Homeಕರ್ನಾಟಕಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರಿನ ಡಿ.ಜೆ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ’ಅಕ್ಷಮ್ಯ’ ಎಂದು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಅವರು ಹೇಳಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ.
ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ.
ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಅವರು ಹೇಳಿದ್ದಾರೆ.

“ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ” ಎಂಬ ಕುರಾನಿನ ಆಲ್ ಹಿಜ್ರ್ ಅಧ್ಯಾಯದ ವಾಕ್ಯವನ್ನು ಉಲ್ಲೇಖಿಸಿ ಜೊತೆಗೆ, ದಯವಿಲ್ಲದ ಧರ್ಮವಾವುದಯ್ಯಾ?/ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ/ದಯವೇ ಧರ್ಮದ ಮೂಲವಯ್ಯಾ/ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಬಸವಣ್ಣನ ವಚನವನ್ನು ನೆನಪಿದ್ದಾರೆ.


ಓದಿ: ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಮರುಮೌಲ್ಯಮಾಪನ ಮಾಡಿದಾಗ ಶೂನ್ಯಕ್ಕಿಳಿದ ಅಂಕ

0
ಪರೀಕ್ಷೆಗಳಿಗೆ ಬರೆದಿರುವ ಉತ್ತರಗಳ ಗುಣಮಟ್ಟದ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರಪ್ರದೇಶದ  ಜೌನ್‌ಪುರದಲ್ಲಿರುವ ವೀರ್‌ ಬಹದ್ದೂರ್‌ ಸಿಂಗ್‌ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿನ ಪರೀಕ್ಷೆಯಲ್ಲಿನ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಮತ್ತು ಕ್ರಿಕೆಟ್‌ ಆಟಗಾರರ ಹೆಸರುಗಳನ್ನು...