Homeಮುಖಪುಟ'ಬಿರಿಯಾನಿ ತಿನ್ನಲು ಹುಟ್ಟಿದವರು ಪ್ರಾಣಿಗಳು..'; ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ

‘ಬಿರಿಯಾನಿ ತಿನ್ನಲು ಹುಟ್ಟಿದವರು ಪ್ರಾಣಿಗಳು..’; ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ

- Advertisement -
- Advertisement -

“ಬಿರಿಯಾನಿ ತಿನ್ನಲು ಹುಟ್ಟಿದವರು ಪ್ರಾಣಿಗಳು,” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಗುರುವಾರ ಹೇಳಿದ್ದಾರೆ. ಭಗವಂತ ತಮ್ಮನ್ನು ಈ ಜಗತ್ತಿಗೆ ಈ ಖಾದ್ಯವನ್ನು ಸವಿಯಲು ಕಳುಹಿಸಿದ್ದಾನೆ ಎಂಬ ಕಾಂಗ್ರೆಸ್ ಸಂಸದ ರಕೀಬುಲ್ ಹುಸೇನ್ ಅವರ ಹೇಳಿಕೆಗೆ ಉತ್ತರಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

ಅಕ್ಟೋಬರ್ 6 ರಂದು ನಡೆಯಲಿರುವ ನಗಾಂವ್ ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದ್ದು, ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರನ್ನು ಅತಿಯಾದ ಹಸಿವಿಗೆ ಹೆಸರಾದ ಪೌರಾಣಿಕ ರಕ್ಷಸ ‘ಬಕಾಸುರ’ನಿಗೆ ಹೋಲಿಸಿ, ಸರ್ಕಾರಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ನುಂಗಿ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ಧುಬ್ರಿ ಸಂಸದ ಹುಸೇನ್, ದೇವರು ತಮ್ಮನ್ನು ಈ ಲೋಕಕ್ಕೆ ಬಿರಿಯಾನಿ ತಿನ್ನಲು ಕಳುಹಿಸಿದ್ದಾನೆ ಎಂದು ವ್ಯಂಗ್ಯವಾಗಿ ಕಮೆಂಟ್ ಮಾಡಿದ್ದರು.

ನಗಾಂವ್ ಲೋಕಸಭಾ ಕ್ಷೇತ್ರದ ಜುರಿಯಾದಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶರ್ಮಾ, “ತಾಯಿಯ ಹಾಲು ಕುಡಿಯಲು ಹುಟ್ಟಿದವರು ಮಾನವೀಯ ಗುಣವುಳ್ಳವರು, ಹಾಗೂ ಬಿರಿಯಾನಿ ತಿನ್ನಲು ಮಾತ್ರವೇ ಹುಟ್ಟಿದ್ದೇವೆ ಎನ್ನುವವರು ಪ್ರಾಣಿಗಳು” ಎಂದು ತಿರುಗೇಟು ನೀಡಿದರು.

ಉಪಚುನಾವಣೆ ನಡೆಯಲಿರುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರೂಪೋಹಿಹಾಟ್ ಶಾಸನಸಭಾ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಶಾಸಕ ನೂರುಲ್ ಹುದಾ ಕೆಲಸ ಮಾಡುತ್ತಿಲ್ಲ ಎಂದೂ ಬಿಜೆಪಿ ನಾಯಕ ಆರೋಪಿಸಿದರು. “ಕಾಲೇಜುಗಳು, ಶಾಲೆಗಳು, ರಸ್ತೆಗಳ ಅಭಿವೃದ್ಧಿ ಹಾಗೂ ಮಹಿಳೆಯರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಅವರ ಪಾತ್ರವೇನೂ ಇಲ್ಲ. ಪ್ರತಿ ಮನೆಗೆ ನಲ್ಲಿ ನೀರು ಕೊಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ ಅದರಲ್ಲಿ ನೀರು ಬರಲೇ ಇಲ್ಲ” ಎಂದು ಆರೋಪಿಸಿದ್ದಾರೆ.

ಈಗ ಹುದಾ ಕ್ಷೇತ್ರವನ್ನು ಬರೀ ಪೈಪ್‌ಗಳು ಮತ್ತು ಭರವಸೆಗಳನ್ನಷ್ಟೇ ಉಳಿಸಿ ತೊರೆದಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ ಎಂದು ಶರ್ಮಾ ರ್‍ಯಾಲಿಯಲ್ಲಿ ತಿಳಿಸಿದರು. “ನಗಾಂವ್ ಕ್ಷೇತ್ರದ ಜನತೆಗೆ ಈ ವಂಚನೆ ಅರ್ಥವಾಗಿದೆ, ಈ ಬಾರಿ ಅವರು ಇವಿಎಂ ಮೂಲಕ ಉತ್ತರ ನೀಡಲಿದ್ದಾರೆ” ಎಂದರು.

ಬಿಜೆಪಿ ಅಭ್ಯರ್ಥಿ ದೇವಶಿಶ್ ಶರ್ಮಾ ಪರ ಪ್ರಚಾರ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, “ಇಂದು, ನಗಾಂವ್ ಲೋಕಸಭಾ ಕ್ಷೇತ್ರದಾದ್ಯಂತ ನಾನು ಮೂರು ಬೃಹತ್ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದೇನೆ. ಕೆಲವು ಭಾಗಗಳಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ ಜನರು, ಉತ್ತಮ ಆಡಳಿತವನ್ನು ನೀಡಬಲ್ಲ ಏಕೈಕ ಪಕ್ಷ ಬಿಜೆಪಿ ಎಂಬುದನ್ನು ಅರ್ಥೈಸಿಕೊಂಡಿದ್ದಾರೆ. ಈ ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಜಯಗಳಿಸಲಿದೆ ಎಂಬುದು ನನ್ನ ಪರಿಶೀಲನೆಯಿಂದ ತಿಳಿದುಬಂದಿದೆ” ಎಂದಿದ್ದಾರೆ.

“ನಾವು ಕ್ಷೇತ್ರದಲ್ಲೆಲ್ಲಾ ಪ್ರವಾಸ ಮಾಡುವಾಗ ನಮ್ಮ ತಾಯಂದಿರ ಆಶೀರ್ವಾದ, ಸಹೋದರಿಯರ ಪ್ರೀತಿ ಮತ್ತು ಸ್ನೇಹಿತರ ಬೆಂಬಲ ನಮಗಿತ್ತು” ಎಂದು ಅವರು ಹೇಳಿದರು.

ಎಐಯುಡಿಎಫ್ (ಎಐಯುಡಿಎಫ್‌) ಮುಖ್ಯಸ್ಥ ಹಾಗೂ ಶಾಸಕ ಬದ್ರುದ್ದೀನ್ ಅಜ್ಮಲ್ ಅವರಿಗೆ ರಾಜಕೀಯದಿಂದ ನಿವೃತ್ತಿಯಾಗುವಂತೆ ಶರ್ಮಾ ಸಲಹೆ ನೀಡಿದ್ದು, ಅವರು ವೃದ್ಧರಾಗಿದ್ದು, ಸಕ್ರಿಯ ರಾಜಕೀಯದ ಜವಾಬ್ದಾರಿಯನ್ನು ತಮ್ಮ ಮೂವರು ಪುತ್ರರಲ್ಲಿ ಯಾರಿಗಾದರೂ ವಹಿಸಿಕೊಡಬೇಕು ಎಂದಿದ್ದಾರೆ. ಕಾಂಗ್ರೆಸ್ ಮತ್ತು ಎಐಯುಡಿಎಫ್ ನೇರವಾಗಿ ಅಥವಾ ಪರೋಕ್ಷವಾಗಿ ಒಂದಾಗಿದ್ದಾರೆ ಎಂದೂ ಅವರು ಆರೋಪಿಸಿದರು.

ನಗಾಂವ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಕ್ಟೋಬರ್ 6 ರಂದು ನಡೆಯಲಿದ್ದು, ಅಕ್ಟೋಬರ್ 9 ರಂದು ಮತ ಎಣಿಕೆ ನಿಗದಿಯಾಗಿದೆ. ಮಾಜಿ ಶಾಸಕ ಪ್ರದ್ಯುತ್ ಬೋರ್ಡೊಲೊಯ್ ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಂತರ ಈ ಉಪಚುನಾವಣೆ ಎದುರಾಗಿದೆ. ಅವರು ದಿಸ್ಪುರ್ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...