Homeಅಂತರಾಷ್ಟ್ರೀಯಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

- Advertisement -
- Advertisement -

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಪ್ಯಾಲೆಸ್ತೀನಿಯರು ಪಾಲ್ಗೊಂಡು ಕಣ್ಣೀರ ವಿದಾಯ ಹೇಳಿದರು.

ಮಕ್ಕಳು, ಮಹಿಳೆಯರು, ಪುರುಷರು ಮತ್ತು ವಯೋವೃದ್ಧರು ಸೇರಿದಂತೆ ಮೃತಪಟ್ಟವರ ದೇಹಗಳನ್ನು ಪ್ಯಾಲೆಸ್ತೀನ್‌ ಧ್ವಜಗಳಿಂದ ಸುತ್ತಲಾಗಿತ್ತು. ಗಾಝಾ ನಗರದ ಅಲ್-ಸಬ್ರಾ ಪ್ರದೇಶದಲ್ಲಿ ಧ್ವಂಸಗೊಂಡಿದ್ದ ಎರಡು ಕುಟುಂಬದ ಮನೆಗಳು ಮತ್ತು ಸುತ್ತಮುತ್ತಲಿನ ಕಟ್ಟಡಗಳ ಅವಶೇಷಗಳ ಮಧ್ಯೆ ಈ ದೇಹಗಳನ್ನು ಸಾಲಾಗಿ ಇಡಲಾಗಿತ್ತು. ಆ ಬಳಿಕ ಅಂತಿಮಯಾತ್ರೆಯು ಮಧ್ಯ ಗಾಝಾದ ಶೇಖ್ ಶಾಬಾನ್ ಸ್ಮಶಾನದತ್ತ ಸಾಗಿತು ಎಂದು ವರದಿಗಳು ವಿವರಿಸಿವೆ.

ಅಂತಿಮ ಸಂಸ್ಕಾರದ ವೇಳೆ ತೀವ್ರ ದುಃಖದ ದೃಶ್ಯಗಳು ಕಂಡುಬಂದವು. ಮಕ್ಕಳು ಶವದ ಬಟ್ಟೆಗಳ ಮೇಲೆ ಹೂವುಗಳನ್ನು ಇಡುತ್ತಿದ್ದರು. ಸಂಬಂಧಿಕರು ತಮ್ಮ ಪ್ರೀತಿಪಾತ್ರರಿಗೆ ವಿದಾಯ ಹೇಳುತ್ತಾ ಕಣ್ಣೀರು ಹಾಕುತ್ತಿದ್ದರು ಎಂದು ವರದಿಯೊಂದು ಉಲ್ಲೇಖಿಸಿದೆ.

ಅಂತ್ಯ ಸಂಸ್ಕಾರದ ನಂತರ ಮಾತನಾಡಿದ ಯೂಸೆಫ್ ಅಬು ಶರಿಯಾ ಅವರು, ಜನಾಂಗೀಯ ಹತ್ಯೆ ಪ್ರಾರಂಭವಾದಾಗಿನಿಂದ ಇಸ್ರೇಲಿ ಪಡೆಗಳಿಂದ ಈ ಎರಡು ಕುಟುಂಬಗಳ 308 ಸದಸ್ಯರು ಕೊಲ್ಲಲ್ಪಟ್ಟಿದ್ದಾರೆ ಎಂದು ತಿಳಿಸಿದ್ದಾಗಿ ಪ್ಯಾಲೆಸ್ತೀನಿಯನ್ ಸುದ್ದಿ ಸಂಸ್ಥೆ ‘ವಫಾ’ ವರದಿ ಮಾಡಿದೆ.

ಕಂದಮ್ಮಗಳು, ತಾಯಂದಿರು, ತಂದೆಯಂದಿರು, ಯುವಕರು, ವಯೋವೃದ್ಧ ಸಂಬಂಧಿಕರು ಸೇರಿದಂತೆ ಮಂಗಳವಾರ ಹೂಳಲಾದವರ ವಿವರಗಳನ್ನು ಸುದ್ದಿ ಸಂಸ್ಥೆಗೆ ತಿಳಿಸುತ್ತಾ, “ಇಸ್ರೇಲಿ ಕ್ಷಿಪಣಿಗಳು ಯಾರನ್ನೂ ಬಿಟ್ಟಿಲ್ಲ” ಎಂದು ಯೂಸೆಫ್ ಶರಿಯಾ ಕಣ್ಣೀರು ಹಾಕಿದ್ದಾರೆ.

ಕುಟುಂಬವನ್ನು ಪ್ರತಿನಿಧಿಸಿ ಮಾತನಾಡಿದ ಡಾ. ಜಾದು ಅಬು ಶರಿಯಾ ಅವರು, ಈ ಅಂತಿಮ ಸಂಸ್ಕಾರವನ್ನು “ಸಮಕಾಲೀನ ಪ್ಯಾಲೆಸ್ತೀನ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಂತ್ಯಕ್ರಿಯೆ” ಎಂದು ಹೇಳಿದ್ದಾರೆ.

ಕುಟುಂಬದ ಹಿರಿಯರಾದ ಅಲಿ ಅಬು ಶರಿಯಾ ಅವರು ಸುದ್ದಿ ಸಂಸ್ಥೆಗೆ ಮಾಹಿತಿ ನೀಡುತ್ತಾ, ಮೃತಪಟ್ಟ 112 ಜನರಲ್ಲಿ 44 ಮಕ್ಕಳು, 37 ಮಹಿಳೆಯರು, 23 ವಯೋವೃದ್ಧರು ಮತ್ತು ಏಳು ಮಂದಿ ವಿಕಲಚೇತನರು ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...