Homeದಲಿತ್ ಫೈಲ್ಸ್ದಲಿತ ಕುಟುಂಬಕ್ಕೆ ಬೆದರಿಕೆ; ಸ್ವಘೋಷಿತ ದೇವಮಾನವನ ಸಹೋದರನ ವಿರುದ್ಧ ಎಫ್‌ಐಆರ್‌

ದಲಿತ ಕುಟುಂಬಕ್ಕೆ ಬೆದರಿಕೆ; ಸ್ವಘೋಷಿತ ದೇವಮಾನವನ ಸಹೋದರನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭೋಪಾಲ್: ದಲಿತ ಕುಟುಂಬಕ್ಕೆ ಕಿರುಕುಳ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಪೊಲೀಸರು, ಸ್ವಯಂಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರ ಸಹೋದರನ ವಿರುದ್ಧ ಸೋಮವಾರ ಎಫ್‌ಐಆರ್‌ ದಾಖಲಿಸಿದ್ದಾರೆ.

ಗಡ ಗ್ರಾಮದ ನಿವಾಸಿಯಾದ ವಧುವಿನ ತಂದೆ ಕಲ್ಲು ಅಹಿರ್ವಾರ್ ಅವರು ಆಯೋಜಿಸಿದ್ದ ಯುವ ದಲಿತ ದಂಪತಿಯ ವಿವಾಹಕ್ಕೆ ಬಂದಿದ್ದ ಸೌರವ್ ಗರ್ಗ್ ಅಲಿಯಾಸ್ ಶಾಲಿಗ್ರಾಮ್ ಗರ್ಗ್, ಗನ್‌ ಹಿಡಿದು ಜನರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೊ ವೈರಲ್ ಆದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಬಾಗೇಶ್ವರ ಧಾಮ್‌ನಲ್ಲಿ ತನ್ನ ಸಹೋದರ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯನ್ನು ಆಗಲಿಲ್ಲ ಎಂಬ ಕಾರಣಕ್ಕೆ ಗಾರ್ಗ್ ಬಂದೂಕು ಹಿಡಿದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತರ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಮಾತನಾಡಿ, “ಬಾಗೇಶ್ವರ್ ಧಾಮ್‌ನ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಮಾಡುವುದಾಗಿ ಕಲ್ಲು ಅಹಿರ್ವಾರ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ನಂತರ ಮನೆಯಲ್ಲಿ ಪ್ರತ್ಯೇಕವಾಗಿ ವಿವಾಹವನ್ನು ಮಾಡಲು ನಿರ್ಧರಿಸಿದರು” ಎಂದಿದ್ದಾರೆ.

“ಫೆಬ್ರವರಿ 11 ರಂದು, ಸೌರವ್ ಗಾರ್ಗ್ ಕೆಲವು ಜನರೊಂದಿಗೆ ಅಹಿರ್ವಾರ್ ಅವರ ಮನೆಗೆ ಹೋಗಿ ಗಲಾಟೆ ಮಾಡಿದ್ದಾನೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ದಲಿತರು ದೇವಾಲಯ ಪ್ರವೇಶಿಸಿದರೆಂದು ಹಿಂಸಾಚಾರ; 14 ಜನರಿಗೆ ಗಾಯ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಭಾಷೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಅಪರಾಧ ಬೆದರಿಕೆ), 427 (₹50 ಕ್ಕಿಂತ ಹೆಚ್ಚು ಹಾನಿ) ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿಯ ಸಹೋದರನ ಕೈಯಲ್ಲಿ ಪಿಸ್ತೂಲ್, ಬಾಯಿಯಲ್ಲಿ ಸಿಗರೇಟ್ ಇರುವುದು ವೈರಲ್‌ ವಿಡಿಯೊದಲ್ಲಿ ಸೆರೆಯಾಗಿದೆ. ಆತ ಮದ್ಯಪಾನ ಮಾಡಿದ್ದ ಎನ್ನಲಾಗುತ್ತಿದೆ. ಈ ಸ್ಥಿತಿಯಲ್ಲಿ ದಲಿತ ಸಮುದಾಯದವರ ಮದುವೆಗೆ ಆಗಮಿಸಿ ಅವಾಂತರ ಸೃಷ್ಟಿಸಿದ್ದಾನೆ.

ವೀಡಿಯೋ ಹೊರಬಿದ್ದ ನಂತರ ಧೀರೇಂದ್ರ ಕೃಷ್ಣ ಶಾಸ್ತ್ರಿ ಟೀಕೆಗೆ ಗುರಿಯಾಗಿದ್ದಾರೆ. ಅದೇ ಸಮಯದಲ್ಲಿ, ಛತ್ತರ್‌ಪುರ ಎಸ್‌ಪಿ ಸಚಿನ್ ಶರ್ಮಾ ಪ್ರಕರಣದ ತನಿಖೆಗಾಗಿ ತನಿಖಾ ತಂಡವನ್ನು ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...