Homeಮುಖಪುಟಅಸಾರಾಮ್ ಬೆಂಬಲಿಗರಿಂದ ಬೆದರಿಕೆ; ಡಿಸ್ಕವರಿ ಇಂಡಿಯಾದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಅಸಾರಾಮ್ ಬೆಂಬಲಿಗರಿಂದ ಬೆದರಿಕೆ; ಡಿಸ್ಕವರಿ ಇಂಡಿಯಾದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅಪರಾದಿ ಅಸರಾಮ್ ಬಾಪು ಅವರ ಬೆಂಬಲಿಗರು, ಅಭಿಮಾನಿಗಳು ಮತ್ತು ಭಕ್ತರಿಂದ ಬೆದರಿಕೆ ಇದೆ ಎಂದು ಆರೋಪಿಸಿ, ಡಿಸ್ಕವರಿ ಇಂಡಿಯಾ ಮತ್ತು ಅದರ ಕೆಲವು ಉದ್ಯೋಗಿಗಳು ಪೊಲೀಸ್ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲಿ, ಕೇಂದ್ರ ಗೃಹ ಸಚಿವಾಲಯ, ರಾಜ್ಯ ಸರ್ಕಾರಗಳು ಮತ್ತು ನೋಡಲ್ ಏಜೆನ್ಸಿಗಳು ಡಿಸ್ಕವರಿ ಇಂಡಿಯಾದ ಉದ್ಯೋಗಿಗಳು ಮತ್ತು ಆಸ್ತಿಗಳಿಗೆ ಸಾಕಷ್ಟು ರಕ್ಷಣೆ ನೀಡುವಂತೆ ಮನವಿ ಮಾಡಲಾಗಿದೆ.

‘ಕಲ್ಟ್ ಆಫ್ ಫಿಯರ್: ಅಸರಾಮ್ ಬಾಪು’ ಸಾಕ್ಷ್ಯಚಿತ್ರ ಸರಣಿ ಡಿಸ್ಕವರಿ ಪ್ಲಸ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾದ ನಂತರ ಬೆದರಿಕೆ ಪ್ರಾರಂಭವಾಯಿತು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕಂಪನಿ ಮತ್ತು ಅವರ ಉದ್ಯೋಗಿಗಳಿಗೆ ಬೆದರಿಕೆಗಳು ಬರುತ್ತಲೇ ಇವೆ, ಇದರಿಂದಾಗಿ ಡಿಸ್ಕವರಿ ಸಿಬ್ಬಂದಿಗಳು ಮನೆಯಿಂದ ಕೆಲಸ ಮಾಡುವ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

“ಇದು ಗೃಹಬಂಧನ ಪರಿಸ್ಥಿತಿಯನ್ನು ಸೃಷ್ಟಿಸಿದೆ, ಇದು ಅವರ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಡಿಸ್ಕವರಿ ಮತ್ತು ಅದರ ಉದ್ಯೋಗಿಗಳ ವಿರುದ್ಧ ದ್ವೇಷದ ಕಾಮೆಂಟ್‌ಗಳು, ಬೆದರಿಕೆಗಳನ್ನು ಸಹ ನಿರ್ದೇಶಿಸಲಾಗಿದೆ, ಇದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅರ್ಜಿಯ ಪ್ರಕಾರ, ಜನವರಿ 30 ರಂದು, ಡಿಸ್ಕವರಿ ಇಂಡಿಯಾ ಕಚೇರಿಯ ಹೊರಗೆ 10-15 ಜನರ ಗುಂಪು ಜಮಾಯಿಸಿ ಅನಧಿಕೃತ ಪ್ರವೇಶಕ್ಕೆ ಯತ್ನಿಸಿತು, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಕಾರಣವಾಯಿತು. ಪೊಲೀಸರು ಗುಂಪನ್ನು ಚದುರಿಸಿದರೂ, ದುಷ್ಕರ್ಮಿಗಳ ವಿರುದ್ಧ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳಲಿಲ್ಲ.

ಜನವರಿ 15 ರಂದು, ರಾಜಸ್ಥಾನ ಹೈಕೋರ್ಟ್ 2013 ರಲ್ಲಿ ತನ್ನ ಆಶ್ರಮದಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 86 ವರ್ಷದ ಸ್ವಯಂಘೋಷಿತ ದೇವಮಾನವನಿಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು ನೀಡಿತು.

ಆಸಾರಾಮ್ ಆಶ್ರಮಕ್ಕೆ ಆಗಮಿಸಿದಾಗ ಆತನ ಬೆಂಬಲಿಗರಿಂದ ಭವ್ಯ ಸ್ವಾಗತ ದೊರೆಯಿತು. ಆತನ ಕಾರಿನ ಮೇಲೆ ಹೂವುಗಳನ್ನು ಸುರಿಸಿ, ಅಸರಾಮ್ ಪ್ರವೇಶಿಸುತ್ತಿದ್ದಂತೆ ಆರತಿ ಮಾಡಲಾಯಿತು.

ಸ್ವಯಂ ಘೋಷಿತ ದೇವಮಾನವ ಜೋಧಪುರ ನ್ಯಾಯಾಲಯವು ತನ್ನ ಆಶ್ರಮದಲ್ಲಿ ಹದಿಹರೆಯದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತು. 2023 ರಲ್ಲಿ, ಗುಜರಾತ್ ನ್ಯಾಯಾಲಯವು 2013 ರಲ್ಲಿ ತನ್ನ ಆಶ್ರಮದಲ್ಲಿ ಹಲವಾರು ಸಂದರ್ಭಗಳಲ್ಲಿ ಮಹಿಳಾ ಶಿಷ್ಯೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಆತನನ್ನು ದೋಷಿ ಎಂದು ಘೋಷಿಸಿತು.

ಇದನ್ನೂ ಓದಿ; ರಾಜ್ಯ ಆರೋಗ್ಯ ರಕ್ಷಣಾ ಯೋಜನೆಗೆ ₹2,424 ಕೋಟಿ ಅನುಮೋದನೆ ನೀಡಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...