯ ಸಮಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಸುಳ್ಳು ಸುದ್ದಿ ಹರಡಿತ್ತು. ಈ ಸಂದರ್ಭದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗಿರುವ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದಾಗಿದೆ. ಶಿವಲಿಂಗ ಪತ್ತೆಯಾಗಿದೆ ಎಂಬ ಸುದ್ದಿ ಹಿನ್ನಲೆಯಲ್ಲಿ ಜನರು ಖುಷಿಪಟ್ಟ ವಿಡಿಯೊ ಇದಲ್ಲ. ಹಲವರು ಈ ವೀಡಿಯೊವನ್ನು 2021ರಲ್ಲಿ ಕೂಡಾ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಈ ಆಚರಣೆ ಯಾವಾಗ ನಡೆದಿದೆ ಎಂದು ನಿಖರವಾದ ದಿನಾಂಕ ಮತ್ತು ಸ್ಥಳವನ್ನು  ಖಚಿತಪಡಿಸಲು ಸಾಧ್ಯವಾಗದಿದ್ದರೂ, ಪೋಸ್ಟ್‌ನಲ್ಲಿ ಹಂಚಿಕೊಂಡ ವೀಡಿಯೊ ಹಳೆಯದು ಮತ್ತು ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನುವ ಹಿನ್ನಲೆಯಲ್ಲಿ ಈ ಸಂಭ್ರಮಾಚರಣೆ ನಡೆದಿದೆ ಎನ್ನುವುದಕ್ಕೆ ಯಾವುದೆ ಆಧಾರ ಇಲ್ಲ. ಹಾಗಾಗಿ ಈ ವಿಡಿಯೊಗೂ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗಿರುವ ಸುದ್ದಿಗೂ ಯಾವುದೇ ಸಂಬಂಧವಿಲ್ಲ ಎಂದು ಈ ಎಲ್ಲಾ ಪುರಾವೆಗಳಿಂದ ದೃಢೀಕರಿಸಬಹುದು.

ಇದನ್ನೂ ಓದಿ: ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ಒಟ್ಟಾರೆಯಾಗಿ ಹೇಳುವುದಾದರೆ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ ಆಗಸ್ಟ್ 2019 ರಿಂದ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ವೀಡಿಯೊ ಹಳೆಯದಾಗಿದ್ದು, ಜ್ಞಾನವಾಪಿ ಮಸೀದಿಯಲ್ಲಿ ಇತ್ತೀಚಿನ ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿದೆ ಎನ್ನುವ  ಶಿವಲಿಂಗಕ್ಕೂ ವಿಡಿಯೊಗೂ ಯಾವುದೇ ಸಂಬಂಧವಿಲ್ಲ. ಸಂಬಂಧವಿಲ್ಲದ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...