Homeಕರ್ನಾಟಕಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆಗೆ ಜಗ್ಗದ ಮಾಜಿ ಶಾಸಕ ಮೊಯ್ದೀನ್ ಬಾವಾ: ಮತ್ತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಕೆ

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, "ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ" ಎಂದು ಹಾರೈಸಿದ್ದಾರೆ.

- Advertisement -
- Advertisement -

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಮೊಯ್ದೀನ್ ಬಾವಾ ಮೂಲಭೂತವಾದಿಯೊಬ್ಬರ ಬೆದರಿಕೆಗೆ ಜಗ್ಗದೆ ಮತ್ತೆ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಈ ಬಾರಿಯೂ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮಾಜಿ ಶಾಸಕ ಮೊಯ್ದೀನ್ ಬಾವಾ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇಗುಲದ ಆಡಳಿತ ಸಮಿತಿಯ ಆಹ್ವಾನ ಮೇರೆಗೆ, ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ದೇಗುಲಕ್ಕೆ ತೆರಳಿದ ಬಾವಾ ಅಲ್ಲಿನ ಸಂಸ್ಕೃತಿಯಂತೆ ಕೊಪ್ಪರಿಗೆ ಸಲ್ಲಿಸಿದ್ದರು.

ಹಿಂದೂ ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ, ದೇವಸ್ಥಾನದಲ್ಲಿ ಕೊಪ್ಪರಿಗೆ ಸಲ್ಲಿಸಿದ್ದಕ್ಕೆ ಹಲವು ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಹಿಂದೂ ಮೂಲಭೂತವಾದಿಯೊಬ್ಬ ಮೊಯ್ದೀನ್‌ ಬಾವಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.

ಇದು ನೆಹರೂ ದೇಶವಲ್ಲ, ಮೋದಿ ದೇಶ: ದೇವಸ್ಥಾನ ಹೋದ ಮೊಯ್ದೀನ್ ಬಾವಾಗೆ ಬೆದರಿಕೆ
ದೇವಸ್ಥಾನದಲ್ಲಿ ಕೊಪ್ಪರಿಗೆ ಅರ್ಪಿಸುತ್ತಿರುವ ಮಾಜಿ ಶಾಸಕ ಮೊಯ್ದೀನ್ ಬಾವಾ

ಬೆದರಿಕೆ ಹಾಕಿದಾತ, ತಾನು ಮುಂಬೈ ಮೂಲದವ ಅನಿಲ್ ಎಂದು ಪರಿಚಯಿಸಿಕೊಂಡಿದ್ದ. ತುಳುವಿನಲ್ಲೇ ಮಾತು ಆರಂಭಿಸಿ, ದೇವಸ್ಥಾನಕ್ಕೆ ಏಕೆ ಹೋಗಿದ್ದೀರೆಂದು ಪ್ರಶ್ನಿಸಿದ್ದ. ದೇವಸ್ಥಾನ ಆಡಳಿತ ಮಂಡಳಿ ಆಹ್ವಾನಿಸಿದಕ್ಕೆ ಹೋಗಿದ್ದೀನೆಂದು ತಿಳಿಸಿದ್ದಕ್ಕೆ, ಅವರು ಮರ್ಯಾದೆ ಕೊಟ್ಟು ಕರೆದ ಮಾತ್ರಕ್ಕೆ ನೀವು ಯಾಕೆ ಹೋಗಿದ್ದು, ಬರುವುದಿಲ್ಲ ಎನ್ನಬೇಕಿತ್ತು ಎಂದು ಧಮಕಿ ಹಾಕಿದ್ದ

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಹಿಂದೂ ದೇವಸ್ಥಾನದಲ್ಲಿ ಹೋಗಿ ಕೊಪ್ಪರಿಗೆ ಇಡುವುದು ಸರಿಯಲ್ಲ ಎಂದು ಹೇಳಿದ ಆತ ಏರು ದನಿಯಲ್ಲಿ ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿ ದೇಶ ಗೊತ್ತಾಯಿತಲ್ಲ… ಇನ್ಮುಂದೆ ಏನಾದ್ರೂ ಗೋಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ…. ಎಂದು ಬೆದರಿಕೆ ಒಡ್ಡಿದ್ದಾನೆ. ಮೊಯ್ದಿನ್ ಬಾವಾ ಇದು ಮೋದಿಯ ದೇಶವಾಗಿರಬಹುದು. ಆದರೆ ಅವರೇನು ಕ್ರಯಕ್ಕೆ ತೆಗೆದುಕೊಂಡಿಲ್ಲ. ಇದು ನಮ್ಮ ದೇಶ ಫೋನ್ ಇಡಿ ಎಂದು ಕರೆ ಕಟ್ ಮಾಡಿದ್ದರು.

ಬೆದರಿಕೆ ಕರೆ ಮಾಡಿದ ಎನ್ನಲಾದ ಅನಿಲ್‌ ವಿರುದ್ಧ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ದೇವಸ್ಥಾನ ಆಡಳಿತ ಮಂಡಳಿ ಮತ್ತೆ ಅಚ್ಚರಿಯ ನಡೆ ತೋರಿಸಿ, ಮಾಜಿ ಶಾಸಕ ಮೊಯ್ದೀನ್ ಬಾವಾರಿಗೆ ಮತ್ತೆ ದೇವಸ್ಥಾನಕ್ಕ ಆಹ್ವಾನ ನೀಡಿತ್ತು. ಪರ ವಿರೋಧ ಚರ್ಚೆಗಳ ನಡುವೆಯೇ ಈ ಹಿನ್ನೆಲೆ ನಿನ್ನೆ (ಅ.25)ರಂದು ಮೊಯ್ದೀನ್ ಬಾವಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಂದಿನ ವರ್ಷ ನಡೆಯಲಿರುವ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಮೊಯ್ದೀನ್ ಬಾವಾ ಅವರಿಗೆ ಮತ್ತೆ ಆಹ್ವಾನ ನೀಡಲಾಯಿತು.

ಬೆದರಿಕೆ ಕರೆ ಬಗ್ಗೆ ಮಾತನಾಡಿದ ಮಾಜಿ ಶಾಸಕರ ಮೊಯ್ದೀನ್ ಬಾವಾ, “ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಎಬ್ಬಿಸುವವರಿಗೆ ದೇವರು ಒಳ್ಳೇಯ ಬುದ್ದಿ ನೀಡಲಿ” ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಉಳವಿಯಲ್ಲಿ ಚನ್ನಬಸವಣ್ಣನ ದಿಟ್ಟ ಹೋರಾಟ : ಶರಣ ಚಳುವಳಿಯ ಮಹತ್ವದ ಮೈಲಿಗಲ್ಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...