Homeಮುಖಪುಟತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ ಅಪರಾಧಿಗಳಾದ ಎಲ್ಲಾ ಒಂಬತ್ತು ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈನ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಏಪ್ರಿಲ್ 6) ಐತಿಹಾಸಿಕ ತೀರ್ಪು ನೀಡಿದೆ.

“ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬಾಧ್ಯಸ್ಥರಾಗಿರುವ ಪೊಲೀಸ್ ಅಧಿಕಾರಿಗಳೇ ಕಾನೂನಿಗೆ ವಿರುದ್ಧವಾಗಿ ವರ್ತಿಸಿ, ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲದ ತಂದೆ- ಮಗನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಅಪರೂಪದ ಪ್ರಕರಣ ಇದಾಗಿದೆ ಎಂದು ತೀರ್ಪು ಪ್ರಕಟಿಸಿದ ನ್ಯಾಯಾಧೀಶ ಮುತ್ತುಕುಮಾರನ್ ಅವರು ಅಭಿಪ್ರಾಯಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಅಧಿಕಾರಿಗಳು ಒಟ್ಟು 1.40 ಕೋಟಿ ರೂ. ಪರಿಹಾರವನ್ನು ನೀಡುವಂತೆಯೂ ಆದೇಶಿಸಿದ್ದಾರೆ.

ಮಾರ್ಚ್ 23ರಂದು, ನ್ಯಾಯಾಲಯವು ಒಂಬತ್ತು ಪೊಲೀಸ್ ಅಧಿಕಾರಿಗಳನ್ನು ಐಪಿಸಿ ಸೆಕ್ಷನ್ 342, 195, 211, 218 ಮತ್ತು 302 ರ ಜೊತೆಗೆ ಸೆಕ್ಷನ್ 109 ಮತ್ತು 34 ರ ಅಡಿಯಲ್ಲಿ ಅಪರಾಧಿಗಳು ಎಂದು ಘೋಷಿಸಿತ್ತು. ಅಪರಾಧಿಗಳ ಹಿಂದಿನ ಆಸ್ತಿ ವಿವರ ಮತ್ತು ಅವರ ಸಂಬಳದ ಪ್ರಮಾಣಪತ್ರದ ಬಗ್ಗೆ ವರದಿ ನೀಡುವಂತೆ ನ್ಯಾಯಾಲಯವು ಸೂಚಿಸಿತ್ತು. ಅಲ್ಲದೆ, ಶಿಕ್ಷೆಯನ್ನು ಹೆಚ್ಚಿಸುವ ಅಥವಾ ಕಡಿಮೆ ಮಾಡುವ ಸಂದರ್ಭಗಳ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ವರದಿಯನ್ನು ಕೇಳಿತ್ತು. ಇದರ ನಂತರ, ಏಪ್ರಿಲ್ 2ರಂದು ವರದಿಗಳನ್ನು ಸಲ್ಲಿಸಲಾಯಿತು ಮತ್ತು ಶಿಕ್ಷೆಯ ಪ್ರಮಾಣದ ಕುರಿತು ನ್ಯಾಯಾಲಯವು ವಾದ-ಪ್ರತಿವಾದಗಳನ್ನು ಆಲಿಸಿತು. ಸಿಬಿಐ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆಗೆ ಒತ್ತಾಯಿಸಿದ್ದರೆ, ಆರೋಪಿಗಳ ಪರ ವಕೀಲರು ಕನಿಷ್ಠ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದರು.

ಘೋರ ಘಟನೆಯ ಆರು ವರ್ಷಗಳ ನಂತರ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಿದ್ದಿದೆ. 2020ರ ಜೂನ್‌ನಲ್ಲಿ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ರಾತ್ರಿ 9 ಗಂಟೆಯ ನಂತರವೂ ತಮ್ಮ ಅಂಗಡಿಯನ್ನು ತೆರೆದಿದ್ದರು ಎಂಬ ಆರೋಪದ ಮೇಲೆ ಸಾತನ್‌ಕುಳಂ ಪೊಲೀಸರು ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಅಕ್ರಮವಾಗಿ ಬಂಧಿಸಿಟ್ಟು ಹಲ್ಲೆ ನಡೆಸಿದ್ದರು. ಕಸ್ಟಡಿ ಹಲ್ಲೆಯಿಂದ ತಂದೆ-ಮಗ ಸಾವನ್ನಪ್ಪಿದ್ದರು.

ಜೂನ್ 19 ತಂದೆ-ಮಗನನ್ನು ಸಾತನ್‌ಕುಳಂ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪೊಲೀಸರು ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದರು. ನಂತರ ಐಪಿಸಿ ಸೆಕ್ಷನ್ 188, 269, 294(ಬಿ), 353 ಮತ್ತು 506(2) ರ ಅಡಿಯಲ್ಲಿ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಮಗ ಬೆನ್ನಿಕ್ಸ್ ಜೂನ್ 22ರಂದು ಗಾಯಗಳಿಗೆ ಕೊನೆಯುಸಿರೆಳೆದರೆ, ತಂದೆ ಜಯರಾಜ್ ಜೂನ್ 23ರಂದು ಸಾವಿಗೀಡಾದರು.

ಸಾವಿನ ನಂತರ, 10 ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಯಿತು ಮತ್ತು ಅವರ ವಿರುದ್ಧ ಶಿಸ್ತು ಕ್ರಮವನ್ನೂ ತೆಗೆದುಕೊಳ್ಳಲಾಯಿತು. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಈ ವಿಷಯದ ಬಗ್ಗೆ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತು. ವಿಚಾರಣೆಯ ಸಂದರ್ಭದಲ್ಲಿ, ಅಧಿಕಾರಿಗಳ ವಿರುದ್ಧ ಕೊಲೆ ಆರೋಪ ಹೊರಿಸಲು ಮೇಲ್ನೋಟಕ್ಕೆ (prima facie) ಸಾಕಷ್ಟು ಸಾಕ್ಷ್ಯಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದ ಪುರಾವೆಗಳನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗಮನಿಸಿದ ನ್ಯಾಯಾಲಯವು, ತನಿಖೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ಸಿಬಿ-ಸಿಐಡಿ ಡಿವೈಎಸ್ಪಿಯವರಿಗೆ ನಿರ್ದೇಶನ ನೀಡಿತ್ತು.

ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ವಿನಂತಿಯ ಮೇರೆಗೆ ರಾಜ್ಯ ಸರ್ಕಾರವು ಈ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು. ಅಂದಿನ ಇನ್‌ಸ್ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್, ಹೆಡ್ ಕಾನ್‌ಸ್ಟೇಬಲ್‌ಗಳಾದ ಎಸ್. ಮುರುಗನ್ ಮತ್ತು ಎ. ಸಾಮಿ ದೊರೈ, ಹಾಗೂ ಕಾನ್‌ಸ್ಟೇಬಲ್‌ಗಳಾದ ಎಂ. ಮುತ್ತುರಾಜ್, ಎಸ್. ಚೆಲ್ಲದೊರೈ, ಎಕ್ಸ್. ಥಾಮಸ್ ಫ್ರಾನ್ಸಿಸ್, ಎಸ್. ವೈಲುಮುತ್ತು ಮತ್ತು ವಿಶೇಷ ಸಬ್ ಇನ್‌ಸ್ಪೆಕ್ಟರ್ ಪಾಲ್‌ದೊರೈ ಅವರ ವಿರುದ್ಧ ಐಪಿಸಿ ಸೆಕ್ಷನ್ 302, 342, 201, 182, 193, 211, 218, 120(B) ಮತ್ತು 34 ರ ಅಡಿಯಲ್ಲಿ ದೋಷಾರೋಪಣೆ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ, ವಿಚಾರಣೆ ಬಾಕಿ ಇರುವಾಗಲೇ ಪಾಲ್‌ದೊರೈ ಅವರು ಕೋವಿಡ್-19 ನಿಂದಾಗಿ ಮೃತಪಟ್ಟರು. 

ಸೋಮವಾರ ತೀರ್ಪು ಓದಿದ ನ್ಯಾಯಾಧೀಶರು, ಜಯರಾಜ್ ಮತ್ತು ಬೆನ್ನಿಕ್ಸ್ ಅವರಿಗೆ ಉಂಟಾದ ಗಾಯಗಳು ಅಸಹಜವಾಗಿದ್ದವು ಮತ್ತು ಇವೇ ಅಂತಿಮವಾಗಿ ಅವರ ಸಾವಿಗೆ ಕಾರಣವಾದವು ಎಂದು ಹೇಳಿದ್ದಾರೆ. ಈ ಗಾಯಗಳು ಸ್ವಯಂ-ಪ್ರೇರಿತ (ತಮಗೆ ತಾವೇ ಮಾಡಿಕೊಂಡಿದ್ದು) ಎಂಬ ವಾದವನ್ನು ನ್ಯಾಯಾಲಯವು ತಿರಸ್ಕರಿಸಿದೆ. ಅಲ್ಲದೆ, ಮರಣೋತ್ತರ ಪರೀಕ್ಷೆಯ ವರದಿಗಳು ಈ ಗಾಯಗಳು ನಿರಂತರ ಹಲ್ಲೆಯ ಪರಿಣಾಮವಾಗಿ ಉಂಟಾದವು ಎಂದು ಬಹಿರಂಗಪಡಿಸಿವೆ ಎಂಬುದನ್ನು ನ್ಯಾಯಾಲಯವು ಉಲ್ಲೇಖಿಸಿದೆ.

ಜಯರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳಿತ್ತು. ಆದರೂ, ಅವರ ಸಾವು ಆ ಕಾಯಿಲೆಯಿಂದ ಸಂಭವಿಸಿದೆ ಎಂದು ಹೇಳಲು ಸಾಧ್ಯವಿಲ್ಲ ಮತ್ತು ವಾಸ್ತವವಾಗಿ ಪೊಲೀಸರ ಕೈಯಿಂದ ಅನುಭವಿಸಿದ ನಿರಂತರ ಹಲ್ಲೆ ಹಾಗೂ ಗಾಯಗಳೇ ಸಾವಿಗೆ ಕಾರಣ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಮೂಲಕ, ಇದು ಕೊಲೆ ಪ್ರಕರಣವೆಂದು ನ್ಯಾಯಾಲಯವು ತೀರ್ಮಾನಿಸಿ, ಒಂಬತ್ತು ಪೊಲೀಸ್ ಅಧಿಕಾರಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದೆ.

Courtesy : livelaw.in


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...