Homeಮುಖಪುಟಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರನ್ನು ಶೂಟ್‌ ಮಾಡ್ಬೇಕು: ಬಿಜೆಪಿ ಮುಖಂಡನ ಬೇಜವಾಬ್ದಾರಿ ಹೇಳಿಕೆ

ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರನ್ನು ಶೂಟ್‌ ಮಾಡ್ಬೇಕು: ಬಿಜೆಪಿ ಮುಖಂಡನ ಬೇಜವಾಬ್ದಾರಿ ಹೇಳಿಕೆ

- Advertisement -
- Advertisement -

ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ “ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವವರನ್ನು ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಮಾಡುತ್ತಿರುವಂತೆ ಗುಂಡು ಹಾರಿಸಿ ಸಾಯಿಸಬೇಕು” ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ದಿಲೀಪ್ ಘೋಷ್, ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ರೈಲ್ವೆ ಮತ್ತು ಸಾರ್ವಜನಿಕ ಸಾರಿಗೆಗೆ ಹಾನಿ ಮಾಡಿದವರ ಮೇಲೆ ಗುಂಡು ಹಾರಿಸದೆ, ಲಾಠಿ ಚಾರ್ಜ್‌ ಮಾಡಬೇಕು. ಆದರೆ ಅವರು ಕೈಕಟ್ಟಿ ಕುಳಿತಿದ್ದಾರೆ ಎಂದು ಟೀಕಿಸಿದ್ದಾರೆ.

“ಅವರು ನಾಶಪಡಿಸುತ್ತಿರುವ ಸಾರ್ವಜನಿಕ ಆಸ್ತಿ ಯಾರಿಗೆ ಸೇರಿದೆ ಎಂದು ಅವರು ಭಾವಿಸುತ್ತಾರೆ? ಅವರ ತಂದೆಯದ್ದೆ? ಸಾರ್ವಜನಿಕ ಆಸ್ತಿ ತೆರಿಗೆದಾರರಿಗೆ ಸೇರಿದೆ … ನೀವು ಇಲ್ಲಿಗೆ ಬರುತ್ತೀರಿ, ನಮ್ಮ ಆಹಾರವನ್ನು ತಿನ್ನುತ್ತೀರಿ, ಇಲ್ಲಿಯೇ ಇದ್ದು ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸುತ್ತೀರಿ. ಇದು ನಿಮ್ಮ ಪಾಳೆಗಾರಿಕೆಯೇ ನಿಮ್ಮನ್ನು ಲಾಠಿಗಳಿಂದ ಹೊಡೆದುರುಳಿಸಿ, ಗುಂಡು ಹಾರಿಸಿ ಜೈಲಿಗೆ ಹಾಕುತ್ತೇವೆ” ಎಂದು ಘೋಷ್ ಘೋಷಿಸಿದ್ದಾರೆ.

“ಮಮತಾ ಬ್ಯಾನರ್ಜಿಯ ಪೊಲೀಸರು ಸಾರ್ವಜನಿಕ ಆಸ್ತಿಗಳನ್ನು ನಾಶಪಡಿಸಿದ ಜನರ ವಿರುದ್ಧ ಕ್ರಮ ಕೈಗೊಂಡಿಲ್ಲ. ಉತ್ತರ ಪ್ರದೇಶ, ಅಸ್ಸಾಂ ಮತ್ತು ಕರ್ನಾಟಕದ ನಮ್ಮ ಸರ್ಕಾರಗಳು ಈ ಜನರನ್ನು ನಾಯಿಗಳಂತೆ ಹೊಡೆದುರುಳಿಸಿವೆ” ಎಂದು ಬಿಜೆಪಿ ನಾಯಕ ಹೇಳುವ ಮೂಲಕ ನಾವು “ಸರಿಯಾದ ಕೆಲಸ” ಮಾಡಿದ್ದೆವೆ ಎಂದಿದ್ದಾರೆ.

ದೇಶದಲ್ಲಿ ಎರಡು ಕೋಟಿ “ಮುಸ್ಲಿಂ ಒಳನುಸುಳುಕೋರರು” ಇದ್ದಾರೆ ಎಂದು ಹೇಳಿದ ಅವರು ಅದರಲ್ಲಿ ಒಂದು ಕೋಟಿ ಪಶ್ಚಿಮ ಬಂಗಾಳದಲ್ಲಿಯೇ ನೆಲೆಸಿದ್ದಾರೆ. ಹಿಂದೂ ಬಂಗಾಳಿಗಳ “ಹಿತಾಸಕ್ತಿಗಳನ್ನು ಹಾಳುಮಾಡುವ ಇಂಥವರನ್ನು ಮಮತಾ ಬ್ಯಾನರ್ಜಿ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್‌ರವರು “ಹಾಗಿದ್ದಲ್ಲಿ ದೆಹಲಿ ಪೊಲೀಸರು JNU ಮೆಲೆ ದಾಳಿ ಮಾಡಿದ ಎಬಿವಿಪಿ / ಬಿಜೆಪಿ ಗೂಂಡಾಗಳನ್ನು ನಾಯಿಗಳಂತೆ ಏಕೆ ಶೂಟ್ ಮಾಡಲಿಲ್ಲ. ನೀವು ಬಳಸುವ ಭಾಷೆ ಪೀಡಕನ ಭಾಷೆಯಾಗಿದೆ, ಜನರನ್ನು ಅಧೀನಗೊಳಿಸಲು ಸರ್ಕಾರಿ ಯಂತ್ರೋಪಕರಣಗಳ ದುರ್ಬಳಕೆಯಿಂದ ಕೂಡಿದೆ”ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...