Homeಕರೋನಾ ತಲ್ಲಣಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದಾಗಿ ಕಳೆದ 55 ದಿನಗಳಲ್ಲಿ ದೇಶಾದ್ಯಂತ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮಂಗಳವಾರ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಕೋವಿಡ್ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಸಂದೇಶಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆದ ನಂತರ ಸಚಿವಾಲಯವು ತನಿಖೆ ನಡೆಸಲು ಪ್ರಾರಂಭಿಸಿತು.

“ನಾವು ಎಲ್ಲಾ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಆ ರಾಜ್ಯಗಳ ಎಲ್ಲ ಜಿಲ್ಲೆಗಳಿಂದ ಕೋವಿಡ್ ಅನಾಥರನ್ನು ಗುರುತಿಸಲು ಕೇಳಿಕೊಂಡಿದ್ದೇವೆ. ಇಲ್ಲಿವರೆಗೆ ಸ್ವೀಕರಿಸಿದ ಮಾಹಿತಿ ಪ್ರಕಾರ. 577 ಮಕ್ಕಳು ಇಂತಹ ಸ್ಥಿತಿಯಲ್ಲಿವೆ ಎಂಬುದು ಖಚಿತವಾಗಿದೆ. ಉದಾಹರಣೆಗೆ, ದೆಹಲಿಯಲ್ಲಿ ಈ ಅವಧಿಯಲ್ಲಿ ಒಂದು ಕೋವಿಡ್ ಅನಾಥ ಮಗು ಗುರುತಿಸಲ್ಪಟ್ಟಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ರಾಜ್ಯವಾರು ವಿಘಟನೆಯನ್ನು ಬಹಿರಂಗಪಡಿಸಲಿಲ್ಲ. ಆದರೆ ಹಲವಾರು ರಾಜ್ಯಗಳು ಒಂದು ಪ್ರಕರಣವನ್ನು ಸಹ ವರದಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ಕೋವಿಡ್‌ಗೆ ಪೋಷಕರನ್ನು ಕಳೆದುಕೊಂಡಿರುವ ಪ್ರತಿ ಅತಂತ್ರ ಮಗುವನ್ನು ಬೆಂಬಲಿಸಲು ಮತ್ತು ರಕ್ಷಿಸಲು ಸರ್ಕಾರ ಬದ್ಧವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಏಪ್ರಿಲ್ 1, 2021 ರಿಂದ ಮಂಗಳವಾರ ಮಧ್ಯಾಹ್ನ 2 ರವರೆಗೆ, ದೇಶಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಇಂತಹ 577 ಪ್ರಕರಣ ದಾಖಲಾಗಿವೆ” ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ.

ಈ ಅನಾಥರ ಸಾಂಸ್ಥಿಕೇತರ ಆರೈಕೆಗಾಗಿ ನಾವು ಪ್ರತಿ ಜಿಲ್ಲೆಗೆ 10 ಲಕ್ಷ ರೂ. ನಿಗದಿಪಡಿಸಿದ್ದೇವೆ. ಇದನ್ನು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ನ್ಯಾಯಾಧೀಶರು ವಿತರಿಸುತ್ತಾರೆ. ಒಂದು ಮಗು ಕೂಡ ಅನಾಥ ಸ್ಥಿತಿಯಲ್ಲಿ ಇರಬಾರದು ಎಂಬುದು ನಮ್ಮ ಗುರಿ. ನಮ್ಮ ಆದ್ಯತೆಯೆಂದರೆ, ಮಕ್ಕಳನ್ನು ಅವರ ಕುಟುಂಬ ಮತ್ತು ಸಮುದಾಯ ರಚನೆಗಳಲ್ಲಿ ಉಳಿಸಿಕೊಳ್ಳಬೇಕು. ಈ ಸಂರಚನೆಗಳಿಂದ ದೂರವಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಾಂಕ್ರಾಮಿಕ ರೋಗದಿಂದ ಅನಾಥವಾಗಿರುವ ಮಕ್ಕಳಿಗೆ ಕಲ್ಯಾಣ ಕ್ರಮಗಳನ್ನು ಹಲವಾರು ರಾಜ್ಯಗಳು ಘೋಷಿಸಿರುವ ಸಮಯದಲ್ಲಿ ಕೇಂದ್ರ ಸಚಿವಾಲಯದ ಈ ಕಾಳಜಿ ವ್ಯಕ್ತವಾಗಿದೆ. ದೆಹಲಿ, ಪಂಜಾಬ್ ಮತ್ತು ಮಧ್ಯಪ್ರದೇಶಗಳು ಹಣಕಾಸಿನ ನೆರವಿನ ಹೊರತಾಗಿ ಉಚಿತ ಶಿಕ್ಷಣದ ಭರವಸೆ ನೀಡಿದರೆ, ಉತ್ತರಾಖಂಡ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಘೋಷಿಸಿವೆ.

ಇದನ್ನೂ ಓದಿ: ಗೌರಿ ಕಣ್ಣೋಟ: ’ಸೀತಾ ಸಿಂಗ್ಸ್ ದ ಬ್ಲೂಸ್’ – ನೀನಾ ಮತ್ತು ಸೀತೆಯರ ದುಃಖ

ಈ ಮಕ್ಕಳನ್ನು ಪತ್ತೆ ಹಚ್ಚಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಗಳಲ್ಲಿನ ಕಲ್ಯಾಣ ಸಮಿತಿಗಳಿಂದ ಹಿಡಿದು ನಿಮ್ಹಾನ್ಸ್ ಸಹಯೋಗದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

“ಈ ಮಕ್ಕಳನ್ನು ದತ್ತು ಪಡೆಯಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಸಾರ ಮಾಡುವುದರ ವಿರುದ್ಧ ಮೇ 17 ರಂದು ಸಚಿವಾಲಯ ಸಾರ್ವಜನಿಕ ನೋಟಿಸ್ ನೀಡಿದೆ. ಇದು ಮಕ್ಕಳ ಕಳ್ಳಸಾಗಣೆಗೆ ಕಾರಣವಾಗಬಹುದು ಎಂಬ ಆತಂಕಗಳು ಇದ್ದವು. ನಾವು ಹೆಚ್ಚಿನ ಸಂಖ್ಯೆಯ ಈ ಸಂದೇಶಗಳ ಬಗ್ಗೆ ತನಿಖೆ ನಡೆಸಿದ್ದೇವೆ ಮತ್ತು ಅವೆಲ್ಲವೂ ಇಲ್ಲಿಯವರೆಗೆ ನಕಲಿ ಎಂದು ನಾವು ಕಂಡುಕೊಂಡಿದ್ದೇವೆ. ಇವುಗಳನ್ನು ರಾಜ್ಯ ಪೊಲೀಸ್ ಇಲಾಖೆಗಳಿಗೆ ಹಸ್ತಾಂತರಿಸಲಾಗಿದೆ, ಅವರು ಸೈಬರ್ ಸೆಲ್‌ಗಳ ಜೊತೆಗೆ ಈ ತನಿಖೆಯನ್ನು ಮುಂದುವರಿಸುತ್ತಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಈ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳ ಮುಂದೆ ಹಾಜರುಪಡಿಸುವುದನ್ನು ನೋಡಿಕೊಳ್ಳುವಂತೆ ಸಚಿವಾಲಯವು ಈ ಹಿಂದೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸಿಡಬ್ಲ್ಯುಸಿ ದತ್ತು ಪಡೆಯಲು ಸೂಕ್ತವೆಂದು ನೋಡುವ ಪ್ರಕರಣಗಳನ್ನು ಕೇಂದ್ರ ದತ್ತು ಸಂಪನ್ಮೂಲ ಏಜೆನ್ಸಿ ಪರಿಶೀಲಿಸಿ ಪ್ರಕ್ರಿಯೆ ನಡೆಸುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳ ಸಹಾಯವಾಣಿ – 1098 ನಲ್ಲಿ ಹಂಚಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...