Homeಕರ್ನಾಟಕ‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

ನಮ್ಮ ಜಾತಿಯವರನ್ನು ಎಂಎಲ್‌ಎ, ಎಂ.ಪಿ., ಮುಖ್ಯಮಂತ್ರಿ ಮಾಡಿ, ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಡಿ ಎಂದು ಸ್ವಾಮೀಜಿಗಳು ಫರ್ಮಾನು ಹೊರಡಿಸುತ್ತಿರುವ ದಿನಗಳಿವು. ಆದರೆ ತೋಂಟದ ಸಿದ್ಧಲಿಂಗ ಸ್ವಾಮೀಜಿ ವಚನಗಳನ್ನು ಪಾಲಿಸಿ, ಅದರಂತೆ ನಡೆದ ಮಹಾತ್ಮ: ಜಸ್ಟೀಸ್ ದಾಸ್‌

- Advertisement -
- Advertisement -

“ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಷ್ಟ್ರೀಯ ಪ್ರಶಸ್ತಿಯ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ” ಎಂದು ಜಸ್ಟೀಸ್‌ ಎಚ್.ಎನ್‌.ನಾಗಮೋಹನ ದಾಸ್‌ ತಿಳಿಸಿದರು.

ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ’ನಾನು ಗೌರಿ.ಕಾಮ್‌’ನೊಂದಿಗೆ ಮಾತನಾಡಿದ ಅವರು, “ಕೆಲವು ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವ ಹೆಚ್ಚಾಲಿದೆ. ಕೆಲವರಿಗೆ ಕೆಲವು ಪ್ರಶಸ್ತಿಗಳನ್ನು ನೀಡುವುದರಿಂದ ವ್ಯಕ್ತಿಗಳ ಗೌರವ ಹೆಚ್ಚಾಗುತ್ತದೆ. ನನ್ನಂಥ ಸಾಧಾರಣ ನ್ಯಾಯಾಧೀಶನನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡುತ್ತಿರುವುದು ನನ್ನ ಪಾಲಿಗೆ ಮಹತ್ತರವಾದ ದಿನ. ಇದಕ್ಕಿಂತ ಹೆಚ್ಚು ನಾನು ಆಪೇಕ್ಷಿಸುವುದೂ ಇಲ್ಲ. ಈ ಪ್ರಶಸ್ತಿಯಿಂದಾಗಿ ನನ್ನ ಜವಾಬ್ದಾರಿಯೂ ಹೆಚ್ಚಾಗಿದೆ. ಕಾಯಕ ಚಳವಳಿಯ ಸಂದೇಶವನ್ನು, ವಚನ ಚಳವಳಿಯ ಸಂದೇಶವನ್ನು ಇನ್ನೂ ಹೆಚ್ಚು ಜನರಿಗೆ ತಲುಪಿಸುವ ಕೆಲಸವನ್ನು ನಾನು ಮಾಡಬೇಕಾಗಿದೆ” ಎಂದು ಹೇಳಿದರು.

“ಇಂದು ಎಂತಹ ಪರಿಸ್ಥಿತಿ ಇದೆ ಎಂದರೆ ಬಸವಣ್ಣನವರ ಫೋಟೋ ಹಾಕಿಕೊಂಡು ವಚನ ಹೇಳುತ್ತಾರೆ. ಆದರೆ ವಚನ ಸಂದೇಶ ಪಾಲಿಸುವುದಿಲ್ಲ. ಜನಹಿತಕ್ಕೆ ಶರಣಾಗಬೇಕಾದವರು, ಜಾತಿಹಿತಕ್ಕೆ ಶರಣಾಗಿ ಹೋದರು. ನಮ್ಮ ಜಾತಿಯವರನ್ನು ಎಂಎಲ್‌ಎ, ಎಂ.ಪಿ., ಮುಖ್ಯಮಂತ್ರಿ ಮಾಡಿ, ಮುಖ್ಯಮಂತ್ರಿಯನ್ನು ಕೆಳಗೆ ಇಳಿಸಬೇಡಿ, ನಮ್ಮ ಫರ್ಮಾನುಗಳಿಗೆ ನೀವು ಗೌರವ ಕೊಡದಿದ್ದರೆ ನಿಮಗೆ ಬುದ್ಧಿ ಕಲಿಸುತ್ತೇವೆ. ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಧಮ್ಕಿ ಹಾಕುವ ಪರಿಸ್ಥಿತಿ ಈಗ ಇದೆ. ಯಾವ ಸ್ವಾಮೀಜಿಗಳ ಬಗ್ಗೆ ಗೌರವ ಇಟ್ಟುಕೊಂಡು, ನಂಬಿಕೆ ಇಟ್ಟುಕೊಂಡು ಮಹಾತ್ಮರು ಎಂದು ತಿಳಿದುಕೊಂಡಿದ್ದೆವೆಯೋ ಅಂತಹ ಸ್ವಾಮೀಜಿಗಳು ನಮ್ಮನ್ನು ನಿರಾಶೆಗೊಳಿಸಿದರು. ಏಕೆ ಹೀಗೆ ಸ್ವಾಮೀಜಿಗಳು ನಡೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ನೊಂದಿಕೊಂಡಿದ್ದೆ. ಅಂತಹ ಸನ್ನಿವೇಶದಲ್ಲಿ ವಚನಗಳನ್ನು ಓದಿಕೊಂಡು ಅರ್ಥಮಾಡಿಕೊಂಡು ಅದರಂತೆ ಬದುಕಿ ಮಾದರಿಯಾದಂತಹ ಒಬ್ಬ ದಾರ್ಶನಿಕ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಹೆಸರಿನ ಪ್ರಶಸ್ತಿ ಬಂದಿರುವುದು ನನ್ನ ಸೌಭಾಗ್ಯ” ಎಂದು ಸಂತಸ ವ್ಯಕ್ತಪಡಿಸಿದರು.

“ಅಡ್ಡಪಲ್ಲಕ್ಕಿಯನ್ನು ತೊರೆದು, ಪಾದಪೂಜೆಯನ್ನು ನಿರಾಕರಿಸಿದ ಸಿದ್ಧಲಿಂಗ ಸ್ವಾಮೀಜಿ, ಇಡೀ ಮಠ ಸಂಸ್ಕೃತಿಗೆ ಹೊಸ ತೋರಣ ಕಟ್ಟಿದವರು; ಅದಕ್ಕೆ ಹೊಸ ತಾತ್ಪರ್ಯವನ್ನು ಬರೆದವರು. ಮಠಾಧೀಶರ ಮಡಿವಂತಿಕೆಯನ್ನು ದೂರ ಸರಿಸಿ ಎಲ್ಲ ಜಾತಿಯ, ಧರ್ಮದ ಜನರ ಹತ್ತಿರವಾಗಿ ಸಾಮಾನ್ಯರಲ್ಲಿ, ಸಾಮಾನ್ಯರಾಗಿ ಬಾಳಿದರು. ಕನ್ನಡಪರ ಕೆಲಸ, ಗಡಿ ಕೆಲಸ, ನಾಡಿನ ಪರಿಸರ ಸಂರಕ್ಷಣೆಯ ಕೆಲಸ ಮಾಡಿದರು. ಭ್ರಷ್ಟಾಚಾರದ ವಿರುದ್ಧ, ಕೋಮುವಾದದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿದರು. ಎಲ್ಲ ಧರ್ಮದ ಜನರ ನಡುವೆ ಭಾವೈಕ್ಯತೆಯನ್ನು ಬೆಳೆಸಿದರು. ಅಂತಹ ಮಹಾನ್‌ ಚಿಂತಕ, ಕ್ರಾಂತಿಕಾರಿ ಎಂದರೆ ತೋಂಟದ ಸಿದ್ಧಲಿಂಗ ಸ್ವಾಮೀಜಿ. ಅಂತಹ ಮಹಾತ್ಮರ ಹೆಸರಲ್ಲಿ ನನಗೆ ಪ್ರಶಸ್ತಿ ಬಂದಿರುವುದಕ್ಕಿಂತ ಸಂತೋಷದ ಸಂಗತಿ ಮತ್ತೊಂದಿಲ್ಲ. ಈ ಪ್ರಶಸ್ತಿಯ ಹಣವನ್ನು ಸತ್ಕಾರ್ಯಕ್ಕೆ ಬಳಸಲು ನಿರ್ಧರಿಸಿದ್ದೇನೆ. ಈ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸಲು ತೀರ್ಮಾನಿಸಿದ್ದೇನೆ” ಎಂದರು.

 ಇದನ್ನೂ ಓದಿರಿ: ಕರ್ನಾಟಕದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ ಸ್ವೀಕಾರಾರ್ಹವೇ?

“ನನಗೆ ಬರುವ ಪಿಂಚಣಿ ಹಣವೇ ಜೀವನಕ್ಕೆ ಸಾಕು” ಎನ್ನುವ ಜಸ್ಟೀಸ್‌ ನಾಗಮೋಹನ ದಾಸ್ ಅವರು ಇದುವರೆಗೂ ಬಂದಿರುವ ಪ್ರಶಸ್ತಿಗಳ ಹಣವನ್ನು ಸಾಮಾಜಿಕ ಕೆಲಸಗಳಿಗೆ ವಿನಿಯೋಗಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಬೀದರ್‌ನ ಬಸವ ಪ್ರಶಸ್ತಿ, ಮುರುಘಾ ಮಠದ ಜಯದೇವ ಪ್ರಶಸ್ತಿ, ಮಂಡ್ಯದ ಮಾದೇಗೌಡರ ಪ್ರಶಸ್ತಿ… ಹೀಗೆ ಬಂದ ಅನೇಕ  ಪ್ರಶಸ್ತಿಗಳ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಅವರು ಈ ಹಿಂದೆಯೂ ಬಳಸಿದ್ದಾರೆ.

“ಸಂವಿಧಾನ ಓದು ಅಭಿಯಾನ ಹೇಗೆ ನಡೆಯುತ್ತಿದೆ?” ಎಂದು ಅವರಲ್ಲಿ ಕೇಳಿದಾಗ, “ಸಂವಿಧಾನ ಓದು ಅಭಿಯಾನವನ್ನು ನಿರಂತರವಾಗಿ ಮೂರು ವರ್ಷಗಳಿಂದ ನಡೆಸಲಾಗುತ್ತಿದೆ. ಕೊರೊನಾ ಇದ್ದರೂ ಚಿಂತಿಸದೆ ಆ‌ನ್‌ಲೈನ್‌ ಮೂಲಕ ಅಭಿಯಾನವನ್ನು ನಡೆಸಿದ್ದೇವೆ. ಪ್ರತಿ ತಿಂಗಳು ಸುಮಾರು 20 ಕಾರ್ಯಕ್ರಮ ನಡೆಸಲಾಗಿದೆ. ಈಗಲೂ ಆನ್‌ಲೈನ್‌ನಲ್ಲಿ ಕಾರ್ಯಕ್ರಮ ಮುಂದುವರಿದಿದೆ. ಕೊರೊನಾ ಕಡಿಮೆಯಾಗಿರುವುದರಿಂದ ಆಹ್ವಾನ ಬಂದಿವೆ. ಹೋಗಲು ಆರಂಭಿಸಿದ್ದೇನೆ. ‘ಸಂವಿಧಾನ ಓದು’ ಕೃತಿಯ ಸುಮಾರು 2 ಲಕ್ಷ ಪ್ರತಿಗಳು ಮಾರಾಟವಾಗಿವೆ. ಈ ಕೃತಿ ಇಂಗ್ಲಿಷ್‌, ಹಿಂದಿಗೆ ಭಾಷಾಂತರವಾಗಿದೆ. ಮಲಯಾಳಂಗೂ ತರ್ಜುಮೆಯಾಗಿದ್ದು, ಬಿಡುಗಡೆಯಾಗಬೇಕಿದೆ. ರಾಜ್ಯದ  ಎಲ್ಲ ಜಿಲ್ಲೆಗಳಲ್ಲೂ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿ ಯುವಜನರು ಕಾರ್ಯಕ್ರಮ ಕೇಳಿದ್ದಾರೆ. ಎಲ್ಲ ಜನವರ್ಗವೂ ಈ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಕೇಳಿಕೊಳ್ಳುತ್ತಿದೆ. ಮಠಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗಿದೆ. ಹೀಗೆ ಸಂವಿಧಾನ ಓದು ಅಭಿಯಾನ ಮುಂದುವರಿದಿದೆ” ಎಂದರು.

ಸಮಸಮಾಜದ ನಿರ್ಮಾಣಕ್ಕಾಗಿ ಜೀವನವಿಡೀ ಸೇವೆ ಸಲ್ಲಿಸಿದ ಗದುಗಿನ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಮೂರನೇ ವರ್ಷದ ಸ್ಮರಣೆ ಅಂಗವಾಗಿ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ, ಸಂಮಾನ ಗ್ರಂಥಗಳ ಬಿಡುಗಡೆ ಸಮಾರಂಭವನ್ನು ಅಕ್ಟೋಬರ್‌ 16ರಂದು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್‌ 16ರಂದು ಗದಗದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಶಿವಾನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಪ್ರಶಸ್ತಿ ಫಲಕದೊಂದಿಗೆ 5 ಲಕ್ಷ ರೂ. ನಗದು ಪುರಸ್ಕಾರವನ್ನು ಜಸ್ಟೀಸ್‌ ನಾಗಮೋಹನ ದಾಸ್‌ ಅವರಿಗೆ ನೀಡಲಾಗುತ್ತಿದೆ.

ಇದನ್ನೂ ಓದಿರಿ: ತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Shubhavagali,
    Justice sahebarige prashasti needirudarinda bahala santoshavaagide,
    Avara ” samvidhana vodu chaluvali” bagge bahala aasakti moodide , ei mahattara chaluvaliya bhaaga vaagi deshada seve maadalichesuttene eidara bagge maahiti kodabekendu kelikolluttene.

  2. Shubhavagali,
    Justice sahebarige prashasti needirudarinda bahala santoshavaagide,
    Avara ” samvidhana vodu abhiyana” bagge bahala aasakti moodide , ei mahattara abhiyaanada bhaaga vaagi deshada seve maadalichesuttene eidara bagge maahiti kodabekendu kelikolluttene.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...