Homeಮುಖಪುಟಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ...

ಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ 5 ದಿನಗಳ ಗಡುವು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಳೆದ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಭಟನಾಕಾರರತ್ತ ತಿರುಗಿಯೂ ನೋಡುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸಿರುವ ಕ್ರೀಡಾಪಟುಗಳು, ಪ್ರತಿಭಟನೆಯ ಭಾಗವಾಗಿ ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದರು.

ಈ ಕುಸ್ತಿಪಟುಗಳು ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಭಾನುವಾರ ಸಂಸತ್‌ ಭವನಕ್ಕೆ ತೆರಳಿ ‘ಮಹಿಳಾ ಮಹಾ ಪಂಚಾಯತ್’ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಮಾರ್ಗ ಮಧ್ಯೆಯೇ ತಡೆದು, ಪದಕ ವಿಜೇತ ಕ್ರೀಡಾಪುಗಳನ್ನು ದಾರಿಯಲ್ಲಿ ಎಳೆದಾಡಿ ಬಹಳ ಕೆಟ್ಟದಾಗಿ ನಡೆಸಿಕೊಂಡರು. ಅಷ್ಟೇ ಅಲ್ಲದೇ ಕ್ರೀಡಾಪಟುಗಳ ವಿರುದ್ಧ ಕೇಸ್‌ಗಳನ್ನು ಹಾಕಿ ಕೆಲ ಕಾಲ ಬಂಧನ ಕೂಡ ಮಾಡಲಾಯಿತು. ಆನಂತರ ಪೊಲೀಸರು ಅವರಿಗೆ ಜಂತ‌ ಮಂತರ್‌ಗೆ ತೆರಳಲು ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

‘ಬ್ರಿಜ್‌ಭೂಷಣ್ ಸಿಂಗ್ ವಿರುದ್ಧದ ನಮ್ಮ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ’ ಎಂದು ಆರೋಪಿಸಿದ್ದ ಪ್ರತಿಭಟನಕಾರರು, ತಮ್ಮ ಸಾಧನೆಗೆ ಸಂದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕುತ್ತೇವೆ. ಬಳಿಕ ಇಂಡಿಯಾ ಗೇಟ್ ಬಳಿ ಆಮರಣ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದರು.

2016ರ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಈ ಬಗ್ಗೆ ಟ್ವಿಟ್ ಮಾಡಿದ್ದರು. ಇತರ ಕುಸ್ತಿಪಟುಗಳು ಈ ಟ್ವಿಟ್ ಅನ್ನು ಹಂಚಿಕೊಂಡಿದ್ದರು.

”ನಾವು ಗೆದ್ದಿಕೊಂಡಿರುವ ಈ ಪದಕಗಳು ಗಂಗೆಯಷ್ಟೇ ಪವಿತ್ರವಾಗಿವೆ” ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಸಾಕ್ಷಿ ಮಲಿಕ್ ಟ್ವೀಟ್‌ನಲ್ಲಿ ಏನು ಹೇಳಿದ್ದಾರೆ?

”ಈ ಪದಕಗಳು ಇಡೀ ದೇಶದ ಪಾಲಿಗೂ ಪವಿತ್ರವಾಗಿವೆ. ಆದರೆ, ತಪ್ಪು ಎಸಗಿರುವ ವ್ಯಕ್ತಿಯ ಪರವಾಗಿ ನಿಲ್ಲುತ್ತಿರುವ ವ್ಯವಸ್ಥೆಯೊಂದರ ಮುಖವಾಡವಾದಂತೆ ಈ ಪದಕಗಳನ್ನು ಬಳಸುವ ಬದಲು ಅವುಗಳನ್ನು ಕೊರಳಲ್ಲಿ ಹಾಕುವ ಬದಲು ಪವಿತ್ರವಾದ ಗಂಗಾ ನದಿಯೇ ಹೆಚ್ಚು ಸೂಕ್ತವಾದ ಸ್ಥಳ” ಎಂದು ತಿಳಿಸಿದ್ದಾರೆ.

”ದೇಶಕ್ಕಾಗಿ ಹುತಾತ್ಮರಾದವರ ಸ್ಮರಣೆಗಾಗಿ ಇಂಡಿಯಾ ಗೇಟ್ ನಿರ್ಮಿಸಲಾಗಿದೆ. ಆ ಹುತಾತ್ಮರಷ್ಟು ನಾವು ಪೂಜನೀಯರಲ್ಲ. ಆದರೆ, ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾಗ, ನಮ್ಮ ಯೋಧರಷ್ಟೇ ನಾವೂ ಭಾವುಕರಾಗಿದ್ದೆವು” ಎಂದಿದ್ದಾರೆ.

”ನಮಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಬಂಧಿಸುವ ಬದಲು, ವ್ಯವಸ್ಥೆಯು ಸಂತ್ರಸ್ತರನ್ನೇ ಹೆದರಿಸಲು ಮತ್ತು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ’ ಎಂದೂ ಹೇಳಿದ್ದಾರೆ.

ಕುಸ್ತಿಪಟುಗಳಿಗೆ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುವ ಅವಕಾಶ ನೀಡಲ್ಲ ಎಂದ ಪೊಲೀಸರು

”ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ. ಪ್ರತಿಭಟನೆ ನಡೆಸಲು ರಾಷ್ಟ್ರೀಯ ಸ್ಮಾರಕವು ಪ್ರತಿಭಟನೆ ನಡೆಸುವಂತಹ ಸ್ಥಳವಲ್ಲ. ಧರಣಿ ನಡೆಸಲು ಬೇರೆ ಸ್ಥಳದ ಬಗ್ಗೆ ಮಾಹಿತಿ ನೀಡಲಾಗುವುದು” ಎಂದು ಪೊಲೀಸ್ ಮೂಲಗಳು ಮಂಗಳವಾರ ಹೇಳಿವೆ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದು, ”ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಕ್ಕೆ ಅನುಮತಿ ಕೋರಿ ಅವರು (ಕುಸ್ತಿಪಟುಗಳು) ಈ ವರೆಗೆ ನಮಗೆ ಮನವಿ ಸಲ್ಲಿಸಿಲ್ಲ. ಪ್ರತಿಭಟನೆ ನಡೆಸುವ ಸಂಬಂಧ ಅವರು ಡಿಸಿಪಿಗೆ ಮನವಿ ಸಲ್ಲಿಸಿದ ನಂತರ ನಿರ್ಧಾರ ತಿಳಿಸಲಾಗುವುದು” ಎಂದು ಹೇಳಿದ್ದಾರೆ.

ರಾಮಲೀಲಾ ಮೈದಾನ ಮತ್ತು ಬುರಾರಿಯಲ್ಲಿ ಪ್ರತಿಭಟನೆ ನಡೆಸುವಂತೆ ದೆಹಲಿ ಪೊಲೀಸರು ಸಲಹೆ ನೀಡುವ ಸಾಧ್ಯತೆ ಇದೆ ಎಂದು ಇವೇ ಮೂಲಗಳು ಹೇಳಿವೆ.

ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ದೂರು:

”ಮಹಿಳಾ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಾಗಾಗಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಷ್ಟ್ರೀ ಯ ಮಾನವ ಹಕ್ಕುಗಳ ಆಯೋಗಕ್ಕೆ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ದೂರು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...