Homeಕರ್ನಾಟಕಕನ್ನಡಿಗರ ಸಹನೆ ಪರೀಕ್ಷಿಸಬೇಡಿ, ಪರಿಷ್ಕೃತ ಪಠ್ಯ ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ

ಕನ್ನಡಿಗರ ಸಹನೆ ಪರೀಕ್ಷಿಸಬೇಡಿ, ಪರಿಷ್ಕೃತ ಪಠ್ಯ ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ

“ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದವರು ಎನ್ನುವ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ

- Advertisement -
- Advertisement -

“ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಾಕಿರುವ ಅವರು, “ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ” ಎಂದು ಎಚ್ಚರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ, ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ’ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ ಸಚಿವರೇ? ಎಂದು ಪ್ರಶ್ನಿಸಿದ್ದಾರೆ.

ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಸಚಿವರೇ? ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದವರು ಎನ್ನುವ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ ಎಂದಿದ್ದಾರೆ.

ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದಲ್ಲಿರುವ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಪ್ರಶ್ನಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...