Homeಮುಖಪುಟಜಮ್ಮ-ಕಾಶ್ಮೀರ: ಪೊಲೀಸ್‌ ಠಾಣೆ ಮೇಲೆ ಹಿಂಸಾತ್ಮಕ ದಾಳಿ; ಮೂವರು ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ 16 ಸೈನಿಕರ...

ಜಮ್ಮ-ಕಾಶ್ಮೀರ: ಪೊಲೀಸ್‌ ಠಾಣೆ ಮೇಲೆ ಹಿಂಸಾತ್ಮಕ ದಾಳಿ; ಮೂವರು ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ 16 ಸೈನಿಕರ ವಿರುದ್ಧ ಎಫ್ಐಆರ್‌

- Advertisement -
- Advertisement -

ಕುಪ್ವಾರ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ ಒಟ್ಟು 16 ಸೈನಿಕರ ವಿರುದ್ಧ ಕೊಲೆ ಯತ್ನ ಮತ್ತು ಡಕಾಯಿತಿ ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮಂಗಳವಾರ ಪೊಲೀಸರು ಕುಪ್ವಾರ ಜಿಲ್ಲೆಯ ಬಟ್ಪೋರ ಎಂಬಲ್ಲಿ ಟೆರಿಟೋರಿಯಲ್‌ ಸೇನೆಯ ಸೈನಿಕರೊಬ್ಬರ ಮನೆಯ ಮೇಲೆ ಮಾದಕವಸ್ತು ಪ್ರಕರಣವೊಂದರ ತನಿಖೆ ಭಾಗವಾಗಿ ದಾಳಿ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಸೈನಿಕರು ಅದೇ ದಿನ ರಾತ್ರಿ ಸುಮಾರು 9.40ಕ್ಕೆ ಠಾಣೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಟೆರಿಟೋರಿಯಲ್ ಆರ್ಮಿಯ ಶಸ್ತ್ರಸಜ್ಜಿತ ಮತ್ತು ಸಮವಸ್ತ್ರಧಾರಿ ಸಿಬ್ಬಂದಿಗಳ ಗುಂಪು, ಸೇನೆಯ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಪೊಲೀಸ್ ಠಾಣೆಗೆ ದಾಳಿ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪ್ರಾದೇಶಿಕ ಸೇನೆಯು ಭಾರತೀಯ ಸೇನೆಗೆ ಬೆಂಬಲ ಒದಗಿಸುವ ಅರೆಕಾಲಿಕ ಸ್ವಯಂಸೇವಕರನ್ನು ಒಳಗೊಂಡಿರುವ ಮಿಲಿಟರಿ ಮೀಸಲು ಪಡೆಯಾಗಿದೆ.

ಸೇನಾ ಲೆಫ್ಟಿನೆಂಟ್ ಕರ್ನಲ್ ಅಂಕಿತ್ ಸೂದ್, ರಾಜೀವ್ ಚೌಹಾಣ್ ಮತ್ತು ನಿಖಿಲ್ ನೇತೃತ್ವದ ಸಶಸ್ತ್ರ ಗುಂಪು ಪೊಲೀಸ್ ಠಾಣೆಯ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಿ ಅಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಪೊಲೀಸ್ ಅಧಿಕಾರಿಗಳಾದ ರಯೀಸ್ ಖಾನ್, ಇಮ್ತಿಯಾಜ್ ಮಲಿಕ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸಲೀಮ್ ಮುಷ್ತಾಕ್, ಜಹೂರ್ ಅಹ್ಮದ್ ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸ್ ಅಧಿಕಾರಿಗಳಿಂದ ಮೊಬೈಲ್ ಫೋನ್‌ಗಳನ್ನು ಸೇನಾ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ ಮತ್ತು ಸ್ಥಳದಿಂದ ಪರಾರಿಯಾಗುವ ಮೊದಲು ಪೊಲೀಸ್ ಪೇದೆ ಗುಲಾಂ ರಸೂಲ್‌ ಅವರನ್ನು ಅಪಹರಿಸಿದ್ದಾರೆ ಎಂದು ಎಫ್ಐಆರ್‌ನಲ್ಲಿ ಆರೋಪಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯು ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸಲು ಮತ್ತು ಅಪರಾಧಿಗಳ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸಲು ಸಹಾಯ ಮಾಡಿದೆ. ಆರೋಪಿ ಸೇನಾ ಸಿಬ್ಬಂದಿಗಳ ವಿರುದ್ಧ ಸೆಕ್ಸನ್‌ 186(ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 332 (ಸಾರ್ವಜನಿಕ ಸೇವಕರನ್ನು ಅವರ ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 307(ಕೊಲೆಯ ಯತ್ನ), 342 ಮತ್ತು 147 (ಗಲಭೆಗೆ ಶಿಕ್ಷೆ), 392 (ದರೋಡೆಗೆ ಶಿಕ್ಷೆ), 397 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ತನಿಖೆಯನ್ನು ಕುಪ್ವಾರ ಉಪ ಪೊಲೀಸ್ ವರಿಷ್ಠಾಧಿಕಾರಿ ನಡೆಸುತ್ತಿದ್ದಾರೆ. ಘಟನೆ ಬೆನ್ನಲ್ಲಿ ಪ್ರತಿಕ್ರಿಯಿಸಿದ್ದ ಶ್ರೀನಗರ ಮೂಲದ ರಕ್ಷಣಾ ವಕ್ತಾರರು ಘಟನೆಯನ್ನು ತಣ್ಣಗಾಗಿಸಲು ಪ್ರಯತ್ನಿಸಿದ್ದು,  ಪೊಲೀಸರು ಮತ್ತು ಸೇನಾ ಸಿಬ್ಬಂದಿಗಳ ಘರ್ಷಣೆಯ ಸುದ್ದಿ ಸುಳ್ಳು ಎಂದು ಹೇಳಿದ್ದರು. ಕಾರ್ಯಾಚರಣೆಯ ವಿಷಯದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಪ್ರಾದೇಶಿಕ ಸೇನಾ ಘಟಕದ ನಡುವಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...