Homeಮುಖಪುಟಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದನು: ಚುನಾವಣಾ ಫಲಿತಾಂಶಗಳ ಬಗ್ಗೆ RSS ನಾಯಕ ಪ್ರತಿಕ್ರಿಯೆ

ಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದನು: ಚುನಾವಣಾ ಫಲಿತಾಂಶಗಳ ಬಗ್ಗೆ RSS ನಾಯಕ ಪ್ರತಿಕ್ರಿಯೆ

- Advertisement -
- Advertisement -

ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಲೋಕಸಭೆ ಚುನಾವಣೆಯ ಫಲಿತಾಂಶಗಳ ಕುರಿತು ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಬಿಜೆಪಿಯ ಅಹಂಕಾರದ ವಿರುದ್ಧ ಟೀಕೆಯನ್ನು ಮಾಡಿದ್ದಾರೆ. ಅಹಂಕಾರಿಗಳನ್ನು ರಾಮನು 241ಕ್ಕೆ ನಿಲ್ಲಿಸಿದ್ದಾನೆ ಎಂದು ಹೇಳಿದ್ದಾರೆ.

ಕನೋಟಾದ ಜೈಪುರ ಬಳಿ ರಾಮರಥ ಅಯೋಧ್ಯೆ ಯಾತ್ರೆ ದರ್ಶನ ಪೂಜಾನ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಆರೆಸ್ಸೆಸ್‌ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಯಾವುದೇ ಪಕ್ಷಗಳನ್ನು ಸ್ಪಷ್ಟವಾಗಿ ಹೆಸರಿಸಲಿಲ್ಲ ಆದರೆ ಅವರ ವರ್ತನೆಗಳು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.

ಭಗವಾನ್ ರಾಮನ ಭಕ್ತಿಯನ್ನು ಮಾಡಿದ ಪಕ್ಷವನ್ನು 241ರಲ್ಲಿ ನಿಲ್ಲಿಸಲಾಯಿತು ಆದರೆ ಅದನ್ನು ಅತಿದೊಡ್ಡ ಪಕ್ಷವನ್ನಾಗಿ ಮಾಡಲಾಯಿತು ಎಂದು ಅವರು ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಹೇಳಿದ್ದಾರೆ.

ರಾಮನಲ್ಲಿ ನಂಬಿಕೆಯಿಲ್ಲದವವರನ್ನು ಒಟ್ಟಿಗೆ 234ರಲ್ಲಿ ನಿಲ್ಲಿಸಲಾಯಿತು ಎಂದು ಅವರು ಹೇಳಿದ್ದು, ಸ್ಪಷ್ಟವಾಗಿ ಇದು ಅವರು ಇಂಡಿಯಾ ಮೈತ್ರಿಕೂಟವನ್ನು ಉಲ್ಲೇಖಿಸಿ ಹೇಳಿರುವುದಾಗಿದೆ. ಪ್ರಜಾಪ್ರಭುತ್ವದಲ್ಲಿ ರಾಮರಾಜ್ಯದ ‘ವಿಧಾನ’ ನೋಡಿ; ರಾಮನ ಪೂಜೆ ಮಾಡಿದವರು ಕ್ರಮೇಣ ಅಹಂಕಾರಕ್ಕೆ ತಿರುಗಿದರು, ಆ ಪಕ್ಷವು ದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ಅವರ ದುರಹಂಕಾರದಿಂದ ನೀಡಬೇಕಾಗಿದ್ದ  ಅಧಿಕಾರವನ್ನು ದೇವರು ತಡೆದನು ಎಂದು ಹೇಳಿದ್ದಾರೆ.

ರಾಮನನ್ನು ವಿರೋಧಿಸಿದವರಿಗೆ ಯಾರಿಗೂ ಅಧಿಕಾರ ನೀಡಲಾಗಿಲ್ಲ, ಅವರಿಗೆ ಎರಡನೇ ಸ್ಥಾನ ದೊರೆಯಿತು. ದೇವರ ನ್ಯಾಯವು ನಿಜ ಮತ್ತು ಆನಂದದಾಯಕವಾಗಿದೆ ಎಂದು ಹೇಳಿದ್ದಾರೆ. ರಾಮನನ್ನು ಆರಾಧಿಸುವವರು ವಿನೀತರಾಗಿರಬೇಕು ಮತ್ತು ರಾಮನನ್ನು ವಿರೋಧಿಸಿದವರನ್ನು ರಾಮನೇ ನೋಡಿಕೊಂಡ. ರಾಮ ದೇವರು ಯಾರಿಗೂ ನೋವುಂಟು ಮಾಡುವುದಿಲ್ಲ, ಎಲ್ಲರಿಗೂ ನ್ಯಾಯ ಒದಗಿಸುತ್ತಾರೆ. ರಾಮ ಯಾವತ್ತೂ ನ್ಯಾಯದ ಪರವಾಗಿದ್ದಾರೆ ಎಂದು ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.

ಭಗವಾನ್ ರಾಮನು ತಾರತಮ್ಯ ಮಾಡುವುದಿಲ್ಲ ಅಥವಾ ಶಿಕ್ಷಿಸುವುದಿಲ್ಲ. ರಾಮನು ಯಾರಿಗೂ ದುಃಖವನ್ನುಂಟು ಮಾಡುವುದಿಲ್ಲ. ರಾಮನು ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಾನೆ. ಅವನು ಯಾವಾಗಲೂ ನ್ಯಾಯಯುತನಾಗಿರುತ್ತಾನೆ ಮತ್ತು ನ್ಯಾಯದಿಂದಲೇ ಮುಂದುವರಿಯುತ್ತಾನೆ. ಭಗವಾನ್ ರಾಮನು ಜನರನ್ನು ರಕ್ಷಿಸಿದನು ಮತ್ತು ರಾವಣನಿಗೆ ಒಳ್ಳೆಯದನ್ನು ಮಾಡಿದನು ಎಂದು ಕುಮಾರ್ ಹೇಳಿದ್ದಾರೆ.

ಇದನ್ನು ಓದಿ: ಕುವೈತ್‌ ಅಗ್ನಿ ದುರಂತದ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಕೇರಳದ ಸಚಿವೆ ವೀಣಾ ಜಾರ್ಜ್‌ಗೆ ಕೇಂದ್ರದಿಂದ ಅಡ್ಡಿ?

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...