Homeಕರ್ನಾಟಕಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ...

ಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ ಆರೋಪ

- Advertisement -
- Advertisement -

ಧರ್ಮಸ್ಥಳದ ಶವಶೋಧ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಯಲ್ಲಿರುವ ಅಧಿಕಾರಿಯೊಬ್ಬರ ವಿರುದ್ದವೇ ಗಂಭೀರ ಆರೋಪ ಕೇಳಿ ಬಂದಿದೆ.

ಎಸ್‌ಐಟಿಯ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಅವರು ಸಾಕ್ಷಿ ದೂರುದಾರನಿಗೆ (ಭೀಮ) ಬೆದರಿಕೆ ಹಾಕಿದ್ದಾರೆ. ದೂರು ಹಿಂಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ವರದಿಯಾಗಿದೆ.

ಮಂಜುನಾಥ್ ಗೌಡ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ತಮ್ಮ ಮೊಬೈಲ್ ಫೋನ್‌ ಮೂಲಕ ದೂರುದಾರನ ಹೇಳಿಕೆಯನ್ನು ರೆಕಾರ್ಡ್ ಮಾಡುವಾಗ, ದೂರು ಹಿಂಪಡೆಯಲು ಇಚ್ಛಿಸಿರುವುದಾಗಿ ಸುಳ್ಳು ಹೇಳುವಂತೆ ಆತನಿಗೆ ಒತ್ತಾಯಿಸಿದ ಆರೋಪವಿದೆ ಎಂದು blrpost.com ವರದಿ ಮಾಡಿದೆ.

ದೂರುದಾರನ ಪರ ವಕೀಲರು ಈ ಬಗ್ಗೆ ಎಸ್‌ಐಟಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಬೆಳವಣಿಗೆಯು ಎಸ್‌ಐಟಿಯಲ್ಲಿರುವ ಕೆಳ ಹಂತದ ಅಧಿಕಾರಿಗಳ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು blrpost.com ಹೇಳಿದೆ.

ಈ ಮಾಹಿತಿಯನ್ನು ಗೃಹ ಇಲಾಖೆಯ ಅಧಿಕಾರಿಯೊಬ್ಬರು ನಮ್ಮ ಜೊತೆ ಹಂಚಿಕೊಂಡಿದ್ದು, ಅವರು ದೂರಿನ ವಿಷಯವನ್ನು ಸಹ ಒದಗಿಸಿದ್ದಾರೆ. ಅಧಿಕಾರಿಯ ಪ್ರಕಾರ, ವಕೀಲರಾದ ಅನನ್ಯಾ ಗೌಡ ಅವರು ಮಂಜುನಾಥ ಗೌಡ ಅವರನ್ನು ಎಸ್‌ಐಟಿಯಿಂದ ತಕ್ಷಣ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ ಎಂದು blrpost.com ತಿಳಿಸಿದೆ.

ವಕೀಲೆ ಅನನ್ಯಾ ಗೌಡ ಅವರು ಎಸ್‌ಐಟಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ ಈಮೇಲ್ ಸ್ಕ್ರೀನ್ ಶಾಟ್ ಮತ್ತು ವಿಯಷವನ್ನು blrpost.com ತನ್ನ ವರದಿಯಲ್ಲಿ ಹಂಚಿಕೊಂಡಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಪೊಲೀಸ್ ಅಧಿಕಾರಿ ಮಂಜುನಾಥ್ ಗೌಡ ಅವರ ವಿರುದ್ದ ಆರೋಪದ ಬಗ್ಗೆ ಚರ್ಚೆಯಾಗುತ್ತಿದೆ.

ಮಂಜುನಾಥ್ ಗೌಡ ಅವರು ಶವ ಶೋಧದ ವೇಳೆ ಸಿಕ್ಕ ಅವಶೇಷಗಳ ಫೋಟೋ ತೆಗೆದು ಪ್ರಭಾವಿ ಕುಟುಂಬಕ್ಕೆ ಕಳುಹಿಸಿದ್ದಾರೆ ಎಂದು ಹೇಳಲಾಗ್ತಿದೆ. ಶವಶೋಧದ ವೇಳೆ ಸ್ಥಳದಲ್ಲಿದ್ದ ಮಂಜುನಾಥ್ ಗೌಡ ಸಂಪೂರ್ಣ ಪ್ರಕ್ರಿಯೆಯ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸುದ್ದಿ ವಾಹಿನಿಯೊಂದರ ಸ್ಕ್ರೀನ್ ಶಾಟ್ ಹಂಚಿಕೊಳ್ಳಲಾಗ್ತಿದೆ.

ಹಾಗಾಗಿ, ಶವ ಶೋಧದ ವೇಳೆ ದೂರುದಾರನ ಪರ ವಕೀಲರು ಮತ್ತು ನಿವೃತ್ತ ನ್ಯಾಯಾಧೀಶರು ಸ್ಥಳದಲ್ಲಿರಬೇಕು ಎಂದು ಹೋರಾಟಗಾರರು ಬೇಡಿಕೆ ಇಟ್ಟಿದ್ದಾರೆ.

ಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...