Homeಕರ್ನಾಟಕಹುಲಿ ಸಂರಕ್ಷಕ ಡಿವಿ ಗಿರೀಶ್‌‌ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ; ಘಟನೆ ಕ್ಯಾಮರಾದಲ್ಲಿ ಸೆರೆ

ಹುಲಿ ಸಂರಕ್ಷಕ ಡಿವಿ ಗಿರೀಶ್‌‌ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ; ಘಟನೆ ಕ್ಯಾಮರಾದಲ್ಲಿ ಸೆರೆ

- Advertisement -
- Advertisement -

ಪ್ರಖ್ಯಾತ ವನ್ಯಜೀವಿ ಕಾರ್ಯಕರ್ತ ಡಿವಿ ಗಿರೀಶ್‌ ಮತ್ತು ಅವರ ಸ್ನೇಹಿತರ ಮೇಲೆ ಆಗಸ್ಟ್ 30 ರಂದು ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಶಾಂತವೇರಿಯಲ್ಲಿ ಕುಡಿದ ಅಮಲಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಿರೀಶ್ ಹಾಗೂ ಅವರ ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಮೀಸಲು ಅರಣ್ಯದಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಮೇಲೆ ಈ ದಾಳಿ ನಡೆಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಗೆ ಸಂಬಂಧಿಸಿದ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ನಾಲ್ಕು ಜನರು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಚಿಕ್ಕಮಗಳೂರು ಎಸ್‌ಪಿ ಅಕ್ಷಯ್ ಎಂಎಚ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್‌ ಹೈಕೋರ್ಟ್ ವಿವಾದಾತ್ಮಕ ನಿಲುವು

ಡಿವಿ ಗಿರೀಶ್‌ ಅವರು ವೈಲ್ಡ್ ಕ್ಯಾಟ್-ಸಿ ಎಂಬ ಎನ್‌ಜಿಒದ ಸಂಚಾಲಕರಾಗಿದ್ದು ಭದ್ರಾ ಹುಲಿ ಸಂರಕ್ಷಿತ ಪ್ರದೇಶವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಪ್ರತಿಷ್ಠಿತ ಆರ್‌ಬಿಎಸ್ ‘ಹುಲಿಯನ್ನು ರಕ್ಷಿಸಿ’ ಪ್ರಶಸ್ತಿಯನ್ನು ಪಡೆದಿದ್ದಾರೆ. ಅವರು ತನ್ನ ಸ್ನೇಹಿತರು ಮತ್ತು ಸ್ನೇಹಿತನ ಮಗಳೊಂದಿಗೆ ಕೆಮ್ಮನಗುಂಡಿ ಬಳಿಯ ಎಸ್ಟೇಟ್‌ನಿಂದ ಶಾಂತವೇರಿಯ ಕಡೆಗೆ ಜೀಪಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ.

ಶಾಂತವೇರಿಯಲ್ಲಿ, ಮದ್ಯಪಾನ ಮಾಡಿದ್ದ ಎಂಟು ಮಂದಿ ಯುವಕರು ಗಿರೀಶ್‌ ಅವರೊಂದಿಗೆ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಬಗ್ಗೆ ಅಸಭ್ಯವಾದ ಮಾತುಗಳನ್ನು ಆಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಗಿರೀಶ್‌ ಮತ್ತು ಅವರ ಸ್ನೇಹಿತ ಯುವಕರಿಗೆ ತಾಕೀತು ಮಾಡಿ ಅವರನ್ನು ಅಲ್ಲಿಂದ ಓಡಿಸಿದ್ದರು.

ಇದನ್ನೂ ಓದಿ: ಕಾರವಾರದಲ್ಲಿ ಹವಳ ದ್ವೀಪದ ಗಿಡುಗ ಕಡಲಾಮೆ ಕಳೇಬರ ಪತ್ತೆ!

ನಂತರ ಆರೋಪಿಗಳು ತಮ್ಮ ಬೈಕ್‌ಗಳ ಮೂಲಕ ಗಿರೀಶ್‌ ಅವರು ಪ್ರಯಾಣಿಸುತ್ತಿದ್ದ ಜೀಪ್ ಅನ್ನು ಹಿಂಬಾಲಿಸಿ, ಅವರನ್ನು ತಡೆದು, ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅವರನ್ನು ಹೊರಗೆಳೆದು ಹಲ್ಲೆ ಕೂಡಾ ಮಾಡಿದ್ದಾರೆ. ಹಲ್ಲೆ ನಡೆಸಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಡಿಯೊದಲ್ಲಿ ಆರೋಪಿಗಳು ಗಿರೀಶ್‌ ಮತ್ತು ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸುವುದನ್ನು ಕಾಣಬಹುದಾಗಿದೆ. ಅವರ ಮೇಲೆ ಹಲ್ಲೆ ಇನ್ನೂ ಹೆಚ್ಚಾಗುತ್ತಿದ್ದಾಗ ಸ್ಥಳೀಯರು ಮಧ್ಯಪ್ರವೇಶಿಸಿ ತಡೆದಿದ್ದಾರೆ. ಹಲ್ಲೆಯಿಂದಾಗಿ ಗಿರೀಶ್ ಮತ್ತು ಅವರ ಸ್ನೇಹಿತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

“ಆರೋಪಿಗಳು ನೆರೆಯ ಗ್ರಾಮದವರಾಗಿದ್ದಾರೆ. ಐಪಿಸಿಯ ಸೆಕ್ಷನ್‌ಗಳ ಹೊರತಾಗಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ 12 (ಲೈಂಗಿಕ ಉದ್ದೇಶದಿಂದ ವರ್ತಿಸುವುದು) ಮತ್ತು 18 (ಅಪರಾಧ ಮಾಡುವ ಪ್ರಯತ್ನ) ಅಡಿಯಲ್ಲಿ ಎಂಟು ಜನರ ವಿರುದ್ಧ  ಪ್ರಕರಣ ದಾಖಲಿಸಲಾಗಿದೆ” ಎಂದು ಚಿಕ್ಕಮಗಳೂರು ಎಸ್‌ಪಿ ಅಕ್ಷಯ್‌ ಎಂಎಚ್‌‌ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...