Homeಕರ್ನಾಟಕತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಆರೋಪಿಗಳು ಪೊಲೀಸ್‌ ವಶಕ್ಕೆ

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಆರೋಪಿಗಳು ಪೊಲೀಸ್‌ ವಶಕ್ಕೆ

- Advertisement -
- Advertisement -

ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಡೆತ್ ನೋಟ್ ಆಧಾರದಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಶಿರಾ ತಾಲೂಕಿನ ಲಕ್ಕನಹಳ್ಳಿಯ ಗರೀಬ್ ಸಾಬ್(36) ಮತ್ತು ಪತ್ನಿ ಸುಮಯ್ಯಾ (32) ಮಕ್ಕಳಾದ ಹಾಜಿರಾ (14) ಮುಹಮ್ಮದ್ ಶುಭಾನ್ (10) ಹಾಗೂ ಮುಹಮ್ಮದ್ ಮುನೀರ್ (8) ಆತ್ಮಹತ್ಯೆ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದ್ದರು.

ವರದಿಯ ಪ್ರಕಾರ ಗರೀಬ್ ಸಾಬ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಕ್ಕಳ ಮೃತದೇಹ ಹಾಸಿಗೆ ಮೇಲೆ ಕಂಡು ಬಂದಿದೆ. ದಂಪತಿ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು.

ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಸಾಲಬಾಧೆ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಮೃತದೇಹಗಳನ್ನು ವೀಕ್ಷಿಸಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್‌, ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ತೆಗದುಕೊಂಡು, ಬಡ್ಡಿ ವ್ಯವಹಾರವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯಲಿದೆ ಎಂದು ಹೇಳಿದ್ದಾರೆ.

ನಗರ ಮತ್ತು ಜಿಲ್ಲೆಯಲ್ಲಿ ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಜಾಸ್ತಿಯಾಗಿದೆ. ಈಗಾಗಲೇ ಮೀಟರ್ ಬಡ್ಡಿ ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಇದನ್ನು ಓದಿ: ಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...