Homeಕರ್ನಾಟಕ‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ 'ನನ್ನ ಹೆಸರೇ' ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

- Advertisement -
- Advertisement -

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ “ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಧೀರ್ಘ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಯ ಮಾಜಿ ಶಾಸಕರೊಬ್ಬರು ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ನನ್ನ ಹೆಸರು ಹಿಡಿದುಕೊಂಡು ಚಾಲ್ತಿಗೆ ಬರುವ ಪ್ರಯತ್ನ ನಡೆಸಿದ್ದಾರೆ .ಪ್ರಜ್ಞೆ ಇಲ್ಲದವರ ತರ್ಕವಿಲ್ಲದ ಮಾತುಗಳಿಗೆ ಉತ್ತರ ನೀಡುವುದು ಸಮಯ ವ್ಯರ್ಥವೇ ಸರಿ, ಆದರೆ ಸಚಿವನಾಗಿ ಕುತರ್ಕಗಳಿಗೂ ಉತ್ತರಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಬಿಜೆಪಿ ಕಚೇರಿಯ ಮೂಲೆಯಲ್ಲಿ ಗುಜರಿಯ ತೂಕಕ್ಕೆ ಹಾಕಲು ಇಟ್ಟಿದ್ದ ಯಾವುದೋ ಪೇಪರ್ ಬಂಡಲ್ ನ್ನು ಮುಂದೆ ಇಟ್ಟುಕೊಂಡು ತರ್ಕವಿಲ್ಲದ, ಹುರುಳಿಲ್ಲದ, ಮತ್ತು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡಿದ್ದಾರೆ. ಗುಡ್ಡ ಅಗೆಯುವವರಿಗೆ ಇಲಿಯನ್ನಾದರೂ ಹಿಡಿಯುವ ಗುರಿ ಇರಬೇಕು, ಇವರಿಗೆ ಜಿರಳೆ ಹಿಡಿಯಲೂ ಸಾಧ್ಯವಾಗಲಿಲ್ಲ ಎಂದು ಟಾಂಗ್ ನೀಡಿದ್ದಾರೆ.

15ನೇ ಹಣಕಾಸು ಆಯೋಗದ ಅನುದಾನದಲ್ಲಿ ಶೇ. 90 ರಷ್ಟು ಜನಸಂಖ್ಯೆ ಮತ್ತು ಶೇ. 10 ರಷ್ಟು ಭೌಗೋಳಿಕ ಆಧಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸುತ್ತೋಲೆ ಹಾಗೂ ಮಾರ್ಗಸೂಚಿಗಳ ಅನ್ವಯ ಬಿಡುಗಡೆ ಮಾಡಲಾಗುತ್ತದೆ. ಒಟ್ಟು ಅನುದಾನದಲ್ಲಿ ಶೇ.60 ನಿರ್ಬಂಧಿತ, ಶೇ.40 ರಷ್ಟು ಅನಿರ್ಬಂಧಿತ ಅನುದಾನವಾಗಿ ಬಿಡುಗಡೆ ಮಾಡಲಾಗುತ್ತದೆ. ಈ ಅನುದಾನವನ್ನು ಗ್ರಾಮ ಪಂಚಾಯತಿಗಳು ಮಾರ್ಗಸೂಚಿ ಅನ್ವಯ ಗ್ರಾಮ ಸಭೆ ನಡೆಸಿ, ಕ್ರಿಯಾ ಯೋಜನೆ ತಯಾರಿಸಿಕೊಂಡು, ಗ್ರಾಮ ಪಂಚಾಯತಿಗಳ ಹಂತದಲ್ಲೇ ಕಾಮಗಾರಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕ್ರಿಯಾಯೋಜನೆ ಮತ್ತು ಅನುಷ್ಠಾನದ ಮಾಹಿತಿಯನ್ನು ಇ- ಗ್ರಾಮ್ ಸ್ವರಾಜ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಲಾಗುತ್ತದೆಯೇ ಹೊರತು ಸರ್ಕಾರದಿಂದ ಅನುಮೋದನೆ ಪಡೆಯುವ ಅವಶ್ಯಕತೆ ಇರುವುದಿಲ್ಲ, ಸಂವಿಧಾನದ 73, 74 ತಿದ್ದುಪಡಿಯ ಮೂಲ ಆಶಯದಂತೆ ಸ್ಥಳೀಯವಾಗಿಯೇ ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ಅನುಷ್ಠಾನ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....