PC: NDTV

ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ಸಂಚಾರ, ದಿನನಿತ್ಯದ ವಹಿವಾಟುಗಳಿಗೆ ತೀವ್ರ ನಿರ್ಬಂಧಗಳನ್ನು ಘೋಷಿಸಿದ ನಂತರ ಬುಧವಾರ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ ರೈಲು ನಿಲ್ದಾಣದ ಹೊರಗೆ ರೈಲುಗಳನ್ನು ಹತ್ತಲು ಸಾವಿರಾರು ಪ್ರಯಾಣಿಕರು ಜಮಾಯಿಸಿದ್ದರು.

ಲೋಕಮಾನ್ಯ ತಿಲಕ್ ಟರ್ಮಿನಲ್ ರೈಲು ನಿಲ್ದಾಣದ ಬಳಿ ಜನಸಂದಣಿಯನ್ನು ನಿಯಂತ್ರಿಸಲು ರೈಲ್ವೆ ಸಂರಕ್ಷಣಾ ಪಡೆ ಮತ್ತು ಸರ್ಕಾರಿ ರೈಲ್ವೆ ಪೊಲೀಸರು ಹೊರಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದಾರೆ. ರೈಲ್ವೆ ಇಲಾಖೆಯು ಜನರು ಭಯಭೀತರಾಗಬಾರದು ಮತ್ತು ನಿಲ್ದಾಣಗಳಲ್ಲಿ ಜನಸಂದಣಿ ನಿರ್ಮಿಸಿಬಾರದು ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಏಪ್ರಿಲ್ 14 ರ ರಾತ್ರಿ 8 ರಿಂದ 15 ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಜಾರಿ ಮಾಡಲಾಗುತ್ತಿದೆ.

ಕೊರೊನಾ ಎರಡನೇ ಅಲೆಯಲ್ಲಿ ರಾಜ್ಯ ನಲುಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಮುಂದಿನ 15 ದಿನಗಳಲ್ಲಿ ರಾಜ್ಯಾದ್ಯಂತ ಸಾರ್ವಜನಿಕ ಓಡಾಟಕ್ಕೆ ತೀವ್ರ ನಿರ್ಬಂಧಗಳನ್ನು ಘೋಷಿಸಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿದ್ದು, ಮೇ 1 ರಂದು ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ಮಂಗಳವಾರ, ರಾಜ್ಯ ಸರ್ಕಾರವು ಹೊಸ ನಿರ್ಬಂಧಗಳನ್ನು ಘೋಷಿಸುವ ಮೊದಲು ಕೂಡ ಲೋಕಮಾನ್ಯ ತಿಲಕ್ ಟರ್ಮಿನಲ್ ಹೊರಗೆ ಹೆಚ್ಚಿನ ಸಂಖ್ಯೆಯ ಜನರು, ಅದರಲ್ಲೂ ವಿಶೇಷವಾಗಿ ವಲಸೆ ಕಾರ್ಮಿಕರು ಜಮಾಯಿಸಿದ್ದರು.
ಕೇಂದ್ರ ರೈಲ್ವೆಯ ಮುಖ್ಯ ಜನಸಂಪರ್ಕ ಅಧಿಕಾರಿ ಶಿವಾಜಿ ಸುತಾರ್, “ಜನರು ಭಯಭೀತರಾಗಬಾರದು ಮತ್ತು ನಿಲ್ದಾಣಗಳಲ್ಲಿ ಜನಸಂದಣಿಯನ್ನು ಉಂಟು ಮಾಡಬಾರದು” ಎಂದು ಮನವಿ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದೆ.

“ಟಿಕೆಟ್‌ಗಳನ್ನು ದೃಢಪಡಿಸಿದ ಪ್ರಯಾಣಿಕರಿಗೆ ಮಾತ್ರ ವಿಶೇಷ ರೈಲುಗಳನ್ನು ಹತ್ತಲು ಅನುಮತಿ ಇದೆ ಮತ್ತು ರೈಲು ಹೊರಡುವ ಸಮಯಕ್ಕೆ ಒಂದೂವರೆ ಗಂಟೆಗಳ ಮೊದಲು ಅವರು ನಿಲ್ದಾಣಗಳನ್ನು ತಲುಪಬೇಕು” ಎಂದು  ಹೇಳಿದ್ದಾರೆ.

ಕೇಂದ್ರ ರೈಲ್ವೆ ರೈಲುಗಳ ರಿಸರ್ವೆಷನ್ ಪಟ್ಟಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಯಾವುದೇ ನಿರ್ದಿಷ್ಟ ತಾಣಕ್ಕೆ ಹೆಚ್ಚಿನ ಟಿಕೆಟ್ ಬೇಡಿಕೆ ಇದೆಯೇ ಎಂದು ಪರಿಶೀಲಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here