Homeಕರ್ನಾಟಕಮದ್ಯ ನಿಷೇಧ ಆಂದೋಲನದಿಂದ ಬೃಹತ್ 'ಬೆಂಗಳೂರು ಚಲೋ': ಸಾವಿರಾರು ಮಹಿಳೆಯರು ಭಾಗಿ

ಮದ್ಯ ನಿಷೇಧ ಆಂದೋಲನದಿಂದ ಬೃಹತ್ ‘ಬೆಂಗಳೂರು ಚಲೋ’: ಸಾವಿರಾರು ಮಹಿಳೆಯರು ಭಾಗಿ

- Advertisement -
- Advertisement -

ಮದ್ಯ ನಿಷೇಧ ಆಂದೋಲನ ಕರ್ನಾಟಕ ವತಿಯಿಂದ ‘ಮಹಿಳೆಯರ ಸ್ವಾಭಿಮಾನಕ್ಕಾಗಿ ಬೆಂಗಳೂರು ಚಲೋ’ ಸಮಾವೇಶ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ನವೆಂಬರ್ 25) ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾನೂನು ರೀತಿಯಲ್ಲಿ ಹಾಗೂ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಕಳೆದ 20 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಹೆಚ್ಚಿಸುತ್ತಲೆ ಬರಲಾಗುತ್ತಿದೆ. ಸರ್ಕಾರ ಬರೀ ಮದ್ಯ ಮಾರಾಟದಿಂದ ಬರುವ (ಅಬಕಾರಿ) ಆದಾಯದ ಕಡಗೆ ಹೆಚ್ಚಿನ ಗಮನ ಹರಿಸುತ್ತಿದೆ. ಆದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳೂ ಕುಡಿಯುವ ಚಟಕ್ಕೆ ಬಲಿಯಾಗುತ್ತಿದ್ದಾರೆ. ಜೊತೆಗೆ ಮಹಿಳೆಯರು ಅವರ ಕುಟುಂಬಗಳನ್ನು ನಡೆಸುವುದಕ್ಕೆ ಹಲವಾರು ಕಷ್ಟ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪಂಜಾಬ್ ರಾಜ್ಯದಂತೆ ನಮ್ಮ ರಾಜ್ಯವು ಮದ್ಯ ಸೇವನೆಯಿಂದ ಮಾದಕ ವ್ಯಸನದತ್ತ (ಡ್ರಗ್ಸ್‌) ಯುವಕರು ಹೋಗುವಂತೆ ಮಾಡಬಹುದು ಎಂದು ಸಮಾವೇಶದಲ್ಲಿ ಪಾಲ್ಗೊಂಡವರು ಕಳವಳ ವ್ಯಕ್ತಪಡಿಸಿದರು.

ಕಳೆದ 10 ವರ್ಷಗಳಿಂದ ಕರ್ನಾಟಕದ ಹಲವು ಗ್ರಾಮಗಳಿಂದ ಮಹಿಳೆಯರು ಅಕ್ರಮ ಮದ್ಯ ಮಾರಾಟದ ದೂರುಗಳನ್ನುಅಬಕಾರಿ ಇಲಾಖೆ, ಗ್ರಾಮ ಪಂಚಾಯತಿಗಳು, ಪೋಲಿಸ್ ಠಾಣೆಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಆದರೆ, ಯಾವ ದೂರುಗಳ ಮೇಲೂ ಕ್ರಮ ಜರುಗಿಸಿಲ್ಲ ಎಂದರು.

ಸಮಾವೇಶದಲ್ಲಿ ಸರ್ಕಾರಕ್ಕೆ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ, ಅವುಗಳು ಹೀಗಿವೆ..

1. ಮದ್ಯ ಮಾರಾಟಕ್ಕೆ ಪರವಾನಿಗೆ (ಲೈಸನ್ಸ್) ಹೊಂದಲು ಹರಿಯಾಣ, ಮಹಾರಾಷ್ಟ್ರ ರಾಜಸ್ಥಾನದಂತ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು ಗ್ರಾಮ ಸಭೆಯಲ್ಲಿ ಕನಿಷ್ಠ ಶೇಕಡ 20ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಂದರೆ ಗ್ರಾಮಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇಬೇಕು. ಅದೇ ರೀತಿ ನಮ್ಮಲ್ಲೂ ಈ ಅಂಶವನ್ನು ಪಂಚಾಯತ್ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು. ಕರ್ನಾಟಕದ ಪಂಚಾಯತ್ ರಾಜ್ ಕಾನೂನಿನಲ್ಲಿ ಈ ತರದ ಒಂದು ಅಂಶ 2016ರ ತನಕ ಇತ್ತು. ಆದರೆ ಆ ಸಮಯದಲ್ಲಿ ಇದ್ದ ಸರ್ಕಾರ ಅದನ್ನು ತೆಗೆದು ಹಾಕಿತು.

2. ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ, ಅದಕ್ಕಿಂತ ಹೆಚ್ಚು ಮನೆ ಮನೆಗಳಲ್ಲಿ, ಪಾನ್‌ಶಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ, ನಮ್ಮ ಬೇಡಿಕೆ ಇಷ್ಟೇ ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ ಕೊಡಬೇಕು. ಕರ್ನಾಟಕ ಪಂಚಾಯತ್ ರಾಜ ಕಾನೂನಿನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಈಗಾಗಲೆ ಹೆಚ್ಚುವರಿ ಸಮಿತಿಗಳು ಮಾಡುವ ಅವಕಾಶ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...