Homeಕರ್ನಾಟಕಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

ಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

- Advertisement -
- Advertisement -

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತರನ್ನು ಮುನವ್ವರ್, ಇಲ್ತಾಜ್ ಮತ್ತು ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದ ಮುನಾವರ್, ದೆಹಲಿ ಮೂಲದ ಇಲ್ತಾಜ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಶಫಿ ನಾಶಿಪುಡಿ ಬಂಧಿತರು ಎಂದು ತಿಳಿದು ಬಂದಿದೆ. ಸದ್ಯ ಮೂವರು ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಗದ್ದಲವನ್ನು ಸೃಷ್ಟಿಸಿತ್ತು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದಾದ ಬಳಿಕ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಘಟನೆ ನಡೆದ ದೃಶ್ಯಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಿದೆ. ಈ ಕುರಿತ ವರದಿ ಬಹಿರಂಗವಾಗುವ ಮೊದಲೇ ಮೂವರ ಬಂಧನ ನಡೆದಿದೆ.

ಈ ಕುರಿತು ಬೆಂಗಳೂರು ಪೊಲೀಸ್‌ ಉಪ ಆಯುಕ್ತರು ಪ್ರಕಟಣೆಯನ್ನು ಹೊರಡಿಸಿದ್ದು, ಎಫ್‌ಎಸ್ಎಲ್ ವರದಿ, ಸಾಂಧರ್ಬಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂರು ಜನ ಆರೋಪಿಗಳನ್ನು ಬಂಧಿಸಿ, ಅವರುಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗಿರುತ್ತದೆ ಎಂದು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವಿಧಾನ ಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೂಗಿದ್ದಾರೆಂದು  ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಾಗಿತ್ತು. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಎನ್‌ಡಿಎ ಬಣದಲ್ಲಿ ಭುಗಿಲೆದ್ದ ಸೀಟು ಹಂಚಿಕೆ ಬಿಕ್ಕಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...