Homeಕರ್ನಾಟಕಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು

- Advertisement -
- Advertisement -

ಜಮ್ಮು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಿನ್ನೆ (ಡಿ.24) ಸಂಜೆ ನಡೆದ ಸೇನಾ ವಾಹನ ಅಪಘಾತದಲ್ಲಿ ಐವರು ಯೋಧರು ಸಾವನ್ನಪ್ಪಿದ್ದು, ಈ ಪೈಕಿ ಮೂವರು ಕನ್ನಡಿಗರು ಎಂದು ವರದಿಯಾಗಿದೆ.

ಒಟ್ಟು 18 ಯೋಧರು ಪ್ರಯಾಣಿಸುತ್ತಿದ್ದ ಸೇನಾ ವಾಹನ 350 ಅಡಿ ಆಳದ ಕಮರಿಗೆ ಉರುಳಿದ್ದು, ಐವರು ಯೋಧರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನೀಲಂನ ಸೇನಾ ಪ್ರಧಾನ ಕಚೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುವಾಗ, ಘೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಕರ್ನಾಟಕದ ಯೋಧರು. ಇನ್ನಿಬ್ಬರು ಮಹಾರಾಷ್ಟ್ರದ ಯೋಧರು ಸಾವಿಗೀಡಾಗಿದ್ದಾರೆ.


ಸಿಎಂ ಸಂತಾಪ

ಅಪಘಾತದಲ್ಲಿ ಸಾವನ್ನಪ್ಪಿದ ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು “ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಸಂಭಾಲ್ ಹಿಂಸಾಚಾರ ಪ್ರಕರಣ: ಮತ್ತೆ 7 ಆರೋಪಿಗಳನ್ನು ಬಂಧಿಸಿದ ಪೊಲೀಸರು, ಒಟ್ಟು ಸಂಖ್ಯೆ 47 ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...