HomeಮುಖಪುಟBJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

BJP ನಾಯಕನನ್ನು ವಿರೋಧಿಸುವವರ ಕಣ್ಣು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು: ಹರಿಯಾಣ ಸಂಸದ ಎಚ್ಚರಿಕೆ

- Advertisement -
- Advertisement -

ಶುಕ್ರವಾರ ರೈತರಿಂದ ಸುತ್ತುವರೆಯಲ್ಪಟ್ಟ ಬಿಜೆಪಿ ನಾಯಕ ಮನೀಶ್‌ ಗ್ರೋವರ್‌ ಅವರನ್ನು ಇನ್ನೂ ವಿರೋಧಿಸುವವರ ಕಣ್ಣುಗಳನ್ನು ಕಿತ್ತು, ಕೈಗಳನ್ನು ಕತ್ತರಿಸಲಾಗುವುದು ಎಂದು ಹರಿಯಾಣ ಬಿಜೆಪಿ ಸಂಸದ ಅರವಿಂದ್ ಶರ್ಮಾ ಶನಿವಾರ ರೈತರಿಗೆ ಬೆದರಿಕೆ ಹಾಕಿದ್ದಾರೆ.

ಅರವಿಂದ್‌ ಶರ್ಮಾ ಇದನ್ನು ಸಾರ್ವಜನಿಕವಾಗಿಯೆ ಹೇಳಿದ್ದು, ಅವರ ಭಯಾನಕ ಹೇಳಿಕೆಗೆ ಪ್ರೇಕ್ಷಕರು ಹರ್ಷೋದ್ಗಾರ ಮಾಡಿ ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದಾರೆ. ಈ ವೇಳೆ ಕಾಂಗ್ರೆಸ್‌ ವಿರುದ್ದವು ಆಕ್ರೋಶ ವ್ಯಕ್ತಪಡಿಸಿದ ಅರವಿಂದ್‌, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕಾಗಿ ಇನ್ನೂ 25 ವರ್ಷಗಳ ಕಾಲ ಅಲೆದಾಡಬೇಕು ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ಅರವಿಂದ್‌ ಶರ್ಮಾ ಕಾಂಗ್ರೆಸ್‌‌ನ ಮಾಜಿ ನಾಯಕನಾಗಿದ್ದು 2019 ರಲ್ಲಿ ಬಿಜೆಪಿ ಸೇರಿದ್ದರು. ಅವರು ಇದೀಗ ರೋಹ್ಟಕ್‌ನ ಬಿಜೆಪಿ ಸಂಸದರಾಗಿದ್ದಾರೆ.

‘‘ರೈತರ ಆಂದೋಲನದ ನೆಪದಲ್ಲಿ ನಿರುದ್ಯೋಗಿ ಮದ್ಯವ್ಯಸನಿಗಳು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ’’ ಎಂದು ಬಿಜೆಪಿ ನಾಯಕ ಮನೀಶ್‌ ಗ್ರೋವರ್‌ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ರಾಜ್ಯದ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದೊಳಗೆ ಮನೀಶ್‌ ಗ್ರೋವರ್‌ ಅವರನ್ನು ರೈತರು ಘೇರಾವ್‌ ಮಾಡಿದ್ದರು.

ರೈತರ ಘೆರಾವ್‌ನಿಂದಾಗಿ ಮನೀಶ್‌ ಗ್ರೋವರ್‌ ಮತ್ತು ಬಿಜೆಪಿಯ ಇತರ ನಾಯಕರು ಸುಮಾರು ಎಂಟು ಗಂಟೆಗಳ ಕಾಲ ದೇವಾಲಯದೊಳಗೆ ಸಿಲುಕಿಕೊಂಡಿದ್ದರು. ನಂತರ ಮನೀಶ್‌ ಗ್ರೋವರ್ ಕೈ ಮುಗಿದು ಕ್ಷಮೆ ಕೇಳಿದ ನಂತರ ಅವರನ್ನು ಹೊರ ಹೋಗಲು ಅವಕಾಶ ನೀಡಲಾಯಿತು.

ಇದನ್ನೂ ಓದಿ: 2ಜಿ ಸ್ಪೆಕ್ಟ್ರಂ ಪ್ರಕರಣದ ಆರೋಪ: ಸಂಜಯ್ ನಿರುಪಮ್ ಕ್ಷಮೆಯಾಚಿಸಿದ ಮಾಜಿ CAG ವಿನೋದ್ ರಾಯ್

ಆದರೆ ಅಲ್ಲಿಂದ ಹೊರ ಬಂದ ನಂತರ ತಾನು ಕ್ಷಮೆ ಯಾಚನೆ ಮಾಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ನನ್ನೊಂದಿಗೆ ಎಲ್ಲರತ್ತ ಕೈ ಬೀಸುವಂತೆ ಕೇಳಲಾಗಿದೆ. ನಾವು ಕ್ಷಮೆ ಕೇಳಿಲ್ಲ… ಈ ದೇವಸ್ಥಾನಕ್ಕೆ ಯಾವಾಗ ಬೇಕಾದರೂ ಬರುತ್ತೇನೆ’’ ಎಂದು ಹೇಳಿದ್ದಾರೆ.

ರೈತರು ದೇವಸ್ಧಾನದ ಎಲ್ಲಾ ಕಡೆಯಿಂದ ಸುತ್ತುವರಿಯುವಂತೆ ಜನರನ್ನು ಕೇಳಿಕೊಂಡಿಂದ್ದರು.

ಗುರಗಾಂವ್‌ನಿಂದ 78 ಕಿಮೀ ದೂರದಲ್ಲಿರುವ ರೋಹ್ಟಕ್ ಜಿಲ್ಲೆಯ ಕಿಲೋಯ್ ಗ್ರಾಮದ ದೇವಸ್ಥಾನದಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ್ದರು. ಇಬ್ಬರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಘಟನೆಯ ಹಿನ್ನಲೆಯಲ್ಲಿ ದೆಹಲಿ-ಹಿಸಾರ್ ರಾಷ್ಟ್ರೀಯ ಹೆದ್ದಾರಿಯನ್ನು ಸ್ವಲ್ಪ ಹೊತ್ತು ಬಂದ್ ಮಾಡಲಾಗಿತ್ತು.

ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...