Homeಮುಖಪುಟಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರ ಭಾಷಣ ಎಂದರೆ ನಿರ್ದಿಷ್ಟ ವಿಷಯದ ಮೇಲೆ ಮಾತನಾಡಬೇಕು ಎಂದೇನಿಲ್ಲ. ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಮಾತನಾಡಬಹುದು. ರಾಜಕೀಯ ಕೂಡ ಮಾತಾಡಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತು ಆರಂಭಿಸಿದರು.

ನಾಲ್ಕನೇ ದಿನ ಸದನ ಆರಂಭದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಶ್ರದ್ಧಾ ರೀತಿ ಆಗಿಬಿಟ್ಟಿದೆ. ಪಾಲಿಸಿಗಳ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಈ ರಾಜ್ಯಪಾಲರ ಭಾಷಣದಲ್ಲಿ ಅಂತಹ ಮಹತ್ವದ ಅಂಶಗಳಿಲ್ಲ ಎಂದರು.

ಚುನಾವಣೆ ನಡೆದಾಗ ಈ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶಕೊಟ್ಟರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ರಾಜೀನಾಮೆ ಕೊಟ್ಟರು. ಆನಂತರ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚಿಸಿ ಎಚ್‌.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದರು. ಆನಂತರ ಬಿಜೆಪಿ ಪಕ್ಷವು ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 03 ಶಾಸಕರನ್ನು ರಾಜೀನಾಮೆ ಕೊಡಿಸಿ ಸರ್ಕಾರ ಬೀಳಿಸಿ ಈ ಸರ್ಕಾರ ತಂದರು ಎಂದರು.

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ ಎಂದು ಹೇಳುತ್ತೇನೆ. ಇದು ಜನಾದೇಶದ ಮೂಲಕ ರಚನೆಯಾದುದ್ದು ಅಲ್ಲ. 17ಜನ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರಿಂದ ಸರ್ಕಾರ ರಚನೆಯಾಗಿದೆಯೇ ಹೊರತು, ಜನಾರ್ಶಿವಾದದಿಂದ ಅಲ್ಲ. ಹಾಗಾಗಿ ಆಪರೇಷನ್‌ ಕಮಲದಿಂದ ಬಂದಿದ್ದೇವೆ ಎಂದು ಹೇಳಬೇಕು ಎಂದರು.

ರಾಜ್ಯಪಾಲರು ಜಂಟಿ ಸದನ ಉಲ್ಲೇಖಿಸಿ ಭಾಷಣ ಮಾಡಿದ್ದಾರೆ. ಈ ಸರ್ಕಾರದ ಕಾರ್ಯಕ್ರಮ, ಮುನ್ನೋಟ,  ನೀತಿಯ ಕುರಿತು ಏನೂ ಇಲ್ಲ ಅದರಲ್ಲಿ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಬಿಟ್ಟರೆ ಮತ್ತೇನಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಏಳು ತಿಂಗಳಾಗುತ್ತಾ ಬಂದಿದೆ. ಇಷ್ಟರಲ್ಲಿ ಹೆಸರಿಸಬಹುದಾದ ಯಾವುದೇ ಕಾರ್ಯಕ್ರಮಗಳಿಲ್ಲ ಎಂದರು.

2 ಲಕ್ಷದವರೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಮತ್ತು 1 ಲಕ್ಷದವರೆಗಿನ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿಯವರು. ಉಳಿದೆಲ್ಲ ಕಾರ್ಯಕ್ರಮಗಳು ನಮ್ಮ ಸರ್ಕಾರ 2013-18ರವರೆಗೆ ನಾವು ಮಾಡಿದ್ದು. ಕಾಡು ಬೆಳವಣಿಗೆಯಲ್ಲಿ ಕರ್ನಾಟಕ ನಂಬರ್‌ 1 ಆಗಲು ಕಾಡು ಬೆಳೆಸಿದ್ದು ನಾವು. ಹೈನುಗಾರಿಕೆಯಲ್ಲಿ ಗುಜರಾತ್‌ ಬಿಟ್ಟರೆ ಎರಡನೇ ಸ್ಥಾನದಲ್ಲಿ ನಾವಿದ್ದೇವೆ. ದಿನಕ್ಕೆ 80 ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಇದಕ್ಕೆ ಕಾರಣ ಲೀಟರ್‌ 5 ರೂ ಪ್ರೋತ್ಸಾಹ ಧನ ಕೊಡಲು ಆರಂಭಿಸಿದೆವು. ಅಂದಾಜು 4 ಕೋಟಿ ರೂ ದಿನಕ್ಕೆ ಕೊಡಲು ಶುರು ಮಾಡಿದ್ದೇ ನಾವು ಎಂದರು.

ಸಿದ್ದರಾಮಯ್ಯ ಭಾಷಣ ಆರಂಭಕ್ಕೂ ಮೊದಲು ಸದನದ ಅವಧಿ ವಿಸ್ತರಿಸಲು ಸದಸ್ಯರು ಮನವಿ ಮಾಡಿದರು. ಸದನದಲ್ಲಿ ಜಟಾಪಟಿ ನಡೆಯಿತು. ಯತ್ನಾಳ್‌ ಮಾತನಾಡಲು ಅವಕಾಶ ಕೋರಿದರು.

ಸಿದ್ದರಾಮಯ್ಯನವರು ಮಾತನಾಡಿ ಯತ್ನಾಳ್‌ ನೀವು ಸೀನಿಯರ್‌ ಲೀಡರ್‌ ನೀವು ಹೀಗೆ ಹೇಳಿದರೆ ಹೇಗೆ ಎಂದರು. ಆಗ ನಮಗೆ ಏನು ಕೊಡುತ್ತಿಲ್ಲ ಎಂದು ಯತ್ನಾಳ್‌ ಹೇಳಿದರು.

ಮಾಧುಸ್ವಾಮಿಯವರು ಮಧ್ಯಪ್ರವೇಶಿಸಿ ಆಡಳಿತ ಪಕ್ಷ ನಾವು ಉತ್ತರ ಕೊಡಲು ಇದ್ದೇವೆ. ಮಾತನಾಡಲು ಅಲ್ಲ ಸುಮ್ಮನಿರಿ ಎಂದು ಯತ್ನಾಳ್‌ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...