Homeಮುಖಪುಟತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ ಆರೋಪಿಗಳಾದ ಎಲ್ಲಾ ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ದೋಷಿಗಳು ಎಂದು ಸೋಮವಾರ (ಮಾರ್ಚ್ 23, 2026) ನ್ಯಾಯಾಲಯ ಘೋಷಿಸಿದೆ.

ತಂದೆ ಮಗ ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆಯಿಂದ ಸಾವನ್ನಪ್ಪಿದ ಸುಮಾರು ಆರು ವರ್ಷಗಳ ನಂತರ, ಮದುರೈನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಜಿ. ಮುತ್ತುಕುಮಾರನ್ ಅವರು ಮಾರ್ಚ್ 30ರಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸುವುದಾಗಿ ಹೇಳಿದ್ದು, ಅಲ್ಲಿಯವರೆಗೆ ಅಪರಾಧಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

ನ್ಯಾಯಾಧೀಶರು ಆರೋಪಿಗಳಾದ ಪೊಲೀಸ್ ಸಿಬ್ಬಂದಿಯನ್ನು ಕೊಲೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ಸೆಕ್ಷನ್‌ಗಳಡಿ ದೋಷಿಗಳೆಂದು ಘೋಷಿಸಿದ್ದಾರೆ. ಅಪರಾಧಿಗಳಾದ ಪೊಲೀಸ್ ಸಿಬ್ಬಂದಿಯ ವೈದ್ಯಕೀಯ ಸ್ಥಿತಿಗತಿಯ ಬಗ್ಗೆ ನ್ಯಾಯಾಧೀಶರು ವರದಿಯನ್ನು ಕೇಳಿದ್ದು, ಮದುರೈ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಅಪರಾಧಿಗಳನ್ನು ಮದುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಲು ಸೂಚಿಸಿದ್ದಾರೆ. ಅವರ ಕೊನೆಯ ಆಸ್ತಿ ವಿವರ ಮತ್ತು ಸಂಬಳದ ಪ್ರಮಾಣಪತ್ರಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಅಷ್ಟೇ ಅಲ್ಲದೆ, ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ಸಹಕಾರಿಯಾಗುವಂತಹ ಪೂರಕ ಅಥವಾ ತಗ್ಗಿಸುವ ಸಂದರ್ಭಗಳ (aggravating/mitigating circumstances) ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವರದಿಯನ್ನು ನ್ಯಾಯಾಲಯ ಕೇಳಿದೆ.

ಶಿಕ್ಷೆ ನೀಡುವ ಮೊದಲು ನ್ಯಾಯಾಲಯವು ‘ಈ ಅಪರಾಧ ಎಷ್ಟು ಘೋರವಾಗಿದೆ?’ ಮತ್ತು ‘ಅಪರಾಧಿಗೆ ರಿಯಾಯಿತಿ ನೀಡಲು ಯಾವುದಾದರೂ ಮಾನವೀಯ ಕಾರಣಗಳಿವೆಯೇ?’ ಎಂದು ಪರಿಶೀಲಿಸಲು ಈ ವರದಿಗಳನ್ನು ಕೇಳುತ್ತದೆ.

2020ರ ಜೂನ್‌ನಲ್ಲಿ ನಡೆದ ಕಸ್ಟಡಿ ಸಾವು ಘಟನೆಯು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿತ್ತು ಮತ್ತು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠವು ಈ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ಸರ್ಕಾರಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು.

ಈ ಪ್ರಕರಣದಲ್ಲಿ ಒಟ್ಟು 10 ಪೊಲೀಸ್ ಸಿಬ್ಬಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಅವರಲ್ಲಿ ಒಬ್ಬರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟಿದ್ದರು. ಉಳಿದ ಒಂಬತ್ತು ಪೊಲೀಸ್ ಸಿಬ್ಬಂದಿಯ ವಿಚಾರಣೆ ಸಿಬಿಐ ನ್ಯಾಯಾಲಯದಲ್ಲಿ ನಡೆದಿತ್ತು.

ಸಿಬಿಐ ಸೆಪ್ಟೆಂಬರ್ 25, 2020ರಂದು ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿತ್ತು. ಆಗಸ್ಟ್ 12, 2022ರಂದು ಪೂರಕ ಚಾರ್ಜ್‌ಶೀಟ್ ಅನ್ನು ದಾಖಲಿಸಿತ್ತು. ಅದರಲ್ಲಿ ಸಾತನ್‌ಕುಳಂ ಇನ್ಸ್‌ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಾಮಿದುರೈ, ಹಾಗೂ ಕಾನ್‌ಸ್ಟೆಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲದುರೈ, ಎಕ್ಸ್. ಥಾಮಸ್ ಫ್ರಾನ್ಸಿಸ್ ಮತ್ತು ಎಸ್. ವೈಲುಮುತ್ತು ಅವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸ್ಪೆಷಲ್ ಸಬ್ ಇನ್ಸ್‌ಪೆಕ್ಟರ್ ಪಾಲ್‌ದೊರೈ ಕೂಡ ಆರೋಪಿಯಾಗಿದ್ದರು, ಆದರೆ ವಿಚಾರಣೆಯ ಅವಧಿಯಲ್ಲಿ ಅವರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟರು.

ಸಿಬಿಐ ತನ್ನ ಚಾರ್ಜ್‌ ಶೀಟ್‌ನಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರ ಸಾವು ಸಂಭವಿಸಬಹುದು ಎಂದು ತಿಳಿದಿದ್ದರೂ ಪೊಲೀಸರು ಅವರಿಗೆ ಅತ್ಯಂತ ಕ್ರೂರವಾದ ಚಿತ್ರಹಿಂಸೆ ನೀಡಿದ್ದಾರೆ. ಪೊಲೀಸರು ತಂದೆ-ಮಗ ಕೋವಿಡ್-19 ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಿದ್ದರು. ಆದರೆ, ತನಿಖೆಯ ಸಮಯದಲ್ಲಿ ಅವರು ಯಾವುದೇ ನಿಯಮಗಳನ್ನು ಉಲ್ಲಂಘಿಸಿರಲಿಲ್ಲ ಎಂದು ತಿಳಿದು ಬಂದಿರುವುದಾಗಿ ಹೇಳಿತ್ತು.

ಸಿಬಿಐ ತನಿಖೆಯ ಪ್ರಕಾರ, ಜೂನ್ 19, 2020ರಂದು ಸಾತನ್‌ಕುಳಂ ಪಟ್ಟಣದ ಕಾಮರಾಜ್ ಪ್ರತಿಮೆಯ ಸಮೀಪದ ಅಂಗಡಿಯಿಂದ ಜಯರಾಜ್ ಅವರನ್ನು ಬಂಧಿಸಿ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಕೂಡಿಹಾಕಲಾಗಿತ್ತು. ತಂದೆಯ ಬಂಧನದ ಬಗ್ಗೆ ವಿಚಾರಿಸಲು ತೆರಳಿದ್ದ ಬೆನಿಕ್ಸ್ ಸೇರಿದಂತೆ ಇಬ್ಬರನ್ನೂ ಪೊಲೀಸರು ಕ್ರೂರವಾಗಿ ಥಳಿಸಿ, ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ್ದರು.

ರಾತ್ರಿಯಿಡೀ ಪೊಲೀಸರ ಚಿತ್ರಹಿಂಸೆ ಮುಂದುವರಿದಿತ್ತು. ಜಯರಾಜ್ ಮತ್ತು ಬೆನಿಕ್ಸ್ ಅವರು ತಮ್ಮ ಗಾಯಗಳಿಂದ ಸೋರುತ್ತಿದ್ದ ರಕ್ತವನ್ನು ತಾವೇ ಸ್ವಚ್ಛಗೊಳಿಸುವಂತೆ ಪೊಲೀಸರು ಒತ್ತಾಯಿಸಿದ್ದರು. ಮರುದಿನ ಬೆಳಿಗ್ಗೆ, ಸಾಕ್ಷ್ಯವನ್ನು ನಾಶಪಡಿಸುವ ಉದ್ದೇಶದಿಂದ ಪೌರಕಾರ್ಮಿಕರೊಬ್ಬರನ್ನು ಕರೆಸಿ ರಕ್ತದ ಕಲೆಗಳನ್ನು ಅಳಿಸಿಹಾಕಿದ್ದರು. ಇದರ ಜೊತೆಗೆ, ಅವರಿಬ್ಬರ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿದ್ದರು ಎಂದು ಸಿಬಿಐ ತಿಳಿಸಿದೆ. ಪೂರಕ ಚಾರ್ಜ್‌ಶೀಟ್‌ನಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳ ಪರಿಶೀಲನಾ ವರದಿಯನ್ನು ಕೂಡ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಮದುರೈ ಪೀಠವು ಮಹಿಳಾ ಹೆಡ್ ಕಾನ್‌ಸ್ಟೆಬಲ್ ಸಾಕ್ಷ್ಯ, ವೈದ್ಯಕೀಯ ವರದಿ ಮತ್ತು ಮ್ಯಾಜಿಸ್ಟ್ರೇಟ್ ವರದಿಯನ್ನು ಪರಿಗಣಿಸಿ, ಕಸ್ಟಡಿ ಸಾವಿನಲ್ಲಿ ಭಾಗಿಯಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮೇಲ್ನೋಟಕ್ಕೆ ಆಧಾರಗಳಿವೆ ಎಂದು ಹೇಳಿದೆ. ನ್ಯಾಯಾಂಗ ತನಿಖೆಯು ಪೊಲೀಸರ ಅಮಾನವೀಯ ವರ್ತನೆಯನ್ನು ಬಹಿರಂಗಪಡಿಸಿದೆ.

 


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...