Homeಮುಖಪುಟನ್ಯಾಯಾಧೀಶರನ್ನು ಟ್ರೋಲ್ ಮಾಡುವವರು ದೇಶ ವಿರೋಧಿಗಳು: ಸಿಎಂ ಜಗನ್ ಮೋಹನ್ ರೆಡ್ಡಿ

ನ್ಯಾಯಾಧೀಶರನ್ನು ಟ್ರೋಲ್ ಮಾಡುವವರು ದೇಶ ವಿರೋಧಿಗಳು: ಸಿಎಂ ಜಗನ್ ಮೋಹನ್ ರೆಡ್ಡಿ

- Advertisement -
- Advertisement -

ಸಾಮಾಜಿಕ ಮಾದ್ಯಮಗಳಲ್ಲಿ ಮತ್ತು ಟಿವಿ ಚರ್ಚೆಗಳಲ್ಲಿ ನ್ಯಾಯಾಲಯಗಳು ಮತ್ತು ನ್ಯಾಯಾಧೀಶರನ್ನು ಟ್ರೋಲ್ ಮಾಡುವವರು ದೇಶ ವಿರೋಧಿಗಳು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಹೇಳಿದ್ದಾರೆ.

ವಿಜಯವಾಡದ ಇಂದಿರಾಗಾಂಧಿ ಮುನ್ಸಿಪಲ್ ಸ್ಟೇಡಿಯಂನಲ್ಲಿ ಪೊಲೀಸ್ ಸ್ಮರಣಾರ್ಥ ಗೌರವ ವಂದನೆ ಸ್ವೀಕರಿಸಿ ಪೊಲೀಸ್ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಜಗನ್ ಮೋಹನ್ ರೆಡ್ಡಿ, ಪತ್ರಿಕಾ ಸ್ವಾತಂತ್ರ್ಯ, ಮಾನವ ಹಕ್ಕು ಮತ್ತು ಪ್ರಜಾಪ್ರಭುತ್ವದ ಹೆಸರಿನಲ್ಲಿ ಸ್ವಾರ್ಥಕ್ಕಾಗಿ ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸುವವರು ಸಮಾಜ ವಿರೋಧಿಗಳು ಎಂದು ಹೇಳಿದ್ದಾರೆ.

ಇತ್ತೀಚೆಗೆ ಅಂಗಲ್ಲು ಮತ್ತು ಪುಂಗನೂರಿನಲ್ಲಿ ನಡೆದ ಹಿಂಸಾತ್ಮಕ ಘಟನೆಗಳಲ್ಲಿ ಪ್ರತಿಪಕ್ಷದ ಟಿಡಿಪಿ ನಾಯಕರು ಶಾಮೀಲಾಗಿದ್ದಾರೆಂದು ಉಲ್ಲೇಖಿಸಿದ ಜಗನ್ ಮೋಹನ್ ರೆಡ್ಡಿ ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಕೆಲವು ಗುಂಪುಗಳು ಸರ್ಕಾರದ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿವೆ. ಅವರು ಕೂಡ ಸಮಾಜ ವಿರೋಧಿಗಳು ಅವರ ವಿರುದ್ಧ ಪೊಲೀಸರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಾನೂನು ಮತ್ತು ನ್ಯಾಯಾಂಗದ ಅಧಿಕಾರಿಗಳನ್ನು ಸಹ ಸಾಮಾಜಿಕ ಮಾದ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ ಮತ್ತು ಸಾಕ್ಷ್ಯಾಧಾರಗಳೊಂದಿಗೆ ಸಿಕ್ಕಿಬಿದ್ದ ನಂತರ ಅವರ ಪರವಾಗಿ ತೀರ್ಪುಗಳು ಸಿಕ್ಕಿಲ್ಲ ಎಂದು ಟ್ರೋಲ್‌ ಮಾಡಲಾಗುತ್ತಿದೆ ಮತ್ತು ಟಿವಿ ಚರ್ಚೆಗಳನ್ನು ನಡೆಸಲಾಗುತ್ತಿದೆ. ಇದು ಸಮಾಜ ವಿರೋಧಿ ಕೃತ್ಯ ಎಂದು ಹೇಳಿದ್ದಾರೆ.

ಟಿಡಿಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಯಾಗಿರುವ ಭ್ರಷ್ಟಾಚಾರ ಪ್ರಕರಣಗಳ ಕುರಿತು ನ್ಯಾಯಾಲಯದ ಆದೇಶಗಳನ್ನು ಉಲ್ಲೇಖಿಸಿದ ಜಗನ್ ಮೋಹನ್ ರೆಡ್ಡಿ, ನಾಗರಿಕ ಸ್ನೇಹಿಯಾಗಿದ್ದರೂ, ಮಾನವೀಯ ನೆಲೆಯಲ್ಲಿ ವರ್ತಿಸುತ್ತಿದ್ದರೂ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜಿ ಮಾಡಿಕೊಳ್ಳಬಾರದು ಮತ್ತು ಹೆಣ್ಣುಮಕ್ಕಳು, ಮಹಿಳೆಯರು, ವಿಶೇಷವಾಗಿ ಶೋಷಿತ ವರ್ಗಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಅಪರಾಧಿಗಳು ಆಧುನಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಸಮಯದಲ್ಲಿ ಅಪರಾಧಗಳ ವೈಜ್ಞಾನಿಕ ತನಿಖೆಗೆ ಪೊಲೀಸರು ನವೀನ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು. ಆಂಧ್ರಪ್ರದೇಶ ಪೊಲೀಸರು 30 ಸೈಬರ್ ತಜ್ಞರಿರುವ ತಂಡವನ್ನು ಹೊಂದಿದ್ದು, ಸೈಬರ್ ಅಪರಾಧಗಳ ತನಿಖೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನು ಓದಿ: ಮಣಿಪುರ ಜನಾಂಗೀಯ ಕಲಹಕ್ಕೆ ಪ್ರಚೋದಿಸಿದ್ದು ಸಿಎಂ ಬಿರೇನ್ ಸಿಂಗ್: ಗಂಭೀರ ಆರೋಪ ಮಾಡಿದ ಬುಡಕಟ್ಟು ಸಂಸ್ಥೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...