Homeಕರ್ನಾಟಕನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ಸರೋವರ ಬೆಂಕಿಕೆರೆ

ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ಸರೋವರ ಬೆಂಕಿಕೆರೆ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (ಕೆವಿಎಸ್‌) ರಾಜ್ಯಾಧ್ಯಕ್ಷ ಸರೋವರ ಬೆಂಕಿಕೆರೆ ಆಗ್ರಹಿಸಿದ್ದಾರೆ.

ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮುಸ್ಲಿಮ್ ಧರ್ಮದವರು ಎಂಬ ಕಾರಣಕ್ಕೆ ಅವರನ್ನು ಅಲ್ಲಿಂದ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ಪ್ರಕರಣವು ಅತ್ಯಂತ ಕ್ರೂರವಾಗಿದೆ ಮತ್ತು ಯಾವುದೇ ಕಾರಕ್ಕೂ ಕ್ಷಮಾಪಣೆಗೆ ಅರ್ಹವಾಗಿರುವುದಿಲ್ಲ. ಇಂತಹ ನೀಚ ಕೃತ್ಯವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಬಗೆಯ ಕೋಮುವೈಷಮ್ಯ ಆಧಾರಿತ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. 15 ದಿನದ ಹಿಂದೆ ನಡೆದ ಈ ಘಟನೆಯಲ್ಲಿ ವಿದ್ಯಾರ್ಥಿಗಳು ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಒಂದು ಧರ್ಮದ ಮೇಲಿನ ದ್ವೇಷವು ಮುಗ್ಧ ಮಕ್ಕಳನ್ನು ಕೊಲ್ಲುವ ಹಂತಕ್ಕೆ ತಲುಪುವುದಾದರೆ, ಸಮಾಜದಲ್ಲಿ ಯಾವ ರೀತಿ ಕೋಮು ವೈಷಮ್ಯವನ್ನು ವ್ಯವಸ್ಥಿತವಾಗಿ ಬಿತ್ತಲಾಗಿದೆ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಸರೋವರ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ಸೃಷ್ಟಿಸಿದ ಕೋಮು ದ್ವೇಷದ ಮನಸ್ಥಿತಿ ಇಷ್ಟೊಂದು ನೀಚ ಮಟ್ಟಕ್ಕೆ ಇಳಿದಿದೆ ಎಂದರೆ, ಮುಂದೆ ಇದು ಯಾವ ಬಗೆಯ ದುರಂತಕ್ಕೆ ಕಾರಣವಾಗಬಹುದು ಎಂಬ ಆತಂಕವನ್ನು ಸೃಷ್ಟಿಸುತ್ತದೆ. ಧರ್ಮ ರಕ್ಷಣೆಯ ಹೆಸರಿನಲ್ಲಿ ಇನ್ನೊಂದು ಧರ್ಮದ ಬಗೆಗೆ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳ ಮೂಲಕ ಸೃಷ್ಟಿಸಿರುವ ಅಪನಂಬಿಕೆಗಳು, ಪೂರ್ವಾಗ್ರಹ ವಿಚಾರಗಳು ಹೇಗೆ ಸಮಾಜಘಾತುಕ ಶಕ್ತಿಗಳಾಗಿ ಪರಿವರ್ತನೆ ಆಗುತ್ತವೆ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ ಎಂದಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಖಚಿತಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನಾಗರಿಕ ಸಮಾಜವು ಆಂದೋಲನವನ್ನು ರೂಪಿಸಬೇಕು. ಕೋಮುವಾದಿಗಳು ಅನ್ಯಧರ್ಮದವರ ವಿರುದ್ಧ ಕೋಮುದ್ವೇಷವನ್ನು ಬಿತ್ತುತ್ತಿರುವುದರ ಪರಿಣಾಮವಾಗಿಯೇ, ಇಂತಹ ಘಟನೆಗಳು ನಡೆಯುತ್ತಿರುವುದು. ಹಾಗಾಗಿ ಈ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ತಗೆದುಕೊಳ್ಳುವ ಜೊತೆಗೆ, ಸಮಾಜದಲ್ಲಿ ಕೋಮು ಸಾಮರಸ್ಯವನ್ನು ಕದಡುತ್ತಿರುವ, ದ್ವೇಷ ಭಾಷಣ ಮಾಡುವವರ ಮೇಲೆಯೂ ಪೊಲೀಸ್ ಇಲಾಖೆ, ಸರಕಾರ ಸೂಕ್ತ ಕ್ರಮಗಳನ್ನು ತಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಕ್ಕಳಲ್ಲಿ, ಸಮುದಾಯಗಳಲ್ಲಿ ಕೋಮುದ್ವೇಷ ಬಿತ್ತುವ ಯಾವುದೇ ಸಂಘಟನೆ, ವ್ಯಕ್ತಿಗಳ ಮೇಲೆ ನಮ್ಮ ಸರಕಾರ, ನ್ಯಾಯಾಲಯಗಳು ಕಠಿಣ ಕಾನೂನು ಕ್ರಮಕ್ಕೆ ಗುರುಯಾಗಿಸಿದರೆ, ಇಂತಹ ನೀಚ ಕೃತ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸರೋವರ ಬೆಂಕಿಕೆರೆ ತಿಳಿಸಿದ್ದಾರೆ.

ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...