Homeಕರ್ನಾಟಕಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

- Advertisement -
- Advertisement -

ಪ್ರತಿ ಜನ ಧನ್​ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ರೂ. ಕಳುವಾಗಿರುವ ಶಂಕೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗಿದೆ. ಜಾಗತಿಕ ಮಟ್ಟದಲ್ಲಿಯೂ ಭಾರತದ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಭಿವೃದ್ಧಿ ಕಾರ್ಯಗಳ ಕುರಿತ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ ಮೂವರಲ್ಲ ನಾಲ್ವರು ಮುಖ್ಯಮಂತ್ರಿ ಆಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಬಿಟ್‌ ಕಾಯಿನ್‌ ಜಾಮೀನು ಸಿಕ್ಕಿದ್ದು ಹೇಗೆ?

ಬಿಟ್‌ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಎಚ್‌.ಡಿ.ಕುಮಾರಸ್ವಾಮಿಯವರು, ಬಿಟ್​ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು, ಜಾಮೀನು ಕೊಟ್ಟವರು ಯಾರು?” ಎಂದು ಪ್ರಶ್ನಿಸಿದರು.

ಬಿಟ್​ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್​​ಶೀಟ್​ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಎಚ್‌.ಡಿ.ಕುಮಾರಸ್ವಾಮಿ ಕೇಳಿದ್ದಾರೆ.


ಇದನ್ನೂ ಓದಿರಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಲೋಕಸಭಾ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಇತರ ಪಕ್ಷಗಳಿಂದ ವಲಸೆ ಬಂದವರು

0
ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಶೇ 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ಹೇಳಿವೆ. ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ...