Homeಚಳವಳಿರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

- Advertisement -
- Advertisement -

“ಇದು ಎರಡನೇ ಸ್ವಾತಂತ್ರ್ಯ ಹೋರಾಟ. ರೈತ ಹೋರಾಟಗಾರರನ್ನು ಇಂದು ಭಯೋತ್ಪಾದಕರು ಎಂದು ಹೀಯಾಳಿಸಲಾಗುತ್ತಿದೆ. ಆದರೆ, ಭಯೋತ್ಪಾದಕರು ನಾವಲ್ಲ. ಬದಲಾಗಿ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ರೈತರನ್ನು ಶೋಷಣೆ ಮಾಡುತ್ತಿರುವ ಸರ್ಕಾರಗಳು ಹಾಗೂ ನಾಯಕರುಗಳೇ ನಿಜವಾದ ಭಯೋತ್ಪಾದಕರು” ಎಂದು ಹೋರಾಟಗಾರ, ನಟ ಚೇತನ್ ಕಿಡಿಕಾರಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಭಯೋತ್ಪಾದಕರು ನಾವಲ್ಲ. ಬದಲಾಗಿ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುವ ಮೂಲಕ ಜನರನ್ನು ಶೋಷಣೆ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರ ಮತ್ತು ಅವುಗಳನ್ನು ನಾಯಕರುಗಳೇ ನಿಜವಾದ ಭಯೋತ್ಪಾದಕರು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಕೇಂದ್ರ ಮತ್ತು ರಾಜ್ಯ ಸರ್ಕಾರದ ಕುತಂತ್ರವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರೈತ ವಿರೋಧಿ ಮಸೂದೆಗಳನ್ನು ಜಾರಿ ಮಾಡಿದ್ದಾರೆ. ರೈತರ ಪರ ಯಾರು ನಿಲ್ಲುತ್ತಾರೊ ಅಂತವರನ್ನು ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

“ಯಡಿಯೂರಪ್ಪನವರು ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿ ಇದೀಗ ರೈತ ವಿರೋಧಿ ಕಾನೂನನ್ನು ಬೆಂಬಲಿಸುತ್ತಿದ್ದಾರೆ. ರೈತರ ಹೆಸರನ್ನು ಹೇಳಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷದವರು ಎಪಿಎಂಸಿ ಕಾಯ್ದೆ ಬೇಕು ಎಂದು ಹೇಳುತ್ತಾರೆ. ಈ‌ ಮೂರು ಪಕ್ಷಗಳ ಗುರಿ ಒಂದೇ, ಅದೇ ದಬ್ಬಾಳಿಕೆಯ ಗುರಿ” ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರ ವಿರುದ್ಧವೂ ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ರೈತ ಹೋರಾಟ ನಡೆಯುತ್ತಿದೆ. ದೆಹಲಿಯ ಗಡಿಗಳಲ್ಲಿ ರೈತ ಹೋರಾಟಗಾರರು ಬೀಡು ಬಿಟ್ಟಿದ್ದು, ಈ ಹೋರಾಟ ದೇಶದೆಲ್ಲೆಡೆ ವ್ಯಾಪಿಸಿದೆ.

ಇದನ್ನೂ ಓದಿ: ‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲು ದೇಶಾದ್ಯಂತ ಮಹಾಪಂಚಾಯತ್‌ಗಳು ನಡೆಯುತ್ತಿದ್ದು, ರಾಜ್ಯದಲ್ಲೂ ಶಿವಮೊಗ್ಗ ಮತ್ತು ಹಾವೇರಿಯಲ್ಲಿ ರೈತ ಮಹಾ ಪಂಚಾಯತ್​ ನಡೆಸಲಾಗಿದೆ. ಸೋಮವಾರ (ಮಾರ್ಚ್ 22) ಬೆಂಗಳೂರಿನಲ್ಲಿ ರೈತರು ವಿಧಾನಸೌಧ ಚಲೋ ಹೋರಾಟಕ್ಕೆ ಕರೆ ನೀಡಿದ್ದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಯುದುವೀರ್ ಸಿಂಗ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...