Homeಮುಖಪುಟಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ...

ಈ ವಾರದ 10 ಪ್ರಮುಖ ಸುದ್ದಿಗಳು: ನಾನುಗೌರಿ ಓದುಗರಿಗಾಗಿ…

- Advertisement -
- Advertisement -

1. ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್ ಹೇಳಿಕೆ!
ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಮಾಜಿ ಸಿಜೆಐ ರಂಜನ್ ಗೊಗೊಯ್!
“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.“ನೀವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಬಯಸುತ್ತೀರಿ. ಆದರೆ, ನೀವು ನ್ಯಾಯಾಂಗವನ್ನು ಕುಸಿಯುವಂತೆ ಮಾಡಿದ್ದೀರಿ. ಹಾಗಾಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಂಡು ನೀವು ನ್ಯಾಯಾಲಯಕ್ಕೆ ಹೋದರೆ ನೀವು ಯಾವುದೇ ತೀರ್ಪನ್ನೂ ಪಡೆಯಲು ಸಾಧ್ಯವಿಲ್ಲ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಇಂಡಿಯಾ ಟುಡೇ ಗ್ರೂಪ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೊಗೊಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


2. ನಿಮ್ಮ ಮನೆ 20 ವರ್ಷ ಹಳೆಯದೇ? ಹಾಗಾದರೆ ಕೂಡಲೇ ಕೆಡವಿ ಮತ್ತೆ ಕಟ್ಟಿಸಿ!ಹಳೆಯದೇನಿಮ್ಮ ಕಾರು 20 ವರ್ಷ ಹಳೆಯದೇ? ಹಾಗಾದರೆ ಅದನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸಿ ಎಂದು ಸರಕಾರ ಹೇಳಿದಾಗ ಯಾರನ್ನಾದರೂ ಪ್ರಶ್ನಿಸಿದಿರಾ, ಇಲ್ಲಾ ತಾನೆ? ಹಾಗಾದರೆ ನಾನು ಮೇಲೆ ಹೇಳಿದ ಮಾತುಗಳು ಶೀಘ್ರದಲ್ಲೇ ಸರಕಾರದ ಆದೇಶವಾಗಿ ಬರುವುದರಲ್ಲಿ ಸಂದೇಹವಿಲ್ಲ. ನಿಮ್ಮ ಬಟ್ಟೆಗಳು ಒಂದು ವರ್ಷ ಹಳೆಯದೇ? ಹಾಗಿದ್ದಲ್ಲಿ ಅವನ್ನು ಕೂಡಲೇ ಹರಿದು ಹಾಕಿ ಹೊಸ ಬಟ್ಟೆ ಕೊಂಡುಕೊಳ್ಳಿರಿ. ಮೊಬೈಲ್ ಮೂರು ವರ್ಷ ಹಳೆಯದೇ, ಅದನ್ನು ಕೂಡಲೇ ಎಸೆದು ಹೊಸದೊಂದು ಕೊಳ್ಳಿರಿ. ಲೇಖಕನಿಗೆ ತಲೆ ಕೆಟ್ಟಿದೆಯೇ ಎಂದು ಕೇಳಬೇಡಿ, ಬರುತ್ತೇನೆ ವಿಷಯಕ್ಕೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.


3. ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆಗಳ ವಿವರ

2020-21ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದು, ಪಿಯು ಪರೀಕ್ಷೆಗಳು ಮೇ. 24 ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, “ಈ ಹಿಂದೆ ಶಿಕ್ಷಣ ಇಲಾಖೆಯು ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

4. 2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ. 2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

5. ಸಂಸತ್ತಿನಲ್ಲಿ ಪ್ರಜ್ವಲಿಸಿದ ಮಹುವಾ ಮೊಯಿತ್ರಾ ರವರ ಭಾಷಣದ ಕನ್ನಡ ಅನುವಾದ

17ನೇ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರ ಹಲವು ಭಾಷಣಗಳು ದೇಶದ ಗಮನ ಸೆಳೆದಿವೆ. ಆಡಳಿತ ಕೂಟದ ಬಹುತೇಕರ ಭಾಷಣಗಳು ವಾಸ್ತವವನ್ನು ಬಿಚ್ಚಿಡಲಿಲ್ಲ. ಪಶ್ಚಿಮ ಬಂಗಾಳದ ಕೃಷ್ಣನಗರದ ಟಿಎಂಸಿಯ ಸಂಸದೆ ಮಹುವಾ ಮೊಯಿತ್ರ ( Mahua Moitra ) ಅವರ ಭಾಷಣ ದೇಶದ ವಾಸ್ತವ ಪರಿಸ್ಥಿತಿಯನ್ನು ತೆರದಿಟ್ಟಿದ್ದಲ್ಲದೆ, ಎಲ್ಲಡೆ ವೈರಲ್ ಆಗಿದೆ. ದೇಶದ ಹಲವು ವಿಶ್ವಾಸಾರ್ಹ ಮೀಡಿಯಾಗಳು ಮಹುವಾರ ಭಾಷಣವನ್ನು ಅರ್ಥಪೂರ್ಣ ಎಂದು ಬಣ್ಣಿಸಿವೆ. ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ಮಹುನಾರ ಭಾಷಣವನ್ನು ‘ವರ್ಷದ ಭಾಷಣ’ ( Speech of the Year) ಎಂದು ಗುರುತಿಸಿದೆ… ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

6. ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ: ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?

ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಮುಖೇಶ್ ಅಂಬಾನಿಯವರ ನಿವ್ವಳ ಮೌಲ್ಯವು 64.5 ಬಿಲಿಯನ್ ಡಾಲರ್‌ಗೆ ಏರಿದೆ. ವಿಶ್ವದ ಅಗ್ರ 10 ಶ್ರೀಮಂತ ಜನರಲ್ಲಿ ಏಷ್ಯಾದ ‌ಏಕೈಕ ಉದ್ಯಮಿ ಎಂಬ ಹೆಗ್ಗಳಿಕೆಗೆ ಅವರದಾಗಿದೆ. ಅವರು ಒರಾಕಲ್ ಕಾರ್ಪ್‌ನ ಲ್ಯಾರಿ ಎಲಿಸನ್ ಮತ್ತು ಶ್ರೀಮಂತ ಮಹಿಳೆ ಫ್ರಾನ್ಸ್‌ನ ಫ್ರಾಂಕೋಯಿಸ್ ಬೆಟೆನ್ಕೋರ್ಟ್ ಮೇಯರ್ಸ್ ಅವರನ್ನು ಹಿಂದಿಕ್ಕಿ 9 ನೇ ಸ್ಥಾನವನ್ನು ತಲುಪಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

7. ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

ಪಾರ್ಕಿಂಗ್‌ಗೆ

ರಾಜ್ಯ ಸರ್ಕಾರ ಪಾರ್ಕಿಂಗ್ 2.0 ನೀತಿ ಜಾರಿಗೆ ತರಲು ಉದ್ದೇಶಿಸಿದ್ದು, ರಸ್ತೆ ಬದಿ ಪಾರ್ಕಿಂಗ್‌ಗೆ ದುಬಾರಿ ಶುಲ್ಕ, ಮನೆ ಮುಂದೆ ಪಾರ್ಕಿಂಗ್‌ಗೆ ಸಹ ಶುಲ್ಕ ವಿಧಿಸಲು ಹೊರಟಿದೆ. ಹೊಸ ವಾಹನ ಖರೀದಿಗೆ ವಾಹನ ನಿಲುಗಡೆ ಪರವಾನಗಿ ಕಡ್ಡಾಯಗೊಳಿಸಿದ್ದು ಆರು ತಿಂಗಳಿನಿಂದ ವರ್ಷದೊಳಗೆ ಈ ನಿಯಮಗಳನ್ನು ಜಾರಿಗೊಳಿವುದಾಗಿ ತಿಳಿಸಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

8. ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಚೆಂಡಿನೊಂದಿಗೆ ಆಟವಾಡಲು ಮಿದುಳು/ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ: ನಟ ಚೇತನ್

“ಚೆಂಡಿನೊಂದಿಗೆ ಆಟವಾಡಲು ಮಿದುಳು ಅಥವಾ ಹೃದಯದ ಅವಶ್ಯಕತೆ ಹೆಚ್ಚು ಬೇಕಿಲ್ಲ” ಎಂದು ಕನ್ನಡ ಚಲನಚಿತ್ರ ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ. ರೈತರನ್ನು ಬೆಂಬಲಿಸಿದ ಅಂತರಾಷ್ಟ್ರೀಯ ಗಣ್ಯರ ವಿರುದ್ಧ ಭಾರತೀಯ ಕ್ರಿಕೆಟಿಗರು ನಡೆಸಿದ ಟ್ವೀಟ್ ದಾಳಿಯನ್ನು ಉಲ್ಲೇಖಿಸದೇ ಕ್ರಿಕರೆಟಿಗರನ್ನು ನಟ ಚೇತನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

9. ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ತ್ರಿವರ್ಣ

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

10. ಕೃಷಿ ಕಾಯ್ದೆಗಳ ಪರ ಪ್ರಚಾರ: ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಕೃಷಿ ಕಾಯ್ದೆಗಳ ಪರ ಪ್ರಚಾರಕ್ಕಾಗಿ ಒಕ್ಕೂಟ ಸರ್ಕಾರ ಖರ್ಚು ಮಾಡಿರುವ ಹಣ ಎಷ್ಟು ಗೊತ್ತೇ?

ಒಕ್ಕೂಟ ಸರ್ಕಾರದ ಕೃಷಿ ಸಚಿವ ಶುಕ್ರವಾರ ಸಂಸತ್ತಿನಲ್ಲಿ ಸಲ್ಲಿಸಿದ ವಿವರಣೆಯ ಪ್ರಕಾರ, “ಮಂತ್ರಿಗಳು ಮತ್ತು ಇತರರ ಪತ್ರಿಕಾಗೋಷ್ಠಿಗಳು ಮತ್ತು ಮಾಹಿತಿ ಪ್ರಸಾರವನ್ನು ಹೊರತುಪಡಿಸಿ, ವಿವಿಧ ಸರ್ಕಾರಿ ಇಲಾಖೆಗಳು ಕಳೆದ 4-5 ತಿಂಗಳಿನಲ್ಲಿ ಜಾಹೀರಾತು ನೀಡುವ ಸಲುವಾಗಿ ಬಹುಪಾಲು ಮೊತ್ತವನ್ನು ಖರ್ಚು ಮಾಡಿದೆ. ಐಬಿ ಸಚಿವಾಲಯದ ಅಡಿಯಲ್ಲಿ ಗರಿಷ್ಟ 7.25 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ” ಎಂದು ತಿಳಿದುಬಂದಿದೆ. ಹೆಚ್ಚಿನ ಓದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...