Homeಕರ್ನಾಟಕಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

ಪಾಕಿಸ್ತಾನ ಪರ ಘೋಷಣೆ ಆರೋಪ: ಮೂವರ ಬಂಧನ

- Advertisement -
- Advertisement -

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತರನ್ನು ಮುನವ್ವರ್, ಇಲ್ತಾಜ್ ಮತ್ತು ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದ ಮುನಾವರ್, ದೆಹಲಿ ಮೂಲದ ಇಲ್ತಾಜ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಶಫಿ ನಾಶಿಪುಡಿ ಬಂಧಿತರು ಎಂದು ತಿಳಿದು ಬಂದಿದೆ. ಸದ್ಯ ಮೂವರು ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಗದ್ದಲವನ್ನು ಸೃಷ್ಟಿಸಿತ್ತು. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದಾದ ಬಳಿಕ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಘಟನೆ ನಡೆದ ದೃಶ್ಯಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಿದೆ. ಈ ಕುರಿತ ವರದಿ ಬಹಿರಂಗವಾಗುವ ಮೊದಲೇ ಮೂವರ ಬಂಧನ ನಡೆದಿದೆ.

ಈ ಕುರಿತು ಬೆಂಗಳೂರು ಪೊಲೀಸ್‌ ಉಪ ಆಯುಕ್ತರು ಪ್ರಕಟಣೆಯನ್ನು ಹೊರಡಿಸಿದ್ದು, ಎಫ್‌ಎಸ್ಎಲ್ ವರದಿ, ಸಾಂಧರ್ಬಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂರು ಜನ ಆರೋಪಿಗಳನ್ನು ಬಂಧಿಸಿ, ಅವರುಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗಿರುತ್ತದೆ ಎಂದು ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವಿಧಾನ ಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೂಗಿದ್ದಾರೆಂದು  ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಾಗಿತ್ತು. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಎನ್‌ಡಿಎ ಬಣದಲ್ಲಿ ಭುಗಿಲೆದ್ದ ಸೀಟು ಹಂಚಿಕೆ ಬಿಕ್ಕಟ್ಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...