Homeಕರ್ನಾಟಕಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ: ನ್ಯಾಯಾಧೀಶರಿಗೆ ದೂರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ: ನ್ಯಾಯಾಧೀಶರಿಗೆ ದೂರು

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರೊಬ್ಬರಿಗೆ ಬುಧವಾರ (ಮೇ.28) ಬೆದರಿಕೆ ಹಾಕಲಾಗಿದೆ. ಈ ವಿಚಾರವನ್ನು ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಸಾರ್ವಜನಿಕ ಅಭಿಯೋಜಕ ಬಾಲನ್ ಅವರು ನಾನುಗೌರಿ.ಕಾಂಗೆ ಖಚಿತಪಡಿಸಿದ್ದಾರೆ.

ಸಾಕ್ಷಿದಾರರೊಬ್ಬರು ನ್ಯಾಯಾಲಯದ ವಿಚಾರಣೆ ಹಾಜರಾಗಲು ಬುಧವಾರ ಬಸ್‌ ಮೂಲಕ ಬರುತ್ತಿದ್ದಾಗ, ಅವರಿಗೆ ಫೋನ್ ಕರೆಯೊಂದು ಬಂದಿದ್ದು. ಅದರಲ್ಲಿ ಮಾತನಾಡಿದವರು “ಕೋರ್ಟ್‌ಗೆ ಹೋದಾಗ ನಿನ್ನ ಮುಂದೆ ನಾಲ್ಕು ಮಂದಿ ಇರುತ್ತಾರೆ. ಅವರ ಗುರುತು ಇಲ್ಲ” ಎಂದು ಹೇಳುವಂತೆ ಒತ್ತಾಯಿಸಿದ್ದಾರೆ ಎಂದು ಬಾಲನ್ ತಿಳಿಸಿದ್ದಾರೆ.

ಈ ವಿಚಾರವನ್ನು ನ್ಯಾಯಾಧೀಶರ ಗಮನಕ್ಕೆ ತರಲಾಗಿದೆ ಬಾಲನ್ ಹೇಳಿದ್ದಾರೆ.

ಸಾಕ್ಷಿದಾರ ಕೂಡ ಪ್ರಾಸಿಕ್ಯೂಷನ್ ವಿರುದ್ದ ಸಾಕ್ಷಿ ಹೇಳುವಂತೆ ತನಗೆ ಫೋನ್ ಬಂದಿದೆ ಎಂದು ನ್ಯಾಯಾಧೀಶರಿಗೆ ದೂರು ನೀಡಿದ್ದಾರೆ. ಅದರಲ್ಲಿ ವಕೀಲ ಬಾಲನ್ ಹೇಳಿದ ವಿಚಾರವನ್ನು ಅವರು ಉಲ್ಲೇಖಿಸಿದ್ದಾರೆ.

ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಆರ್‌.ಆರ್‌ ನಗರದ ಅವರ ಮನೆಯ ಮುಂದೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳನ್ನು ಗುರುತಿಸಲಾಗಿದ್ದು, 17 ಮಂದಿಯನ್ನು ಬಂಧಿಸಲಾಗಿತ್ತು. ಇನ್ನೋರ್ವ ಆರೋಪಿ ವಿಕಾಸ್ ಪಾಟೀಲ್ ಎಂಬಾತ ತಲೆಮರೆಸಿಕೊಂಡಿದ್ದು, ಇನ್ನೂ ಬಂಧನವಾಗಿಲ್ಲ.

2025ರ ಜನವರಿ ವೇಳೆಗೆ ಪ್ರಕರಣದಲ್ಲಿ ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು ದೊರೆತಿದೆ.

ಮುಸ್ಲಿಂ ಮೀಸಲು ಮಸೂದೆ ಮತ್ತೆ ವಾಪಸ್: ಸುಪ್ರೀಂ ತೀರ್ಪು ಉಲ್ಲೇಖಿಸಿದ ರಾಜ್ಯಪಾಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...